ಮಧ್ಯಪ್ರದೇಶ: ನೆತ್ತರು ಸುರಿಸುತ್ತಾ ಜನರಲ್ಲಿ ಸಹಾಯ ಕೇಳಿದ ಅತ್ಯಾಚಾರ ಸಂತ್ರಸ್ತೆ; ದೂರ ಓಡಿಸಿದ ಜನ

"ಪ್ರಕರಣ ದಾಖಲಿಸಲಾಗಿದೆ. ಅಪರಾಧಿಗಳನ್ನು ಶೀಘ್ರದಲ್ಲೇ ಗುರುತಿಸಲು ಮತ್ತು ಹಿಡಿಯಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯು ದೃಢಪಟ್ಟಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಚಿನ್ ಶರ್ಮಾ ತಿಳಿಸಿದ್ದಾರೆ.

ಮಧ್ಯಪ್ರದೇಶ: ನೆತ್ತರು ಸುರಿಸುತ್ತಾ ಜನರಲ್ಲಿ ಸಹಾಯ ಕೇಳಿದ ಅತ್ಯಾಚಾರ ಸಂತ್ರಸ್ತೆ; ದೂರ ಓಡಿಸಿದ ಜನ
ಅತ್ಯಾಚಾರ ಸಂತ್ರಸ್ತೆ

Updated on: Sep 27, 2023 | 7:25 PM

ಉಜ್ಜಯಿನಿ ಸೆಪ್ಟೆಂಬರ್ 27: ಮಧ್ಯಪ್ರದೇಶದ (Madhya Pradesh) ಉಜ್ಜಯಿನಿಯಲ್ಲಿ (Ujjain) ಸೋಮವಾರ 12 ವರ್ಷದ ಬಾಲಕಿಯೊಬ್ಬಳು ಅರೆಬೆತ್ತಲೆಯಾಗಿ ಬೀದಿಯಲ್ಲಿ ಸಹಾಯಕ್ಕಾಗಿ ಓಡಾಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಆಕೆಗೆ ರಕ್ತಸ್ರಾವವಾಗುತ್ತಿತ್ತು. ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರ ಎಸಗಿ ನಗರದ ದಂಡಿ ಆಶ್ರಮದ ಬಳಿ ಎಸೆದಿದ್ದಾರೆ ಎನ್ನಲಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳಲ್ಲಿ, ಹುಡುಗಿ ವಸತಿ ಪ್ರದೇಶದಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಒಂದು ಚಿಂದಿ ಬಟ್ಟೆಯನ್ನು ಮೈಗೆ ಹೊದ್ದು ಆಕೆ ನಡೆಯುತ್ತಾ ಬರುತ್ತಿರುವುದು ವಿಡಿಯೊದಲ್ಲಿದೆ. ಹಾಗೆ ನಡೆದು ಬರುತ್ತಿರುವಾಗ ಮನೆಯೊಂದರ ಹೊರಗೆ ನಿಂತಿರುವ ಒಬ್ಬ ವ್ಯಕ್ತಿಯಲ್ಲಿ ಆಕೆ ಸಹಾಯ ಬೇಡುತ್ತಾಳೆ. ಆತ ಆಕೆಯಲ್ಲಿ ಹೋಗು ಹೋಗು ಎಂದು ಕೈಸನ್ನೆ ಮಾಡುತ್ತಿರುವುದು ವಿಡಿಯೊದಲ್ಲಿದೆ.

ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗಾಗಿ ಇಂದೋರ್‌ಗೆ ಕಳುಹಿಸಲಾಗಿದೆ.

“ಪ್ರಕರಣ ದಾಖಲಿಸಲಾಗಿದೆ. ಅಪರಾಧಿಗಳನ್ನು ಶೀಘ್ರದಲ್ಲೇ ಗುರುತಿಸಲು ಮತ್ತು ಹಿಡಿಯಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯು ದೃಢಪಟ್ಟಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಚಿನ್ ಶರ್ಮಾ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಹುಡುಗಿ ಎಲ್ಲಿಂದ ಬಂದಿದ್ದಾಳೆಂದು ನಮಗೆ ನಿಖರವಾಗಿ ಹೇಳಲು ಸಾಧ್ಯವಾಗಲಿಲ್ಲ. ಆದರೆ ಆಕೆಯ ಉಚ್ಚಾರಣೆಯು ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನವರು ಎಂದು ಸೂಚಿಸುತ್ತದೆ ಎಂದು ಅವರು ಹೇಳಿದರು.

ಅಪ್ರಾಪ್ತ ಬಾಲಕಿಯ ಅತ್ಯಾಚಾರದ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಉಜ್ಜಯಿನಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಸಮಿತಿಯು ಪೊಲೀಸರು ಸಲ್ಲಿಸಿದ ಆರಂಭಿಕ ವರದಿಯ ವಿವರಗಳನ್ನು ಕೇಳಿದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಲ್ಲಿ ಉಲ್ಲೇಖಿಸಲಾದ ಮಾರ್ಗಸೂಚಿಗಳನ್ನು ಅನುಸರಿಸಲು ಅವರನ್ನು ಕೇಳಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಮುಖ್ಯಮಂತ್ರಿ ಚೌಹಾಣ್​ರನ್ನು ಬಿಜೆಪಿ ಕಡೆಗಣಿಸುತ್ತಿದೆಯೇ? ಅಚ್ಚರಿ ಮೂಡಿಸಿದ ಸಿಎಂ ನಡೆ

ಆಕೆ ಸಹಾಯಕ್ಕೆ ಅಂಗಲಾಚುತ್ತಿದ್ದರೂ ಯಾರೂ ಆ ಬಾಲಕಿಗೆ ಸಹಾಯ ಮಾಡಲು ಮುಂದಾಗಲಿಲ್ಲ. ಇದು ಸಮಾಜದ ಕರಾಳ ಮುಖವನ್ನು ಬಹಿರಂಗಪಡಿಸುತ್ತದೆ ಎಂದು ಎನ್‌ಸಿಪಿಸಿಆರ್ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Wed, 27 September 23