ಹೊಸಹಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ದರೋಡೆ: 3 ಕೋಟಿ 50 ಲಕ್ಷ ರೂ. ಮೌಲ್ಯದ 5 ಕೆ.ಜಿ ಚಿನ್ನ ಕಳವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ದೊರೇಡೆಯಾಗಿದ್ದು, ಭಾರೀ ಪ್ರಮಾಣದ ಹಣ, ಚಿನ್ನ ದೋಚಿಕೊಂಡು ಪರಾರಿಯಾಗಿದ್ದಾರೆ.
ಹೊಸಹಳ್ಳಿ(ಬೆಂಗಳೂರು ಗ್ರಾಮಾಂತರ): ಮುಖವಾಡ ಧರಿಸಿ ಬ್ಯಾಂಕ್ನೊಳಗೆ ನುಗ್ಗಿದ ಕಳ್ಳರು ಗ್ಯಾಸ್ ಕಟರ್ನಿಂದ ಲಾಕರ್ ಮುರಿದು ಬರೋಬ್ಬರಿ 3 ಕೋಟಿ 50 ಲಕ್ಷ ರೂ. ಮೌಲ್ಯದ 5 ಕೆ.ಜಿ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ (Karnataka Garmin bank )ನಡೆದಿದೆ.
ಶಿರಸಿ ಪೊಲೀಸರ ಭರ್ಜರಿ ಬೇಟೆ: 9 ಅಂತರ್ ಜಿಲ್ಲಾ ಕಳ್ಳರ ಬಂಧನ, 13,80,000 ರೂ. ನಗದು, 2 ಕಾರು, 12 ಮೊಬೈಲ್ ಜಪ್ತಿ
ಮುಖಕ್ಕೆ ಮಂಕಿ ಕ್ಯಾಪ್ ಹಾಕಿಕೊಂಡು ಗ್ಯಾಸ್ ಕಟರ್ ಬಳಸಿ ಈ ಕೃತ್ಯ ಮಾಡಿದ್ದು, ಬ್ಯಾಂಕ್‌ನಲ್ಲಿದ್ದ 5 ಕೆ.ಜಿ ಚಿನ್ನ, 14 ಲಕ್ಷ ರೂಪಾಯಿ ನಗದು ದೋಚಿಕೊಂಡು ಹೋಗಿದ್ದಾರೆ. ಇಂದು(ನ.26) ಬ್ಯಾಂಕ್‌ಗೆ ರಜೆ ಇದ್ದ ಹಿನ್ನೆಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬ್ಯಾಂಕ್‌ನಲ್ಲಿದ್ದ ಸಿಸಿಟಿವಿಯಲ್ಲಿ ದರೋಡೆಕೋರರ ಕೃತ್ಯ ಸೆರೆಯಾಗಿದೆ.
ನಾಲ್ವರು ದರೋಡೆಕೋರರು ಮುಖಕ್ಕೆ ಮಂಕಿ ಕ್ಯಾಪ್ ಹಾಕ್ಕೊಂಡು ತಡರಾತ್ರಿ ಕೃತ್ಯ ಎಸಗಿರುವುದು ಬ್ಯಾಂಕ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ಪರಿಶೀಲನೆ ನಡೆಸಿದ್ದು, ಹೊಸಳ್ಳಿ ಪೊಲೀಸರು ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 12:22 am, Sun, 27 November 22