AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಿಯಾಬಾದ್: ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕೆ 7 ವರ್ಷದ ಬಾಲಕಿಯನ್ನು ಉಸಿರುಗಟ್ಟಿಸಿ ಕೊಂದ ಸಂಬಂಧಿ

ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕೆ 7 ವರ್ಷದ ಬಾಲಕಿಯನ್ನು ಸಂಬಂಧಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೈಲಾ ಭಟ್ಟಾ ಪ್ರದೇಶದಲ್ಲಿನ ತನ್ನ ತಾಯಿಯ ಮಾವನ ಮನೆಗೆ ಬಂದಿದ್ದ ಬಾಲಕಿಯನ್ನು ಸಂಬಂಧಿಕರೊಬ್ಬರು ಕೆಟ್ಟದಾಗಿ ಸ್ಪರ್ಶಿಸಿದ್ದಾರೆ, ಬಾಲಕಿ ಅದನ್ನು ವಿರೋಧಿಸಿದ್ದಾಳೆ, ಕೋಪಗೊಂಡ ಆರೋಪಿಯು ಬಾಲಕಿಯನ್ನು ಕೊಲೆ ಮಾಡಿದ್ದಾನೆ.

ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on: Oct 08, 2023 | 10:04 AM

Share

ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕೆ 7 ವರ್ಷದ ಬಾಲಕಿಯನ್ನು ಸಂಬಂಧಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೈಲಾ ಭಟ್ಟಾ ಪ್ರದೇಶದಲ್ಲಿನ ತನ್ನ ತಾಯಿಯ ಮಾವನ ಮನೆಗೆ ಬಂದಿದ್ದ ಬಾಲಕಿಯನ್ನು ಸಂಬಂಧಿಕರೊಬ್ಬರು ಕೆಟ್ಟದಾಗಿ ಸ್ಪರ್ಶಿಸಿದ್ದಾರೆ, ಬಾಲಕಿ ಅದನ್ನು ವಿರೋಧಿಸಿದ್ದಾಳೆ, ಕೋಪಗೊಂಡ ಆರೋಪಿಯು ಬಾಲಕಿಯನ್ನು ಕೊಲೆ ಮಾಡಿದ್ದಾನೆ.

ಆಕೆಯ ಸಂಬಂಧಿಕರು ನೀಡಿದ ದೂರಿನ ಪ್ರಕಾರ, ಶುಕ್ರವಾರ ರಾತ್ರಿ ಪಕ್ಕದ ಮನೆಯ ಟೆರೇಸ್‌ನಲ್ಲಿ ತಿಂಡಿಗಳನ್ನು ಕೊಡುವ ನೆಪದಲ್ಲಿ ಸಂಬಂಧಿಯೊಬ್ಬರು ಅವಳನ್ನು ತನ್ನೊಂದಿಗೆ ಕರೆದೊಯ್ದಿದ್ದರು.

ಟೆರೇಸ್ ಮೇಲೆ ಅನುಚಿತವಾಗಿ ಅವಳನ್ನು ಮುಟ್ಟಲು ಪ್ರಾರಂಭಿಸಿದ್ದ. ಆಕೆ ಆಕ್ಷೇಪ ವ್ಯಕ್ತಪಡಿಸಿದಾಗ ಬಾಲಕಿಯನ್ನು ಹತ್ಯೆ ಮಾಡಿದ್ದಾನೆ. ಬಾಲಕಿ ಪ್ರಜ್ಞೆ ತಪ್ಪಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಡಿಸಿಪಿ (ನಗರ) ನಿಪುನ್ ಅಗರ್ವಾಲ್ ಹೇಳಿದ್ದಾರೆ.

ಸಂತ್ರಸ್ತೆಯನ್ನು ಕುಟುಂಬದವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಕೊಂಡಿದ್ದಾರೆ ಮತ್ತು ತಾಯಿಯ ಚಿಕ್ಕಪ್ಪ ಅವಳನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಮತ್ತಷ್ಟು ಓದಿ: ಎಮ್ಮೆಯ ಕರು ಮೇಲೆ ಕಾಮುಕನಿಂದ ಅತ್ಯಾಚಾರ; ಸಿಸಿಟಿವಿ ವಿಡಿಯೋ ನೋಡಿ ಬೆಚ್ಚಿಬಿದ್ದ ಮಾಲೀಕರು

ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ

'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?

ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!

ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ

‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ

ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!

ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?