AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

22ರ ಯುವಕನ ಜೊತೆ 35ರ ಮಹಿಳೆ ಅನೈತಿಕ ಸಂಬಂಧ, ಪ್ರಿಯಕರನಿಗೆ ಹೆದರಿಸಲು ಹೋಗಿ ದುರಂತ ಅಂತ್ಯಕಂಡಳು

ಅನೈತಿಕ ಸಂಬಂಧಕ್ಕೆ ಮಹಿಳೆ ಬಲಿಯಾಗಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯ ಜೆಸಿ ನಗರದಲ್ಲಿ ನಡೆದಿದೆ. ಸರಗುಣಂ (35) ಮೃತ ಮಹಿಳೆ.

22ರ ಯುವಕನ ಜೊತೆ 35ರ ಮಹಿಳೆ ಅನೈತಿಕ ಸಂಬಂಧ, ಪ್ರಿಯಕರನಿಗೆ ಹೆದರಿಸಲು ಹೋಗಿ ದುರಂತ ಅಂತ್ಯಕಂಡಳು
ಆರೋಪಿ ಗಣೇಶ್
ಕಿರಣ್ ಹನುಮಂತ್​ ಮಾದಾರ್
|

Updated on: Apr 27, 2023 | 11:52 AM

Share

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಮಹಿಳೆ ಬಲಿಯಾಗಿರುವ ಘಟನೆ ಬೆಂಗಳೂರಿನ(Bengaluru) ಬಸವೇಶ್ವರ ನಗರ ಠಾಣಾ ವ್ಯಾಪ್ತಿಯ ಜೆಸಿ ನಗರದಲ್ಲಿ ನಡೆದಿದೆ. ಸರಗುಣಂ (35) ಮೃತ ಮಹಿಳೆ. ಈಕೆ ಮನೆ ಕೆಲಸ ಮಾಡುತ್ತಿದ್ದು, ಆಟೋ ಚಾಲಕ(Auto Driver)ನಾಗಿದ್ದ ಗಣೇಶ್ ಎಂಬ 22ರ ಯುವಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಇದಲ್ಲದೆ 50 ಸಾವಿರ ಹಣವನ್ನ ಯುವಕನಿಗೆ ನೀಡಿ, ಬಾಡಿಗೆ ಮನೆ ಕೂಡ ಮಾಡಿಕೊಟ್ಟಿದ್ದಳು. ಈ ಮಧ್ಯೆ ಬೇರೆ ಮಹಿಳೆ ಜೊತೆ ಗಣೇಶ್ ಆತ್ಮೀಯ ಸಲುಗೆಯಿಂದ ಇರುವ ಮಾಹಿತಿ ತಿಳಿದು ನಿನ್ನೆ(ಏ.26) ಯುವಕನ ಮನೆಗೆ ಬಂದಿದ್ದಳು.

ಇನ್ನು ಈ ವೇಳೆ ನಾನೇ ಹಣಕೊಟ್ಟು, ಮನೆ ಮಾಡಿಕೊಟ್ಟು ನಿನ್ನ ನೋಡಿಕೊಳ್ಳುತ್ತಿದ್ದೇನೆ. ನನ್ನ ಹಣ ವಾಪಸ್ ಕೊಡು, ಮಹಿಳೆ ಯಾರೆಂದು ಹೇಳು ಎಂದು ಪ್ರಶ್ನೆ ಮಾಡಿದ್ದು, ಗಲಾಟೆ ಜೋರಾಗಿದೆ. ಈ ವೇಳೆ ಗಣೇಶ್ ನಾನು ಸಾಯುವುದಾಗಿ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಮಹಿಳೆ ಅಡ್ಡ ಬಂದಿದ್ದು, ಯುವಕ ಕೆಳ ಇಳಿದಿದ್ದ. ಇದೇ ಸಮಯದಲ್ಲಿ ತಾನು ಸಾಯುತ್ತಿನಿ ಎಂದು ಮಹಿಳೆ ನೇಣಿನ ಕುಣಿಕೆ ಹಾಕೊಂಡಿದ್ದಾಳೆ. ಇದೇ ವೇಳೆ ಗಣೇಶ್ ಹಗ್ಗ ಎಳೆದು ಚೇರ್ ಒದ್ದಿದ್ದು, ಹಗ್ಗ ಕತ್ತಿಗೆ ಬಿಗಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಳು.

ಇದನ್ನೂ ಓದಿ:ಮದುವೆ ನಿಶ್ಚಯವಾಗಿದ್ದ ಯುವಕನ ಬರ್ಬರ ಹತ್ಯೆ, ಅನೈತಿಕ ಸಂಬಂಧದ ವಾಸನೆ, ಫೋನ್ ಬಂತು ಅಂತಾ ಮನೆಯಿಂದ ಹೊರಹೋಗಿದ್ದ!

ನಂತರ ಗಣೇಶ್ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಪೊಲೀಸರ ದಿಕ್ಕು ತಪ್ಪಿಸಲು ಆತ್ಮಹತ್ಯೆ ಯತ್ನ ಮಾಡಿದ್ದಾಳೆಂದು ಡ್ರಾಮಾ ಮಾಡಿದ್ದ. ಸದ್ಯ ಬಸವೇಶ್ವರ ನಗರ ಪೊಲೀಸರಿಂದ ಆರೋಪಿ ಗಣೇಶ್​ನನ್ನ ಬಂಧಿಸಲಾಗಿದೆ. ಇನ್ನು ಆ ಮಹಿಳೆಗೆ ಮದುಯವೆಯಾಗಿ 17 ವರ್ಷದ ಮಗು ಕೂಡ ಇದೆ. ಆದರೂ ಕೂಡ ಗಣೇಶ್ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದು, ಇದೀಗ ಸಾವಿನ ಮನೆ ಸೆರಿದ್ದಾಳೆ. ಈ ಕುರಿತು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ