Crime News: ಬಾಲಕನನ್ನು ಮದುವೆಯಾಗಿ ಜೈಲು ಸೇರಿದ ಯುವತಿ

ಅಲ್ಲಿಯವರೆಗೂ ಇಬ್ಬರೂ ಅಂದುಕೊಂಡಂತೆ ಎಲ್ಲವೂ ನಡೆಯಿತು. ಆದರೆ ಮಗನಿಗೆ ಮದುವೆಯಾಗಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಹುಡುಗನ ಪೋಷಕರು ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದಾರೆ.

Crime News: ಬಾಲಕನನ್ನು ಮದುವೆಯಾಗಿ ಜೈಲು ಸೇರಿದ ಯುವತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 01, 2021 | 10:28 PM

ಸಾಮಾನ್ಯವಾಗಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪುರುಷರ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿರುತ್ತವೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಯುವತಿಯೊಬ್ಬಳು ಪೋಕ್ಸೊ ಕಾಯ್ದೆಯಡಿ ಬಂಧಿತಳಾಗಿದ್ದಾಳೆ. ಅದು ಪ್ರೀತಿ-ಪ್ರೇಮ-ವಿವಾಹದ ವಿಚಾರವಾಗಿ ಎಂಬುದು ವಿಶೇಷ. ಹೌದು, ಇಂತಹದೊಂದು ವಿಚಿತ್ರ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿಯಲ್ಲಿ ನಡೆದಿದೆ.

ಅವರಿಬ್ಬರೂ ಪೆಟ್ರೋಲ್​ ಬಂಕ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಡುವಿನ ಸ್ನೇಹ ಪ್ರೀತಿಗೆ ತಿರುಗಿತು. ಒಂದೇ ಸ್ಥಳದಲ್ಲಿ ಕೆಲಸ ಜೊತೆಯಾಗಿ ಓಡಾಟ…ಹೀಗೆ ಎಲ್ಲಾ ಪ್ರೇಮಿಗಳಂತೆ ಕಳೆದ ಒಂದು ವರ್ಷದಿಂದ ಅವರಿಬ್ಬರೂ ಕೂಡ ಪ್ರೇಮಲೋಕದಲ್ಲಿ ತೇಲುತ್ತಿದ್ದರು. ಈ ನಡುವೆ ಪ್ರಿಯತಮ ಅರ್ನಿಯಾ ಸಂಬಂಧಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ.

ಇದರಿಂದ ನೊಂದಿದ್ದ ಯುವತಿಯು ತನ್ನ ಪ್ರಿಯತಮನನ್ನು ಕಾಣಲು ಆಸ್ಪತ್ರೆಗೆ ಹೋಗಿದ್ದಾಳೆ. ಹೀಗೆ ಯೋಗ ಕ್ಷೇಮ ವಿಚಾರಿಸಲು ಹೋದ ಯುವತಿ ತನ್ನ ಮದುವೆಯ ವಿಚಾರ ಮುಂದಿಟ್ಟಿದ್ದಾಳೆ. ಮನೆಯಲ್ಲಿ ಪೋಷಕರು ಮದುವೆಗೆ ಒತ್ತಾಯಿಸುತ್ತಿದ್ದಾರೆ. ನೀ ಏನಾದರೂ ಮಾಡು ಎಂದು ಕೇಳಿಕೊಂಡಿದ್ದಳು. ಅಷ್ಟೇ ಅಲ್ಲ, ಸ್ಪಾಟ್​ನಲ್ಲೇ ಇಬ್ಬರು ಮದುವೆ ಆಗಿಬಿಡೋಣ ಎಂಬ ದೊಡ್ಡ ನಿರ್ಧಾರ ಕೂಡ ತೆಗೆದುಕೊಂಡಿದ್ದಾರೆ. ಆ ಬಳಿಕ ದಿಂಡಿಗಲ್ ಜಿಲ್ಲೆಗೆ ಓಡಿಹೋಗಿ ಇಬ್ಬರು ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟರು.

ಅಲ್ಲಿಯವರೆಗೂ ಇಬ್ಬರೂ ಅಂದುಕೊಂಡಂತೆ ಎಲ್ಲವೂ ನಡೆಯಿತು. ಆದರೆ ಮಗನಿಗೆ ಮದುವೆಯಾಗಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಹುಡುಗನ ಪೋಷಕರು ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಈ ದೂರಿನಲ್ಲಿ ತಮ್ಮ ಮಗ ಇನ್ನೂ ಅಪ್ರಾಪ್ತ ಎಂದು ತಿಳಿಸಿದ್ದರು. ಅದರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ವರ ಇನ್ನೂ ಬಾಲಕ ಎಂಬುದು ತಿಳಿದು ಬಂದಿದೆ.

ಹೌದು, ಕೇವಲ 17 ವರ್ಷದ ಹುಡಗನನ್ನು 19 ವರ್ಷದ ಯುವತಿ ಮದುವೆಯಾಗಿದ್ದಳು. ಇಬ್ಬರೂ ಇಲ್ಲಿ ವಯಸ್ಸನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ ಪ್ರೇಮಕಥೆಯ ನಡುವೆ ಎಂಟ್ರಿ ಕೊಟ್ಟ ಬಾಲಕನ ಕುಟುಂಬಸ್ಥರು ಇದೀಗ ಇಡೀ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ಅವರ ದೂರಿನಂತೆ ಇದೀಗ 19 ವರ್ಷ ವಯಸ್ಸಿನ ಯುವತಿ ಪೋಕ್ಸೊ ಕಾಯ್ದೆ ಸೆಕ್ಷನ್ 5 (1) (ಲೈಂಗಿಕ ದೌರ್ಜನ್ಯ) ಮತ್ತು ಸೆಕ್ಷನ್ 6 ಅಡಿಯಲ್ಲಿ ಜೈಲು ಪಾಲಾಗಿದ್ದಾಳೆ.

ಇದನ್ನೂ ಓದಿ: IPL 2022: ಐಪಿಎಲ್ ಹೊಸ ತಂಡಗಳಿಗೆ ಮೂಲ ಬೆಲೆ ಫಿಕ್ಸ್​: ಇಷ್ಟು ಮೊತ್ತ ನೀಡಿ ಖರೀದಿಸುವವರು ಯಾರು?

ಇದನ್ನೂ ಓದಿ: Cristiano Ronaldo: ಮ್ಯಾಚೆಂಸ್ಟರ್ ಯುನೈಟೆಡ್ ಒಪ್ಪಂದ: ಪ್ರತಿ ಸೆಕೆಂಡ್​ಗೆ ಕ್ರಿಸ್ಟಿಯಾನೊ ರೊನಾಲ್ಡೊ ಪಡೆಯುವ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: Afghanistan Cricket: ಅಫ್ಘಾನಿಸ್ತಾನದ ಕ್ರಿಕೆಟ್ ಕುರಿತಾಗಿ ಹೊಸ ಆದೇಶ ಹೊರಡಿಸಿದ ತಾಲಿಬಾನ್

(19-year-old woman arrested under POCSO act for sexually assaulting minor)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ