AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತರೊಂದಿಗೆ ಜನ್ಮದಿನ ಆಚರಿಸಿಕೊಂಡಿದ್ದ ಯುವತಿ ಮರುದಿನ ಬೆಡ್​ ರೂಮ್​ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

ಗೆಳೆಯರೊಂದಿಗೆ ಸಂತೋಷದಿಂದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾಳೆ. ಅಲದೇ ಸ್ನೇಹಿತರೊಂದಿಗೆ ಸಿನಿಮಾ ನೋಡಿ ಎಂಜಾಯ್ ಮಾಡಿದ್ದಾಳೆ. ಆದ್ರೆ, ತಂದೆ-ತಾಯಿ ಬಂದು ನೋಡಿದಾಗ ಆಕೆ ಬೆಡ್​ ರೂಮ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಸ್ನೇಹಿತರೊಂದಿಗೆ ಜನ್ಮದಿನ ಆಚರಿಸಿಕೊಂಡಿದ್ದ ಯುವತಿ ಮರುದಿನ ಬೆಡ್​ ರೂಮ್​ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ಹರ್ಷಿತಾ
TV9 Web
| Edited By: |

Updated on:Jan 21, 2023 | 8:11 PM

Share

ಹೈದರಾಬಾದ್​: 20 ವರ್ಷದ ಯುವತಿಯೊಬ್ಬಳು ತನ್ನ ಹುಟ್ಟುಹಬ್ಬದ ದಿನವೇ ಸಾವಿನ ಹಾದಿ ಹಿಡಿದಿದ್ದಾಳೆ. ಸ್ನೇಹಿತರೊಂದಿಗೆ ಸೇರಿ ಜನ್ಮದಿನ ಆಚರಿಸಿಕೊಂಡಿದ್ದ ಯುವತಿ ಅದೇ ದಿನ ಮಧ್ಯರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾಳೆ. ಈ ಘಟನೆ ಹೈದರಾಬಾದ್​ನ ಕುಕ್ಕಟಪಲ್ಲಿಯ ಬಾಲಾಜಿ ನಗರದಲ್ಲಿ ನಡೆದಿದ್ದು, ಮೃತಳನ್ನು ಹರ್ಷಿತಾ (20) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ದುರ್ಜನರ ಸಂಗ ಮಾಡಿ ಮಾಡದ ತಪ್ಪಿಗೆ ಜೀವ ತೆತ್ತ ಮೈಸೂರಿನ ಯುವಕ, ಸಜ್ಜನರ ಸಂಗ ಹೆಜ್ಜೇನ ಸವಿದಂತೆ ಎಂದು ಹೇಳಿದ್ದು ಇದಕ್ಕೆ

ಆಂಧ್ರ ಪ್ರದೇಶದ ಗುಂಟೂರು ಮೂಲದ ಸಾಯಿಕಿರಣ್​ ಮತ್ತು ನರ್ಮದಾ ದಂಪತಿಯ ಏಕೈಕ ಪುತ್ರಿಯಾಗಿದ್ದ ಹರ್ಷಿತಾ, ಸಿಎ ಅಧ್ಯಯನ ಮಾಡುತ್ತಿದ್ದಳು. ಹರ್ಷಿತಾ ಗುರುವಾರ ತನ್ನ ಜನ್ಮದಿನವನ್ನು ಫ್ರೆಂಡ್ಸ್​ ಜೊತೆ ಆಚರಿಸಿಕೊಂಡಿದ್ದಾಳೆ. ಅಲ್ಲದೇ ಸಿನಿಮಾಗೆ ಹೋಗಿದ್ದಳು. ಬಳಿಕ ಅಂದು ಮಧ್ಯರಾತ್ರಿ ಮನೆಯಲ್ಲಿ ಯಾರು ಇಲ್ಲದಿದ್ದಾಗ ತನ್ನ ಬೆಡ್​ ರೂಮ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ.

ಸಂಬಂಧಿಕರೊಬ್ಬರು ಮೃತಪಟ್ಟಿದ್ದರಿಂದ ತಂದೆ ಸಾಯಿಕಿರಣ್​ ಮತ್ತು ತಾಯಿ ನರ್ಮದಾ ನೆಲ್ಲೂರಿಗೆ ತೆರಳಿದ್ದರು. ಶುಕ್ರವಾರ ಬೆಳಗ್ಗೆ ವಾಪಸ್ ಮನೆಗೆ ಬಂದು ಬಾಗಿಲು ಬಡಿದಿದ್ದಾರೆ. ಎಷ್ಟೇ ಬಡಿದರು ಮಗಳು ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಸಾಯಿಕುಮಾರ್​ ಮನೆಯ ಮಾಲೀಕನ ಸಹಾಯದಿಂದ ಬಾಗಿಲು ಮುರಿದು ಬೆಡ್​ರೂಮ್​ಗೆ ಹೋಗಿ ನೋಡಿದಾಗ ಮಗಳು ಹರ್ಷಿತಾ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದನ್ನು ಪೋಷಕರು ನೋಡಿ ಆಘಾತಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ತುಮಕೂರು ಜಿಲ್ಲೆಯಲ್ಲಿ ದಾರುಣ ಘಟನೆ: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು

ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಕುಕ್ಕಟಪಲ್ಲಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಓದಿನ ಒತ್ತಡದಿಂದ ಈ ರೀತಿ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಈ ತನಿಖೆ ಕೈಗೊಂಡಿದ್ದಾರೆ.

Published On - 6:57 pm, Sat, 21 January 23

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​