Uttara Kannada: ಶಿರಸಿಯಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನ; ಆರೋಪಿ ಬಂಧನ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಆಂಧ್ರಪ್ರದೇಶದ ಕಡಪಾ ಮೂಲದ ವ್ಯಕ್ತಿಯೊರ್ವ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

Uttara Kannada: ಶಿರಸಿಯಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನ; ಆರೋಪಿ ಬಂಧನ
ಆರೋಪಿ ಬಂಧನ
Follow us
Prajwal D'Souza
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 24, 2023 | 1:55 PM

ಉತ್ತರ ಕನ್ನಡ: ಜಿಲ್ಲೆಯ ಶಿರಸಿ(Sirsi)ಯಲ್ಲಿ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯನ್ನು ಆಂಧ್ರಪ್ರದೇಶದ ಕಡಪಾ ನಿವಾಸಿ ಶಿವ (26) ಎಂದು ಪೊಲೀಸರು ಗುರುತಿಸಿದ್ದಾರೆ. ಜೂ.22 ರಂದು ಸಂಜೆ 5.30 ರ ಸುಮಾರಿಗೆ 4 ವರ್ಷದ ಮಗುವಿಗೆ ಅತ್ಯಾಚಾರವೆಸಗಿರುವುದಾಗಿ ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತ ಒಂದು ತಿಂಗಳು ಕಾಲ ಶಿರಸಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ. ಮದ್ಯದ ಅಮಲಿನಲ್ಲಿ ಆರೋಪಿ ಅಕ್ಕಪಕ್ಕದ ಮನೆಯ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಶಿರಸಿ ಹೊಸ ಮಾರ್ಕೆಟ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಭೀಮಾಶಂಕರ್ ತಿಳಿಸಿದ್ದಾರೆ.

ಇನ್ನು ಅತ್ಯಾಚಾರದ ನಂತರ ಆರೋಪಿ ವೈರ್ ಬಳಸಿ ಮಗುವನ್ನು ಕತ್ತು ಹಿಸುಕಲು ಪ್ರಯತ್ನಿಸಿದ್ದಾನೆ. ಈ ವೇಳೆ ಅಕ್ಕಪಕ್ಕದ ಮನೆಯವರು ಮಗುವಿನ ಅಳುವ ಶಬ್ದವನ್ನು ಕೇಳಿ ಹೊರ ಬಂದಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ನಮ್ಮ ಸಿಬ್ಬಂದಿ ಹಿಡಿದಿದ್ದು, ಮಗು ಸುರಕ್ಷಿತವಾಗಿದ್ದು, ಜೀವಂತವಾಗಿದೆ ಎಂದು ಪಿಎಸ್‌ಐ ತಿಳಿಸಿದ್ದಾರೆ.

ಇದನ್ನೂ ಓದಿ:ಚಾಕೊಲೇಟ್ ಆಸೆ ತೋರಿಸಿ 4ನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ 52 ವರ್ಷದ ಕಾಮುಕ

ಈ ಕುರಿತು ಆರೋಪಿಗೆ ಪೋಕ್ಸೊ ಕಾಯಿದೆಯಡಿ, ಸೆಕ್ಷನ್ 376ಅತ್ಯಾಚಾರ, 307 ಕೊಲೆಗೆ ಯತ್ನ, ಸೆಕ್ಷನ್ 4 ಲೈಂಗಿಕ ದೌರ್ಜನ್ಯ ಮತ್ತು ಸೆಕ್ಷನ್ 6 ಉಗ್ರವಾದ ಲೈಂಗಿಕ ದೌರ್ಜನ್ಯ ಅಡಿಯಲ್ಲಿ ಶಿವ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸ್‌ಐ ಭೀಮಾಶಂಕರ್‌ ತಿಳಿಸಿದ್ದಾರೆ.

ಇನ್ನು ಇಂತಹುದೇ ಘಟನೆ ಜೂ.22 ರಂದು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್​ಎಚ್ ಕ್ಯಾಂಪ್ 3ರಲ್ಲಿ ನಡೆದಿತ್ತು. 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಚಾಕೊಲೇಟ್ ಆಸೆ ತೋರಿಸಿ, 52 ವರ್ಷದ ಕಾಮುಕ ಆಕೆಯನ್ನ ಪುಸಲಾಯಿಸಿ ಸ್ಕೂಟರ್​ನಲ್ಲಿ ಕರೆದೊಯ್ದು ಅತ್ಯಾಚಾರ ಮಾಡಿದ್ದ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿ ಸಪನ್ ಮಂಡಲ್(52) ಎಂಬಾತನನ್ನ ಪೊಲೀಸರು ಬಂಧಿಸಿದ್ದರು.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:52 pm, Sat, 24 June 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ