ಆಂಧ್ರಪ್ರದೇಶದ ಫಾರ್ಮಾ ಕಂಪನಿ ಲ್ಯಾಬ್​​ನಲ್ಲಿ ಬೆಂಕಿ ಅವಘಡ; ನಾಲ್ವರು ಸಾವು, ಒಬ್ಬರಿಗೆ ಗಾಯ

ನಿರ್ವಹಣಾ ಕಾಮಗಾರಿ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಂಧ್ರಪ್ರದೇಶದ ಫಾರ್ಮಾ ಕಂಪನಿ ಲ್ಯಾಬ್​​ನಲ್ಲಿ ಬೆಂಕಿ ಅವಘಡ; ನಾಲ್ವರು ಸಾವು, ಒಬ್ಬರಿಗೆ ಗಾಯ
ಸಾಂಧರ್ಬಿಕ ಚಿತ್ರ
Image Credit source: NDTV
Edited By:

Updated on: Dec 27, 2022 | 8:29 AM

ವಿಶಾಖಪಟ್ಟಣಂ: ಆಂಧ್ರಪ್ರದೇಶದ (Andhra Pradesh) ಅನಕಾಪಲ್ಲಿಯಲ್ಲಿರುವ ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ (Farma Labs Limited) ಕಂಪನಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ನಿರ್ವಹಣಾ ಕಾಮಗಾರಿ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಕೈಗಾರಿಕಾ ಸಚಿವ ಅಮರನಾಥ್ ತಿಳಿಸಿದ್ದಾರೆ. ಈ ಘಟನೆಯ ಕುರಿತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Mumbai fire accident: ಆಸ್ಪತ್ರೆ ಪಕ್ಕದ ಕಟ್ಟಡದಲ್ಲಿ ಅಗ್ನಿ ಅವಘಡ, 1 ಸಾವು, 22 ಮಂದಿಗೆ ಗಾಯ

ಮೃತ ಕಾರ್ಮಿಕರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿರುವುದಾಗಿ ಅಮರನಾಥ್ ಅವರು ತಿಳಿಸಿದ್ದಾರೆ. ಈ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಕಾರ್ಮಿಕನಿಗೆ ವೈದ್ಯಕೀಯ ನೆರವು ನೀಡುವಂತೆ ಸಚಿವ ಅಮರನಾಥ್ ವೈದ್ಯಕೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಅಪಘಾತದ ಕಾರಣವನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣವೇನೆಂಬುದರ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ