ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; 8 ಜನ ಸಾವು, 19 ಮಂದಿಗೆ ಗಾಯ
ಲಕ್ನೋ- ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು 8 ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 19 ಜನರಿಗೆ ಗಾಯಗಳಾಗಿವೆ. ಲಕ್ನೋದಿಂದ ಪ್ರಯಾಣಿಕರೊಂದಿಗೆ ದೆಹಲಿಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಯುಪಿಡಿಎ ವಾಟರ್ ಸ್ಪ್ರಿಂಕ್ಲರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದೆ.
ಲಕ್ನೋ: ಉತ್ತರ ಪ್ರದೇಶದ ಕನೌಜ್ ಪ್ರದೇಶದ ಬಳಿ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಮಧ್ಯಾಹ್ನ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ನೀರಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ 8 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 19ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಂದೆ ಹೋಗುತ್ತಿದ್ದ ಯುಪಿಡಿಎ ನೀರಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದಿದೆ. ಬಸ್ ಲಕ್ನೋದಿಂದ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅವರಲ್ಲಿ ಹೆಚ್ಚಿನವರು ಕೆಲಸಕ್ಕಾಗಿ ದೆಹಲಿಗೆ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಚಾಲನೆ ಮಾಡುವಾಗ ನಿದ್ರೆಗೆ ಜಾರಿದ ಕಾರಣ ಡಿಕ್ಕಿ ಸಂಭವಿಸಿದೆ ಎಂದು ವರದಿಯಾಗಿದೆ.
ಅಪಘಾತ ಸಂಭವಿಸಿದ ಕೂಡಲೇ ಅದೇ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಜಲಶಕ್ತಿ ಸಚಿವ ಸ್ವತಂತ್ರದೇವ್ ಸಿಂಗ್ ಅವರು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿ ಗಾಯಾಳುಗಳನ್ನು ಬಸ್‌ನಿಂದ ಹೊರತರುವಲ್ಲಿ ನೆರವಾದರು. ಅಪಘಾತದ ಕುರಿತು ಯುಪಿಡಿಎ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಅವರಿಗೆ ಸೂಚಿಸಲಾಗಿದೆ ಎಂದು ಸ್ವತಂತ್ರದೇವ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.
VIDEO | Uttar Pradesh: Several people were killed in a road accident on Agra-Lucknow expressway near Kannauj. More details awaited.
(Full video available on PTI Videos – https://t.co/n147TvrpG7) pic.twitter.com/8Rr8AAzxKy
— Press Trust of India (@PTI_News) December 6, 2024
ಇದನ್ನೂ ಓದಿ: ಲಕ್ನೋ: ಶಾಲೆಯಿಂದ ಹಿಂದಿರುಗುವಾಗ ಅಪ್ರಾಪ್ತ ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ
“ಇದೊಂದು ದುರದೃಷ್ಟಕರ ಘಟನೆ. ರಸ್ತೆಗಳಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಸಂಚಾರ ನಿಯಮಗಳು, ಸುರಕ್ಷತಾ ಕ್ರಮಗಳಿಗೆ ಬದ್ಧವಾಗಿರಬೇಕು” ಎಂದು ಸಚಿವ ಸ್ವತಂತ್ರದೇವ್ ಸಿಂಗ್ ಹೇಳಿದರು.
#WATCH | Kannauj, Uttar Pradesh: Six people died and 14 were injured after a double-decker bus collided with a water tanker on the Lucknow-Agra Expressway. pic.twitter.com/DN05CRcWjc
— ANI (@ANI) December 6, 2024
ಕನೌಜ್‌ನ ಸಕ್ರವಾ ಪೊಲೀಸ್ ಠಾಣೆ ವ್ಯಾಪ್ತಿಯ ಔರೈಯಾ ಗಡಿಯಲ್ಲಿರುವ ಮಿಶ್ರಾಬಾದ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸ್ಥಳದ ಬಳಿ ಗ್ರಾಮಸ್ಥರು ಜಮಾಯಿಸಿದ್ದರು. 8 ಮಂದಿ ಸಾವನ್ನಪ್ಪಿದ್ದು, 19ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡಿಲ್ಲದ ಇತರ ಪ್ರಯಾಣಿಕರನ್ನು ಮತ್ತೊಂದು ಬಸ್‌ನಲ್ಲಿ ಅವರ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ