ಹರ್ಯಾಣ: ಪಕ್ಕದ ಮನೆಯ ಬಾತ್​ರೂಂನಲ್ಲಿ ಪ್ಲಾಸ್ಟಿಕ್​ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆ

ಪಕ್ಕದ ಮನೆಯ ಬಾತ್​ರೂಂನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆಯಾಗಿರುವ ಘಟನೆ ಹರ್ಯಾಣದ ಫರೀದಾಬಾದ್​ನಲ್ಲಿ ನಡೆದಿದೆ. ಅತ್ಯಾಚಾರ ಯತ್ನ ವಿಫಲವಾದ ನಂತರ ಮಗುವನ್ನು ಕೊಂದಿರುವ ಆರೋಪದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಬಾಲಕಿ ನಾಪತ್ತೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಹುಡುಕಾಟದ ವೇಳೆ ಪಕ್ಕದ ಮನೆಯ ಬಾತ್ ರೂಂನಲ್ಲಿ ಆಕೆಯ ಶವ ಪ್ಲಾಸ್ಟಿಕ್ ಚೀಲದಲ್ಲಿ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಮನೆಯು ಆರೋಪಿಗೆ ಸೇರಿದ್ದಾಗಿದೆ.

ಹರ್ಯಾಣ: ಪಕ್ಕದ ಮನೆಯ ಬಾತ್​ರೂಂನಲ್ಲಿ ಪ್ಲಾಸ್ಟಿಕ್​ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆ
ಮಗು

Updated on: Nov 16, 2023 | 9:02 AM

ಪಕ್ಕದ ಮನೆಯ ಬಾತ್​ರೂಂನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ 3 ವರ್ಷದ ಹೆಣ್ಣು ಮಗುವಿನ ಶವ ಪತ್ತೆಯಾಗಿರುವ ಘಟನೆ ಹರ್ಯಾಣದ ಫರೀದಾಬಾದ್​ನಲ್ಲಿ ನಡೆದಿದೆ. ಅತ್ಯಾಚಾರ ಯತ್ನ ವಿಫಲವಾದ ನಂತರ ಮಗುವನ್ನು ಕೊಂದಿರುವ ಆರೋಪದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ಮಂಗಳವಾರ ಮಧ್ಯಾಹ್ನ ಬಾಲಕಿ ನಾಪತ್ತೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಹುಡುಕಾಟದ ವೇಳೆ ಪಕ್ಕದ ಮನೆಯ ಬಾತ್ ರೂಂನಲ್ಲಿ ಆಕೆಯ ಶವ ಪ್ಲಾಸ್ಟಿಕ್ ಚೀಲದಲ್ಲಿ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಮನೆಯು ಆರೋಪಿಗೆ ಸೇರಿದ್ದಾಗಿದೆ.

ಮಾಹಿತಿ ಪಡೆದ ಪೊಲೀಸರು ಆರೋಪಿಯ ಮನೆಗೆ ತಲುಪಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿ ಮಾಳಿಗೆಯಿಂದ ಜಿಗಿದಿದ್ದಾನೆ. ನಂತರ ಆತನನ್ನು ಹಿಡಿದು ಬಂಧಿಸಲಾಯಿತು. ಬಾಲಕಿಯನ್ನು ಹರಿತವಾದ ಆಯುಧ ಬಳಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಯತ್ನ ವಿಫಲವಾದ ಬಳಿಕ ಆರೋಪಿ ಆಕೆಯನ್ನು ಕೊಂದಿದ್ದಾನೆ ಎಂದು ಹೇಳಲಾಗಿದೆ.ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮತ್ತಷ್ಟು ಓದಿ: ನೀನು ನನಗೆ ಬೇಕು ಅಷ್ಟೇ, ನೆಲಮಂಗಲದ ಮಹಿಳಾ ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ

ಮರಣೋತ್ತರ ಪರೀಕ್ಷೆಯ ನಂತರ ಮಗುವಿನ ದೇಹವನ್ನು ಕುಟುಂಬಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನನ್ನು ಪೊಲೀಸರು ವಿಚಾರಣೆಗೊಳಪಡಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us