Shocking News: ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿಗೆ ಹೃದಯಾಘಾತ; ಶಾಕಿಂಗ್ ವಿಡಿಯೋ ವೈರಲ್

ರಾಜಸ್ಥಾನ ಶಾಲೆಯೊಂದರಲ್ಲಿ 16 ವರ್ಷದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಭಯಾನಕ ಘಟನೆಯನ್ನು ಸಿಸಿಟಿವಿ ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ. ಬಾಲಕ ತನ್ನ ಚೀಲವನ್ನು ಭುಜದ ಮೇಲೆ ತೂಗುಹಾಕಿಕೊಂಡು ಶಾಲೆಯ ಆವರಣದೊಳಗೆ ನಡೆಯುತ್ತಿದ್ದಾಗ ಆತ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ.

Shocking News: ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿಗೆ ಹೃದಯಾಘಾತ; ಶಾಕಿಂಗ್ ವಿಡಿಯೋ ವೈರಲ್
ಹೃದಯಾಘಾತ
Follow us
ಸುಷ್ಮಾ ಚಕ್ರೆ
|

Updated on: Jul 12, 2024 | 9:26 PM

ಜೈಪುರ: ರಾಜಸ್ಥಾನದ ದೌಸಾದ ಖಾಸಗಿ ಶಾಲೆಯೊಂದರಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯೊಂದರಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬ ಶಾಲೆಯ ಕಾರಿಡಾರ್‌ನಲ್ಲಿ ಹಠಾತ್ ಆಗಿ ಕುಸಿದು ಬಿದ್ದ ದುರಂತ ಸಂಭವಿಸಿದೆ. ಆ ಬಾಲಕ ತನ್ನ ಶಾಲಾ ಬ್ಯಾಗನ್ನು ಹೊತ್ತೊಯ್ಯುತ್ತಿದ್ದಾಗ ಪ್ರಜ್ಞೆ ತಪ್ಪಿ ಬಿದ್ದು ದುರಂತ ಸಾವನ್ನಪ್ಪಿದ್ದಾನೆ. ಅವನು ಮಾರಣಾಂತಿಕ ಹೃದಯಾಘಾತದಿಂದ ಬಳಲುತ್ತಿದ್ದ ಎಂದು ವರದಿಗಳು ತಿಳಿಸಿವೆ. ಈ ಘಟನೆ ಶಾಲೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಆ ಹುಡುಗನು ತನ್ನ ಬ್ಯಾಗ್ ಅನ್ನು ಭುಜದ ಮೇಲೆ ತೂಗುಹಾಕಿಕೊಂಡು ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ, ಆತ ಕುಸಿದುಬಿದ್ದಿದ್ದಾನೆ. ಆಗ ಅಕ್ಕಪಕ್ಕದಲ್ಲಿದ್ದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಓಡಿಹೋಗಿ ಆತನ ಸಹಾಯಕ್ಕೆ ಧಾವಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆತನ ಪ್ರಾಣ ಹೋಗಿತ್ತು.

ಇದನ್ನೂ ಓದಿ: Crime News: ಪ್ರೇಮಿಯ ಮೇಲಿನ ಕೋಪಕ್ಕೆ 7 ವರ್ಷದ ಮಗುವನ್ನು ಗೋಡೆಗೆ ಬಡಿದು ಕೊಲೆ

ವಿದ್ಯಾರ್ಥಿಯ ಅಕಾಲಿಕ ಮರಣದ ಸುದ್ದಿ ಸಮುದಾಯವನ್ನು ಬೆಚ್ಚಿಬೀಳಿಸಿದೆ. ಅಷ್ಟು ಚಿಕ್ಕ ವಯಸ್ಸಿನಲ್ಲೇ ಬಾಲಕ ಸಾವನ್ನಪ್ಪಿರುವುದು ಆಘಾತ ಮೂಡಿಸಿದೆ. ಅವನ ಕುಟುಂಬವು ಮರಣೋತ್ತರ ಪರೀಕ್ಷೆಯನ್ನು ನಿರಾಕರಿಸಿದೆ ಎಂದು ವರದಿಯಾಗಿದೆ.

ಶಾಲೆಯ ಆಡಳಿತ ಮಂಡಳಿ ಆ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಈ ಘಟನೆಯ ತನಿಖೆಗೆ ಅಧಿಕಾರಿಗಳೊಂದಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ