ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಟ್ರಕ್ ಅಡಿ ಸಿಲುಕಿ ಮಗು ಸಾವು; ಶಾಕಿಂಗ್ ವಿಡಿಯೋ ವೈರಲ್

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಸ್ಟ್ರೀಟ್‌ನಲ್ಲಿ ಆಟವಾಡುತ್ತಿದ್ದಾಗ ಟ್ರಕ್‌ನಡಿ ಸಿಲುಕಿ 3 ವರ್ಷದ ಮಗು ನಜ್ಜುಗುಜ್ಜಾಗಿದೆ. ಪರಾರಿಯಾಗಿರುವ ಟ್ರಕ್ ಚಾಲಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ಘಟನೆಯ ವಿವರ ತಿಳಿಯಲು ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಟ್ರಕ್ ಅಡಿ ಸಿಲುಕಿ ಮಗು ಸಾವು; ಶಾಕಿಂಗ್ ವಿಡಿಯೋ ವೈರಲ್
ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಟ್ರಕ್ ಅಡಿ ಸಿಲುಕಿ ನುಜ್ಜುಗುಜ್ಜಾದ ಮಗು
Follow us
ಸುಷ್ಮಾ ಚಕ್ರೆ
|

Updated on: Nov 28, 2024 | 8:59 PM

ಗಾಜಿಯಾಬಾದ್: ದುರಂತ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಗಾಜಿಯಾಬಾದ್‌ನ ವೇವ್ ಸಿಟಿಯಲ್ಲಿ ಇಂದು 3 ವರ್ಷದ ಮಗುವಾಗಿದ್ದ ಆರವ್ ಬೀದಿಯಲ್ಲಿ ಆಟವಾಡುತ್ತಿದ್ದಾಗ ಟ್ರಕ್‌ನಡಿ ಸಿಲುಕಿ ಸಾವನ್ನಪ್ಪಿದ್ದಾನೆ. ಈ ಅಪಘಾತದ ನಂತರ, ಆರವ್​ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು.

ಇನ್ನು, ಪೊಲೀಸರು ಆ ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದು, ಟ್ರಕ್ ಚಾಲಕ ತಲೆಮರೆಸಿಕೊಂಡಿದ್ದಾನೆ. ಈ ನಡುವೆ ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆ ವರದಿಗಾಗಿ ಕಳುಹಿಸಲಾಗಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಸರಣಿ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗು ಆಟವಾಡುತ್ತಿದ್ದಾಗ ಟ್ರಕ್ ಅಡಿ ಸಿಲುಕಿ ನಜ್ಜುಗುಜ್ಜಾದ ಕ್ಷಣವನ್ನು ವೀಡಿಯೊದಲ್ಲಿ ಕಾಣಬಹುದು. ಟ್ರಕ್ ವೇಗವಾಗಿ ಹೋದ ನಂತರ ಒಬ್ಬ ವ್ಯಕ್ತಿಯು ಮಗುವಿನ ಬಳಿಗೆ ಬಂದು ಆ ಮಗುವನ್ನು ಎತ್ತಿ ಪರೀಕ್ಷಿಸಿದನು.

ಈಗಾಗಲೇ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?
Daily Devotional: ಹಲ್ಲಿನ ಮೇಲೆ ಹಲ್ಲು ಬಂದರೆ ಅದೃಷ್ಟವೇ?
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?