ದೆಹಲಿ: 6 ಸ್ನೇಹಿತರಿಂದ ಅಪ್ರಾಪ್ತ ಬಾಲಕನ ಕೊಲೆ

ಆರು ಮಂದಿ ಸ್ನೇಹಿತರು ಸೇರಿ ಅಪ್ರಾಪ್ತ ಬಾಲಕನ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತನನ್ನು 17 ವರ್ಷದ ವಿವೇಕ್ ಎಂದು ಗುರುತಿಸಲಾಗಿದೆ. ಸ್ನೇಹಿತರಲ್ಲಿ ಒಬ್ಬಾತ ಮದ್ಯಪಾನ ಮಾಡಲೆಂದು ಆತನನ್ನು ಆಹ್ವಾನಿಸಿದ್ದ ಬಳಿಕ ಆರು ಮಂದಿ ಸ್ನೇಹಿತರು ಸೇರಿ ಚಾಕು ಬಳಸಿ, ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ.

ದೆಹಲಿ: 6 ಸ್ನೇಹಿತರಿಂದ ಅಪ್ರಾಪ್ತ ಬಾಲಕನ ಕೊಲೆ
ಪೊಲೀಸ್
Follow us
ನಯನಾ ರಾಜೀವ್
|

Updated on:Dec 16, 2023 | 3:39 PM

ಆರು ಮಂದಿ ಸ್ನೇಹಿತರು ಸೇರಿ ಅಪ್ರಾಪ್ತ ಬಾಲಕನ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತನನ್ನು 17 ವರ್ಷದ ವಿವೇಕ್ ಎಂದು ಗುರುತಿಸಲಾಗಿದೆ. ಸ್ನೇಹಿತರಲ್ಲಿ ಒಬ್ಬಾತ ಮದ್ಯಪಾನ ಮಾಡಲೆಂದು ಆತನನ್ನು ಆಹ್ವಾನಿಸಿದ್ದ ಬಳಿಕ ಆರು ಮಂದಿ ಸ್ನೇಹಿತರು ಸೇರಿ ಚಾಕುವಿನಿಂದ ತಿವಿದು, ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ.

ಸತ್ಪುಲಾ ಪಾರ್ಕ್​ಗೆ ಕರೆದೊಯ್ದು ಹತ್ಯೆ ಮಾಡಲಾಗಿದೆ. ಐವರು ಆರೋಪಿಗಳು ಉದ್ಯಾನದಲ್ಲಿ ಕಾದು ಕುಳಿತಿದ್ದು, ವಿವೇಕ್ ಒಳಗೆ ಬಂದ ತಕ್ಷಣ  ಚಾಕು ಮತ್ತು ಇಟ್ಟಿಗೆಗಳಿಂದ ಹಲ್ಲೆ ನಡೆಸಿದ್ದಾರೆ.

ದೇಹದ ಮುಖ, ಕುತ್ತಿಗೆ, ಎದೆ ಮತ್ತು ಹೊಟ್ಟೆಯ ಮೇಲೆ ಚಾಕು ಗಾಯಗಳಿವೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ಹೇಳಿದ್ದಾರೆ. ಶುಕ್ರವಾರ ಬೆಳಗ್ಗೆ 7.30ರ ಸುಮಾರಿಗೆ ಸತ್ಪುಲಾ ಪಾರ್ಕ್‌ನಲ್ಲಿ ಪತ್ತೆಯಾದ ಮೃತದೇಹದ ಕುರಿತು ಪಿಸಿಆರ್ ಕರೆ ಬಂದಿತ್ತು. ಖಿರ್ಕಿ ಗ್ರಾಮದ ಬಳಿ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ, ಹೊಟ್ಟೆ, ಎದೆ, ಕುತ್ತಿಗೆ ಮತ್ತು ಮುಖದ ಮೇಲೆ ಗಾಯದ ಗುರುತುಗಳನ್ನು ಹೊತ್ತಿರುವುದು ಕಂಡುಬಂದಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರ: ಜಗಳ ಅತಿರೇಕಕ್ಕೇರಿ ಗೆಳತಿ ಕಾಲಿನ ಮೇಲೆ ಕಾರು ಹತ್ತಿಸಿದ ಪ್ರಿಯಕರ

ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿವೇಕ್​ ವಿರುದ್ಧ ಹಗೆ ಸಾಧಿಸಲು ಈ ಸಂಚು ರೂಪಿಸಿದ್ದರು. ಬಾಲಕ ಮನೆಯಿಂದ ಹೊರಹೋಗುವಾಗ ತಂದೆಯನ್ನು ಭೇಟಿಯಾಗಲು ಹೋಗುವುದಾಗಿ ಸುಳ್ಳು ಹೇಳಿದ್ದ, ಹಿಂದಿರುಗದಿದ್ದಾಗ ಹಲವು ಬಾರಿ ಕರೆ ಮಾಡಿದ್ದಾರೆ ಆದರೆ ಮೊಬೈಲ್ ಸ್ವಿಚ್ಡ್​ ಆಫ್ ಆಗಿತ್ತು ಎಂದು ಪೋಷಕರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  

Published On - 3:34 pm, Sat, 16 December 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್