ಅಶ್ಲೀಲ ವೀಡಿಯೊ ನೋಡಿ 8ರ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಮೂವರು ಬಾಲಕರು

ಫೋನ್‌ನಲ್ಲಿ ಅಶ್ಲೀಲ ವೀಡಿಯೊಗಳನ್ನು ನೋಡಿದ್ದ ಮೂವರು ಬಾಲಕರು, ಅದರಲ್ಲಿರುವಂತೆ ಮಾಡಲು ಪಕ್ಕದ ಮನೆಯ ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾರೆ. ಬಾಲಕಿ ಒಪ್ಪಿಕೊಳ್ಳದಿದ್ದಾಗ ಮೂವರು ಸೇರಿ ಬಾಲಕಿ ಕತ್ತು ಹಿಸುಕಿ ಕೊಂದಿದ್ದಾರೆ. ಬಳಿಕ ಬಾಲಕಿಯ ಶವವನ್ನು ತೆಗೆದುಕೊಂಡು ಹೋಗಿ ಬಂಡೆಗೆ ಕಟ್ಟಿ ಕೃಷ್ಣಾ ನದಿಗೆ ಎಸೆಯಲಾಗಿದೆ.

ಅಶ್ಲೀಲ ವೀಡಿಯೊ ನೋಡಿ 8ರ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ  ಮೂವರು ಬಾಲಕರು
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on: Jul 17, 2024 | 5:21 PM

ಆಂಧ್ರಪ್ರದೇಶ: ನಂದ್ಯಾಲ್ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 12 ಮತ್ತು 13 ವರ್ಷದ ಮೂವರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಾಲಕರು ಫೋನ್‌ನಲ್ಲಿ ಅಶ್ಲೀಲ ವೀಡಿಯೊಗಳನ್ನು ನೋಡಿದ್ದು, ಅದರಲ್ಲಿರುವ ದೃಶ್ಯಗಳನ್ನು ಮರುಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

ಸ್ಥಳೀಯ ದೇವಸ್ಥಾನದ ಅವರಣದಲ್ಲಿ ಈ ಹೀನಕೃತ್ಯ ನಡೆದಿದ್ದು, ಒಪ್ಪದ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿದ್ದಾರೆ. ಘೋರ ಕೃತ್ಯ ಎಸಗಿದ ಬಳಿಕ ಆರೋಪಿಯ ತಂದೆ ಮತ್ತು ಚಿಕ್ಕಪ್ಪ ಸಾಕ್ಷ್ಯ ಮರೆಮಾಚಲು ಅಪ್ರಾಪ್ತ ಬಾಲಕಿಯ ಶವವನ್ನು ತೆಗೆದುಕೊಂಡು ಹೋಗಿ ಬಂಡೆಗೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಮತ್ತು ಚಿಕ್ಕಪ್ಪನನ್ನು ಪೊಲೀಸರು ಬಂಧಿಸಿದ್ದು, ಅಪರಾಧದಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಬಾಲಕರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಸ್ತುತ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ನದಿಯಿಂದ ಬಾಲಕಿಯ ಶವವನ್ನು ಹೊರತೆಗೆಯಲು ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿದ್ದಾರೆ ಎಂದು ಆಂಧ್ರಪ್ರದೇಶದ ಗೃಹ ಸಚಿವ ವಿ ಅನಿತಾ ಘೋಷಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್