ಹೈದರಾಬಾದ್ ಆಯ್ತು, ರಾಜ್ಯದಲ್ಲೂ ಅಟ್ಟಹಾಸ ಮೆರೆದ ಕಾಮುಕರು
ಕಲಬುರಗಿ: ಇತ್ತೀಚೆಗಷ್ಟೇ ಪಕ್ಕದ ರಾಜ್ಯದ ಹೈದರಾಬಾದ್ನಲ್ಲಿ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಘಟನೆ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ರಾಜ್ಯದಲ್ಲೂ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಚಿಂಚೋಳಿ ತಾಲೂಕಿನ ಸುಲೇಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ನಿನ್ನೆ ಮಧ್ಯಾಹ್ನ ಮನೆ ಮುಂದೆ ಆಟವಾಡುತ್ತಿದ್ದಾಗ ಬಾಲಕಿ ಕಾಣೆಯಾಗಿದ್ದಳು. ನಂತರ ರಾತ್ರಿ ಶವವಾಗಿ ಪತ್ತೆಯಾಗಿದ್ದಾಳೆ. ದುಷ್ಕರ್ಮಿಗಳು ಬಾಲಕಿ ಮೇಲೆ ಅತ್ಯಾಚಾರ ನಡೆಸಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ […]
ಕಲಬುರಗಿ: ಇತ್ತೀಚೆಗಷ್ಟೇ ಪಕ್ಕದ ರಾಜ್ಯದ ಹೈದರಾಬಾದ್ನಲ್ಲಿ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಘಟನೆ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ರಾಜ್ಯದಲ್ಲೂ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ.
ಚಿಂಚೋಳಿ ತಾಲೂಕಿನ ಸುಲೇಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ನಿನ್ನೆ ಮಧ್ಯಾಹ್ನ ಮನೆ ಮುಂದೆ ಆಟವಾಡುತ್ತಿದ್ದಾಗ ಬಾಲಕಿ ಕಾಣೆಯಾಗಿದ್ದಳು. ನಂತರ ರಾತ್ರಿ ಶವವಾಗಿ ಪತ್ತೆಯಾಗಿದ್ದಾಳೆ.
ದುಷ್ಕರ್ಮಿಗಳು ಬಾಲಕಿ ಮೇಲೆ ಅತ್ಯಾಚಾರ ನಡೆಸಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಸುಲೇಪೇಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Published On - 7:57 am, Tue, 3 December 19