AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾಗೆ ಟೋಪಿ ಹಾಕಿ ಲಕ್ಷಾಂತರ ರೂ ಇನ್ಸೆಂಟೀವ್ ಪಡೆದಿದ್ದರು.. ಅವರಲ್ಲಿ ಒಬ್ಬನಿಗೆ ಕೊರೊನಾ!

ಬೆಂಗಳೂರು: ನಿಗದಿತ ಟ್ರಿಪ್​ಗಳನ್ನ ನಿರ್ವಹಿಸದೆ ಇರುವುದರ ಜೊತೆಗೆ 50ಕ್ಕೂ ಹೆಚ್ಚು ಟ್ರಿಪ್​ ಮಾಡಿರುವಂಥೆ ದಾಖಲೆಗಳನ್ನ ತೋರಿಸಿ ಇನ್ಸೆಂಟೀವ್ ಪಡೆಯುತ್ತಿದ್ದ ನಾಲ್ವರು ಚಾಲಕರನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ರವಿ, ಮನು‌, ಸತೀಶ್ ಮತ್ತು ನಾಗೇಶ್ ಎಂದು ಗುರುತಿಸಲಾಗಿದೆ. ಓಲಾ ಕಂಪನಿಯಲ್ಲಿ ಕ್ಯಾಬ್ ಚಾಲಕರಾಗಿ ಕೆಲಸ ಮಾತುತ್ತಿದ್ದ ಇವರು 50ಕ್ಕೂ ಹೆಚ್ಚು ಟ್ರಿಪ್ ಮಾಡಿದರೆ ಇನ್ಸೆಂಟೀವ್ ಸಿಗುತ್ತೆ ಎಂಬ ಕಂಪನಿ ನಿಯಮವನ್ನೇ ಬಂಡವಾಳ ಮಾಡಿಕೊಂಡು ಈ ಕೃತ್ಯ ಎಸಗಲು ಮುಂದಾದರು. ಟೋಪಿ ಹಾಕಿದ್ದು ಹೇಗೆ? ಬಂಧಿತ ನಾಲ್ವರು ಆರೋಪಿಗಳು […]

ಓಲಾಗೆ ಟೋಪಿ ಹಾಕಿ ಲಕ್ಷಾಂತರ ರೂ ಇನ್ಸೆಂಟೀವ್ ಪಡೆದಿದ್ದರು.. ಅವರಲ್ಲಿ ಒಬ್ಬನಿಗೆ  ಕೊರೊನಾ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 11, 2020 | 5:21 PM

Share

ಬೆಂಗಳೂರು: ನಿಗದಿತ ಟ್ರಿಪ್​ಗಳನ್ನ ನಿರ್ವಹಿಸದೆ ಇರುವುದರ ಜೊತೆಗೆ 50ಕ್ಕೂ ಹೆಚ್ಚು ಟ್ರಿಪ್​ ಮಾಡಿರುವಂಥೆ ದಾಖಲೆಗಳನ್ನ ತೋರಿಸಿ ಇನ್ಸೆಂಟೀವ್ ಪಡೆಯುತ್ತಿದ್ದ ನಾಲ್ವರು ಚಾಲಕರನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ರವಿ, ಮನು‌, ಸತೀಶ್ ಮತ್ತು ನಾಗೇಶ್ ಎಂದು ಗುರುತಿಸಲಾಗಿದೆ. ಓಲಾ ಕಂಪನಿಯಲ್ಲಿ ಕ್ಯಾಬ್ ಚಾಲಕರಾಗಿ ಕೆಲಸ ಮಾತುತ್ತಿದ್ದ ಇವರು 50ಕ್ಕೂ ಹೆಚ್ಚು ಟ್ರಿಪ್ ಮಾಡಿದರೆ ಇನ್ಸೆಂಟೀವ್ ಸಿಗುತ್ತೆ ಎಂಬ ಕಂಪನಿ ನಿಯಮವನ್ನೇ ಬಂಡವಾಳ ಮಾಡಿಕೊಂಡು ಈ ಕೃತ್ಯ ಎಸಗಲು ಮುಂದಾದರು. ಟೋಪಿ ಹಾಕಿದ್ದು ಹೇಗೆ? ಬಂಧಿತ ನಾಲ್ವರು ಆರೋಪಿಗಳು ಬೇರೆ ಬೇರೆ ಸಿಮ್​ಕಾರ್ಡ್​ಗಳನ್ನು ಬಳಸಿ ಅವರೇ ಟ್ರಿಪ್​ ಬುಕ್​ ಮಾಡುತ್ತಿದ್ದರು. ನಂತ್ರ Mock ಲೊಕೇಶನ್​ ಎಂಬ ಌಪ್​ ಒಂದನ್ನು ಬಳಸಿ ಗಾಡಿ ಟ್ರಿಪ್ ನಿರ್ವಹಿಸಿದೆ ಎಂದು ಕಿಲೋಮೀಟರ್​ಗಳನ್ನ ಸ್ಕಿಪ್ ಮಾಡುತ್ತಿದ್ದರು. ಇದರಿಂದ ಪ್ರತಿ ದಿನವೂ 50ಕ್ಕಿಂತ ಹೆಚ್ಚು ಟ್ರಿಪ್​ಗಳನ್ನು ಮಾಡಿರುವ ಹಾಗೆ ಬಿಂಬಿಸಿ ಕಂಪನಿಯಿಂದ ಈವರೆಗೆ ಲಕ್ಷಾಂತರ ರೂಪಾಯಿ ಇನ್ಸೆಂಟೀವ್ ಪಡೆದಿದ್ದರು. ಸದ್ಯ ನಾಲ್ವರನ್ನು ಬಂಧಿಸಿರುವ ಸಿಸಿಬಿ ಅಧಿಕಾರಿಗಳು ಇವರಿಂದ 500 ಸಿಮ್​​ಕಾರ್ಡ್ ಮತ್ತು 3 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಒರ್ವ ಅರೋಪಿಗೆ ಕೋವಿಡ್ ಸೋಂಕು ದೃಢ: ನಾಲ್ಕು ಅರೋಪಿಗಳಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಒರ್ವ ಅರೋಪಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಆರೋಪಿಗಳನ್ನು ಬಂಧಿಸಿ ತನಿಖೆ ಮಾಡಿದ್ದ ಇಬ್ಬರು ಇನ್​ಸ್ಪೆಕ್ಟರ್​ಗಳಿಗೆ ಮತ್ತು ಐದು ಪೊಲೀಸ್ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ. ಸಿಸಿಬಿ ಕಚೇರಿಗೆ ಸ್ಯಾನಿಟೈಜ್ ಮಾಡಲಾಗತ್ತದೆ. ಸೋಂಕಿತ ಆರೋಪಿಯನ್ನು ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗುವುದು ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ