Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೇನು ಕೆಲವೇ ದಿನದಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ತುಂಬು ಗರ್ಭಿಣಿಯ ದಾರುಣ ಹತ್ಯೆ!

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಒಂಬತ್ತು ತಿಂಗಳ ಗರ್ಭಿಣಿ ಸುವರ್ಣಾ ಮಠಪತಿ ಅವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಒಂದು ವಾರದ ಹಿಂದೆ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ್ದರು. ಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸುವರ್ಣಾ ಮೃತಪಟ್ಟಿದ್ದಾರೆ. ಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೇನು ಕೆಲವೇ ದಿನದಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ತುಂಬು ಗರ್ಭಿಣಿಯ ದಾರುಣ ಹತ್ಯೆ!
ಮೃತ ಸುವರ್ಣಾ
Follow us
Sahadev Mane
| Updated By: ವಿವೇಕ ಬಿರಾದಾರ

Updated on:Dec 21, 2024 | 2:31 PM

ಬೆಳಗಾವಿ, ಡಿಸೆಂಬರ್​ 21: ಬೆಳಗಾವಿ (Belagavi) ಜಿಲ್ಲೆಯ ಅಥಣಿ (Athani) ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿ 9 ತಿಂಗಳ ಗರ್ಭಿಣಿಯನ್ನು (Pregnant) ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸುವರ್ಣಾ ಮಠಪತಿ (33) ಗರ್ಭಿಣಿ. ಮೃತ ಸುವರ್ಣಾ ಮಠಪತಿಗೆ ನಾಲ್ವರು ಹೆಣ್ಣು ಮಕ್ಕಳಿದ್ದಾರೆ. ಗರ್ಭಿಣಿ ಸುವರ್ಣಾ ಐದನೇ ಮಗುವಿನ ನಿರೀಕ್ಷೆಯಲ್ಲಿದ್ದರು. ವೈದ್ಯರು ಮುಂದಿನ ವಾರದಲ್ಲಿ ಹೆರಿಗೆಗೆ ದಿನಾಂಕ ನಿಗದಿಪಡಿಸಿದ್ದರು.

ಆದರೆ, ಒಂದು ವಾರದ ಹಿಂದೆ ಮನೆಯೊಳಗೆ ಯಾರೂ ಇಲ್ಲದ ಸಮಯದಲ್ಲಿ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಗರ್ಭಿಣಿ ಸುವರ್ಣ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡ ಸುವರ್ಣ ಅವರನ್ನು ಬಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶುಕ್ರವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಅಮಾನವೀಯ ಘಟನೆ: 2 ತಿಂಗಳ ಹೆಣ್ಣು ಹಸುಗೂಸನ್ನೇ ಕೆರೆಗೆ ಎಸೆದ ತಾಯಿ

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮೃತ ಗರ್ಭಿಣಿ ಸುವರ್ಣ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದು, ಈ ವೇಳೆ ಗರ್ಭದಲ್ಲಿದ್ದ ಮಗು ಕೂಡ ಮೃತಪಟ್ಟಿದ್ದು, ಅದು ಗಂಡು ಮಗು ಎಂದು  ವೈದ್ಯರು ದೃಢಪಟ್ಟಿಸಿದ್ದಾರೆ. ನಾಲ್ಕು ಜನ ಹೆಣ್ಣು ಮಕ್ಕಳ ಬಳಿಕ ಸುವರ್ಣ ಅವರು ಈಗ ಮತ್ತೆ ಗರ್ಭಿಣಿಯಾಗಿದ್ದರು.

ದುಷ್ಕರ್ಮಿಗಳು ಕೊಲೆಗೂ ಮುನ್ನ ಹೊಟ್ಟೆಗೆ ಒದ್ದು ಗಾಯಗೊಳಿಸಿ, ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಎರಡು ತಂಡಗಳನ್ನು ರಚನೆ ಮಾಡಿ ಅಥಣಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಖ್ಯ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ನವನಗರದಲ್ಲಿ ನಡೆದಿದೆ. ಅನ್ನಪೂರ್ಣ ರಾಠೋಡ್ (54) ಮೃತ ಮುಖ್ಯ ಶಿಕ್ಷಕಿ. ಮುಖ್ಯ ಶಿಕ್ಷಕಿ ಮನೆಯಲ್ಲಿ ಒಂಟಿಯಾಗಿದ್ದ ಸಮಯದಲ್ಲಿ ತಲೆಗೆ ರೊಟ್ಟಿ ಮಾಡುವ ಕಟ್ಟಿಗೆಯ ಕ್ವಾಮನಗಿಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೆಬ್ಬೇನಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಅನುಮಾನ ವ್ಯಕ್ತವಾಗಿದೆ. ಪೂಜಾ (25) ಮೃತ ಮಹಿಳೆ. ಗ್ರಾಮದ ಹೊಂಡದಲ್ಲಿ ಪೂಜಾ ಶವ ಪತ್ತೆಯಾಗಿದೆ. ಗಂಡನ ಮನೆಯವರು ಕಿರುಕುಳ ಕೊಟ್ಟು ಕೊಲೆ ಮಾಡಿದ್ದಾರೆ ಎಂದು ಪೂಜಾ ಆರೋಪ ಕೇಳಿಬಂದಿದೆ. ಪತಿ‌ ಓಂಕಾರ್‌, ಆತನ ಅಣ್ಣ ರಾಜಣ್ಣ ವಿರುದ್ಧ ಆರೋಪಿಸಲಾಗಿದೆ.

ರಾಜಣ್ಣ ನಾಲ್ಕು ದಿನಗಳ ಹಿಂದೆ ಪೂಜಾಳನ್ನ ಗಂಡನ ಮನೆಗೆ ಕರೆದೊಯ್ದಿದ್ದರು. ಬಳಿಕ ಎರಡು ದಿನಗಳಿಂದ ಪೂಜಾ ನಾಪತ್ತೆಯಾಗಿದ್ದರು. ಇಂದು (ಡಿ. 21) ಸೆಬ್ಬೇನಹಳ್ಳಿಯ ಹೊಂಡದಲ್ಲಿ ಪೂಜಾ ಶವ ಪತ್ತೆಯಾಗಿದೆ. ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:49 pm, Sat, 21 December 24

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ