545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ; ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ದ್ವಿಸದಸ್ಯ ಪೀಠ

545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಕೋರ್ಟ್ ನಿಗಾದಲ್ಲಿ ತನಿಖೆ ನಡೆಸುವಂತೆ ಕಾಂಗ್ರೆಸ್​ನ ಪ್ರಿಯಾಂಕ್ ಖರ್ಗೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ತನಿಖೆಯ ವಿವರ ಸಲ್ಲಿಕೆ ಕೋರಿ ಪಿಐಎಲ್ ಸಲ್ಲಿಸಿದ್ದರು.

545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ; ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ದ್ವಿಸದಸ್ಯ ಪೀಠ
ಕರ್ನಾಟಕ ಹೈಕೋರ್ಟ್ (ಬಲ ಚಿತ್ರ)
Follow us
TV9 Web
| Updated By: Rakesh Nayak Manchi

Updated on:Jan 27, 2023 | 10:45 PM

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ (545 PSI recruitment exam scam) ಪ್ರಕರಣದ ತನಿಖೆ ಕೋರ್ಟ್ ನಿಗಾದಲ್ಲಿ ನಡೆಯಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ.ಅಶೋಕ್ ಎಸ್.ಕಿಣಗಿರವರಿದ್ದ ದ್ವಿಸದಸ್ಯ ಪೀಠ, ಪ್ರಕರಣದ‌ ವಿಚಾರಣೆಯಿಂದ ಹಿಂದೆ ಸರಿದಿದೆ. ಅಲ್ಲದೆ, ಬೇರೊಂದು ಪೀಠದ ಮುಂದೆ ವಿಚಾರಣೆ ನಿಗದಿಗೆ ಸೂಚನೆ ನೀಡಿದೆ. ಪ್ರಕರಣದ ತನಿಖೆ ಕೋರ್ಟ್ ನಿಗಾದಲ್ಲಿ ನಡೆಯಬೇಕು ಮತ್ತು ತನಿಖೆಯ ವಿವರ ಸಲ್ಲಿಕೆ ಕೋರಿ ಕಾಂಗ್ರೆಸ್​​ನ ಪ್ರಿಯಾಂಕ್ ಖರ್ಗೆ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಏನಿದು ಪ್ರಕರಣ? 

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ 545 ಪಿಎಸ್​ಐ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪರೀಕ್ಷೆ ನಡೆಸಿತ್ತು. ಕಳೆದ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ 93 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಲಕ್ಷಾಂತರ ರೂಪಾಯಿ ಹಣ ನೀಡಿದ್ದರು. ಈ ಪ್ರಕರಣ ಬೆಳಕಿಗೆ ಬಂದು ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.

ಕೋಟಿ ಕೋಟಿ ಹಣ ಪತ್ತೆ ಹಿನ್ನೆಲೆ ಪ್ರಕರಣದ ಗಂಭೀರತೆಯನ್ನು ಅರಿತು ಸರ್ಕಾರತನಿಖೆಯನ್ನು ಸಿಐಡಿಗೆ ವಹಿಸಿದೆ. 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್​ಗಳಿಗೂ ಹಣದ ಹೊಳೆ ಹರಿದಿದೆ. ತಿ ಬ್ರೋಕರ್​ಗಳ ಹಂತದಲ್ಲಿಯೂ ಕನಿಷ್ಠ ಹತ್ತು ಲಕ್ಷ ಹಣ ಕೊಡಬೇಕಿತ್ತು. ನೇಮಕಾತಿ ವಿಭಾಗದ ಅಧಿಕಾರಿಗೆ ಮೂವತ್ತರಿಂದ ಮೂವತ್ತೈದು ಲಕ್ಷ ತಲುಪುತ್ತಿತ್ತು. ಮೂವರು ನಾಲ್ವರು ಬ್ರೋಕರ್​ಗಳ ಹಂತದಲ್ಲಿ ಮೂವತ್ತು ನಲವತ್ತು ಲಕ್ಷ ಹಣ ನೀಡಲಾಗುತ್ತಿತ್ತು. ಅಷ್ಟೂ ಬ್ರೋಕರ್​ಗಳ ಮೂಲಕ ಹಣ ಕೊನೆಗೆ ನೇಮಕಾತಿ ವಿಭಾಗದ ಅಧಿಕಾರಿಗಳ ಕೈಗೆ ಸೇರುತ್ತಿತ್ತು.

ಸದ್ಯ ಅಕ್ರಮದಲ್ಲಿ ಭಾಗಿಯಾದ ಅಭ್ಯರ್ಥಿಗಳಿಂದ ಹಿಡಿದು ರಾಜಕೀಯ ವ್ಯಕ್ತಿಗಳು ಅರೆಸ್ಟ್ ಆಗಿದ್ದಾರೆ. ಈಗಾಗಲೇ ನೇಮಕಾತಿ ವಿಭಾಗದ ಡಿವೈಎಸ್​ಪಿ ಶಾಂತಕುಮಾರ್, ಎಫ್​ಡಿಎ ಹರ್ಷಾ, ಸಿಬ್ಬಂದಿಗಳಾದ ಶ್ರೀಧರ್, ಶ್ರೀನಿವಾಸ್ ಬಂಧಿತರಾಗಿದ್ದರು. ಪ್ರಕರಣ ಸಂಬಂಧ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪಾಲ್ ಹೆಸರು ಕೂಡ ಅಕ್ರಮದಲ್ಲಿ ಕೇಳಿಬಂದಿತ್ತು. ಇದರ ಬೆನ್ನಲ್ಲೆ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ಎತ್ತಂಗಡಿ ಮಾಡಲಾಗಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ ಕೆಲವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Fri, 27 January 23