AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಉತ್ತರ ಪ್ರದೇಶದ ಬದೌನ್​ನಲ್ಲಿ ಭೀಕರ ಅಪಘಾತ; 6 ಮಂದಿ ಸಾವು, 14 ಜನರಿಗೆ ಗಾಯ

ಬದೌನ್ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನರ ಸಾವಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

Accident: ಉತ್ತರ ಪ್ರದೇಶದ ಬದೌನ್​ನಲ್ಲಿ ಭೀಕರ ಅಪಘಾತ; 6 ಮಂದಿ ಸಾವು, 14 ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 15, 2022 | 8:25 AM

Share

ಬರೇಲಿ: ಬರೇಲಿ- ಆಗ್ರಾ ರಸ್ತೆಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದ್ದು, ಟ್ಯಾಂಕರ್‌ಗೆ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದು 6 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬರೇಲಿಯ ಮೂಸಜಾಗ್ ಪ್ರದೇಶದ ಔರಮೈ ಗ್ರಾಮಕ್ಕೆ ಸೇರಿದ ಕುಟುಂಬಸ್ಥರು ಇಂದು ಬೆಳಗ್ಗೆ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದರು. ಆಗ ಈ ದುರಂತ ಸಂಭವಿಸಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗಂಗಾ ನದಿ ಸ್ನಾನದಿಂದ ಹಿಂತಿರುಗುತ್ತಿದ್ದಾಗ ಎದುರಿನಿಂದ ಬಂದ ಟ್ಯಾಂಕರ್​​ಗೆ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದಿದೆ. ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯಾಂಕರ್ ಅವರ ವಾಹನವನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಒಪಿ ಸಿಂಗ್ ತಿಳಿಸಿದ್ದಾರೆ.

ಈ ವೇಳೆ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದ್ದು, ಐವರು ಮಹಿಳೆಯರು ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮೃತರನ್ನು ಅನಿತಾ ದೇವಿ (40), ಸಂಗೀತಾ (19), ಸುಷ್ಮಾ (65), ವೀರಾ ದೇವಿ (75), ಪೂನಂ (28), ಸಹದೇವ್ (12) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಬದೌನ್‌ನ ಸರ್ಕಾರಿ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ಈ ಘಟನೆಯ ನಂತರ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ
Image
ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವಿವಾಹಿತ ಗಂಡು-ಹೆಣ್ಣಿನ ಬೆತ್ತಲೆ ಮೆರವಣಿಗೆ; ಆರೋಪಿಯ ಹೆಂಡತಿ ಬಂಧನ
Image
ಅನೈತಿಕ ಸಂಬಂಧ ಶಂಕಿಸಿ ಪತ್ನಿಗೆ ಚಾಕು ಇರಿದ ಪತಿ; ಹೆಂಡತಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ಗಂಡ ಖಾಕಿ ವಶಕ್ಕೆ
Image
Crime News: ಪ್ರತಿಷ್ಠಿತ ಕಾಲೇಜಿಗೆ ಮೋಸ, ದಾನಿಗಳಿಂದ ಬಂದ ಹಣವನ್ನು ನುಂಗಿ ನೀರು ಕುಡಿದು ಪರಾರಿಯಾದ ಕಾರ್ಯದರ್ಶಿ

ಇದನ್ನೂ ಓದಿ: Bengaluru News: ಹದಗೆಟ್ಟ ರಸ್ತೆಗಳಿಂದ ನಿರಂತರ ಅಪಘಾತ, ಆತಂಕದಲ್ಲಿ ವಾಹನ ಸವಾರರು!

ಈ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಉತ್ತರ ಪ್ರದೇಶದ ಬದೌನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತವು ಅತ್ಯಂತ ದುಃಖಕರವಾಗಿದೆ. ಇದರಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಬದೌನ್ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನರ ಸಾವಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:24 am, Wed, 15 June 22

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ