AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan: ಹಾಸನದಲ್ಲಿ 85 ವರ್ಷದ ವೃದ್ಧೆಯನ್ನು ಕೊಲೆ ಮಾಡಿ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್

85 ವರ್ಷದ ವೃದ್ಧೆ ಕೊಂದು ಅತ್ಯಾಚಾರವೆಸಗಿದ ಪೈಶಾಚಿಕ ಕೃತ್ಯ ಹಾಸನ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Hassan: ಹಾಸನದಲ್ಲಿ 85 ವರ್ಷದ ವೃದ್ಧೆಯನ್ನು ಕೊಲೆ ಮಾಡಿ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್
ಹಾಸನದ ಅರಸೀಕೆರೆ ತಾಲೂಕಿನಲ್ಲಿ 85 ವರ್ಷದ ವೃದ್ಧೆಯನ್ನು ಕೊಲೆ ಮಾಡಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (ಸಾಂದರ್ಭಿಕ ಚಿತ್ರ)Image Credit source: File picture
Follow us
Rakesh Nayak Manchi
|

Updated on:Apr 06, 2023 | 2:52 PM

ಹಾಸನ: ಜಮೀನಿನಲ್ಲಿ ವೃದ್ಧೆಯನ್ನು ಕೊಲೆ ಮಾಡಿ ಬಳಿಕ ಅತ್ಯಾಚಾರ (Murder And Rape In Hassan) ಎಸಗಿದ ಪೈಶಾಚಿಕ ಕೃತ್ಯ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಏ.1ರಂದು ತನ್ನ ಜಮೀನಿನ ಬಳಿ ವೃದ್ಧೆಯನ್ನು ಕೊಲೆ ಮಾಡಿ ಅತ್ಯಾಚಾರ ಎಸಗಲಾಗಿತ್ತು. ಏ.2ರಂದು ಗ್ರಾಮದ ಜಮೀನಿನಲ್ಲಿ ವೃದ್ಧೆ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಅನುಮಾನಸ್ಪದ ಸಾವು ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ಅದರಂತೆ 5 ವರ್ಷದ ಹಿಂದೆ ಇದೇ ರೀತಿ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯ ಮೇಲೆ ಶಂಕಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯದ ಬಗ್ಗೆ ಬಾಯಿಬಿಟ್ಟಿದ್ದಾನೆ.

ಏಪ್ರಿಲ್ 1 ರಂದು ತನ್ನ ಜಮೀನನ ಬಳಿ ತೆರಳಿದ್ದ 85 ವರ್ಷದ ವೃದ್ಧೆ ದಾರಿ ಗೊತ್ತಿಲ್ಲದೆ ಬೇರೆ ಕಡೆ ಹೋಗಿದ್ದಾರೆ. ಈ ವೇಳೆ ಬೈಕ್​ ಮೂಲಕ ಬಂದ ಮಿಥುನ್ ಕುಮಾರ್ (32) ಎಂಬಾತ ವೃದ್ಧೆ ಜೊತೆ ಮಾತನಾಡಿ ಜಮೀನಿಗೆ ಡ್ರಾಪ್ ಮಾಡುವುದಾಗಿ ಹೇಳಿದ್ದಾನೆ. ನಡೆಯಲು ಕಷ್ಟಸಾಧ್ಯವೆಂದರಿತ ವೃದ್ಧೆ ಈತನ ಮಾತು ನಂಬಿದ ಬೈಕ್​ನಲ್ಲಿ ಕುಳಿತಿದ್ದಾರೆ. ಆದರೆ ಅಜ್ಜಿಯನ್ನು ಜಮೀನಿಗೆ ಕರೆದುಕೊಂಡು ಹೋಗದೆ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದಿದ್ದಾನೆ.

ಇದನ್ನೂ ಓದಿ: ಬೇಸಿಗೆ ರಜೆ ನಿಮಿತ್ತ ಅಜ್ಜಿ ಮನೆಗೆ ಬಂದಿದ್ದ ಬಾಲಕ ಶವವಾಗಿ ಪತ್ತೆ: ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ

ಅಜ್ಜಿಯನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದ ಮಿಥುನ್ ಕುಮಾರ್ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಪ್ರತಿರೋಧವೊಡ್ಡಿದಾಗ ಕಲ್ಲನ್ನು ತಲೆ ಮೇಲೆ ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿ ಬಳಿಕ ಅತ್ಯಾಚಾರ ಎಸಗಿದ್ದಾನೆ. ಇತ್ತ ಜಮೀನಿಗೆ ಹೋಗಿ ಬರುತ್ತೇನೆ ಎಂದು ಹೋದ ತಾಯಿ ಮನೆಗೆ ಬಂದಿಲ್ಲ ಎಂದು ಏಪ್ರಿಲ್ 2 ರಂದು ಕುಟುಂಬಸ್ಥರು ಶೋಧ ಆರಂಭಿಸಿದ್ದಾರೆ. ಈ ವೇಳೆ ಯರೆಹಳ್ಳಿ ಗ್ರಾಮದ ಜಮೀನಿನಲ್ಲಿ ಸಂಪೂರ್ಣ ಬೆತ್ತಲು ಸ್ಥಿತಿಯಲ್ಲಿ ವೃದ್ಧೆ ಮೃತದೇಹ ಪತ್ತೆಯಾಗಿದೆ.

ಘಟನೆ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ವೇಳೆ ಐದು ವರ್ಷಗಳ ಹಿಂದೆ ಇದೇ ರೀತಿಯಲ್ಲಿ ವೃದ್ಧೆ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿದ್ದ ಮಾಹಿತಿ ಲಭ್ಯವಾಗಿದೆ. ಅದೇ ಸುಳಿವು ಹಿಡಿದು ಮಿಥುನ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಾಡಿದ ಪಾಪ ಕೃತ್ಯ ಒಪ್ಪಿಕೊಂಡಿದ್ದಾನೆ. ಕೊಲೆ ಅತ್ಯಾಚಾರ ಖಾತ್ರಿಯಾಗುತ್ತಿದ್ದಂತೆ ಅನುಮಾನಾಸ್ಪದ ಸಾವು ಪ್ರಕರಣವನ್ನು ಕೊಲೆ ಅತ್ಯಾಚಾರ ಪ್ರಕರಣವಾಗಿ ಬದಲಾಯಿಸಿ ಆರೋಪಿಯನ್ನು ಜೈಲಿಗಟ್ಟಿದ್ದಾರೆ.

ಮತ್ತಷ್ಟು ಕ್ರೈಂ ನ್ಯೂಸ್ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Thu, 6 April 23