
ಗಾಜಿಯಾಬಾದ್: ದುರಂತ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಗಾಜಿಯಾಬಾದ್ನ ವೇವ್ ಸಿಟಿಯಲ್ಲಿ ಇಂದು 3 ವರ್ಷದ ಮಗುವಾಗಿದ್ದ ಆರವ್ ಬೀದಿಯಲ್ಲಿ ಆಟವಾಡುತ್ತಿದ್ದಾಗ ಟ್ರಕ್ನಡಿ ಸಿಲುಕಿ ಸಾವನ್ನಪ್ಪಿದ್ದಾನೆ. ಈ ಅಪಘಾತದ ನಂತರ, ಆರವ್ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು.
ಇನ್ನು, ಪೊಲೀಸರು ಆ ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದು, ಟ್ರಕ್ ಚಾಲಕ ತಲೆಮರೆಸಿಕೊಂಡಿದ್ದಾನೆ. ಈ ನಡುವೆ ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆ ವರದಿಗಾಗಿ ಕಳುಹಿಸಲಾಗಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಸರಣಿ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗು ಆಟವಾಡುತ್ತಿದ್ದಾಗ ಟ್ರಕ್ ಅಡಿ ಸಿಲುಕಿ ನಜ್ಜುಗುಜ್ಜಾದ ಕ್ಷಣವನ್ನು ವೀಡಿಯೊದಲ್ಲಿ ಕಾಣಬಹುದು. ಟ್ರಕ್ ವೇಗವಾಗಿ ಹೋದ ನಂತರ ಒಬ್ಬ ವ್ಯಕ್ತಿಯು ಮಗುವಿನ ಬಳಿಗೆ ಬಂದು ಆ ಮಗುವನ್ನು ಎತ್ತಿ ಪರೀಕ್ಷಿಸಿದನು.
ಈಗಾಗಲೇ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ