70 ವರ್ಷದ ವ್ಯಕ್ತಿಯಿಂದ 20ರ ಯುವತಿಯ ಮೇಲೆ ಲೈಂಗಿಕ ಕಿರುಕುಳ; ದೆಹಲಿಯ ಕುವೈತ್ ರಾಯಭಾರ ಕಚೇರಿಯ ಉದ್ಯೋಗಿ ಬಂಧನ

|

Updated on: Jul 18, 2024 | 11:38 AM

ಕೇಂದ್ರ ದೆಹಲಿಯ ಚಾಣಕ್ಯಪುರಿಯಲ್ಲಿರುವ ಕುವೈತ್ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಉದ್ಯೋಗಿಯನ್ನು ಹೌಸ್ ಕೀಪಿಂಗ್ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯನ್ನು 70 ವರ್ಷದ ಅಬು ಬಕರ್ ಎಂದು ಗುರುತಿಸಲಾಗಿದೆ.

70 ವರ್ಷದ ವ್ಯಕ್ತಿಯಿಂದ 20ರ ಯುವತಿಯ ಮೇಲೆ ಲೈಂಗಿಕ ಕಿರುಕುಳ; ದೆಹಲಿಯ ಕುವೈತ್ ರಾಯಭಾರ ಕಚೇರಿಯ ಉದ್ಯೋಗಿ ಬಂಧನ
ಸಾಂದರ್ಭಿಕ ಚಿತ್ರ
Follow us on

ನವದೆಹಲಿ: ಕೇಂದ್ರ ದೆಹಲಿಯ ಚಾಣಕ್ಯಪುರಿಯಲ್ಲಿರುವ ಕುವೈತ್ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಹೌಸ್ ಕೀಪಿಂಗ್ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಇಂದು ಎಫ್‌ಐಆರ್ ದಾಖಲಿಸಿದ ನಂತರ ಆರೋಪಿಯನ್ನು 70 ವರ್ಷದ ಅಬು ಬಕರ್ ಎಂದು ಗುರುತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಇಂದು ಕರೆ ಮಾಡಿದವರಿಂದ ಪಿಸಿಆರ್ ಕರೆ ಸ್ವೀಕರಿಸಲಾಗಿದೆ. 20 ವರ್ಷದ ಯುವತಿಯ ಪತಿ ಫೋನ್ ಮಾಡಿದ್ದು, ತನ್ನ ಹೆಂಡತಿಯ ಮೇಲೆ 70 ವರ್ಷದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: Shocking News: ಗೆಳೆಯನ ತಾಯಿಯ ಮೇಲೆ ಯುವಕನಿಂದ ಅತ್ಯಾಚಾರ; ಹೇಯ ಕೃತ್ಯ ಬಯಲು

“ಕಳೆದ 2 ವರ್ಷಗಳಿಂದ ರಾಯಭಾರ ಕಚೇರಿಯಲ್ಲಿ ಉದ್ಯೋಗದಲ್ಲಿರುವ ಅಬು ಬಕರ್ ನನ್ನ ಹೆಂಡತಿ ಕೆಲಸದಲ್ಲಿದ್ದಾಗ ಲೈಂಗಿಕ ಕಿರುಕುಳ ನೀಡಿದ್ದಾನೆ” ಎಂದು ಅಧಿಕಾರಿ ಹೇಳಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಚಾಣಕ್ಯಪುರಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಾಯ್ದೆಯ ಸೆಕ್ಷನ್ 74 (ಹೆಣ್ಣಿನ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ) ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆ ಈ ವರ್ಷದ ಫೆಬ್ರವರಿಯಲ್ಲಿ ರಾಯಭಾರ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ