ಸೇಡು ತೀರಿಸಿಕೊಳ್ಳಲು ಎಂಟು ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ 13 ವರ್ಷದ ದೆಹಲಿ ಹುಡುಗ

ತಮ್ಮ ಮಗ ತನ್ನ ಸ್ನೇಹಿತನೊಂದಿಗೆ ಮನೆಯ ಹೊರಗೆ ಆಟವಾಡುತ್ತಿರುವುದನ್ನು ಕುಟುಂಬದವರು ಕೊನೆಯದಾಗಿ ನೋಡಿದ್ದರು. ಆರಂಭದಲ್ಲಿ, ತನಿಖಾಧಿಕಾರಿಗಳು ಹುಡುಗನನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ.

ಸೇಡು ತೀರಿಸಿಕೊಳ್ಳಲು ಎಂಟು ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ 13 ವರ್ಷದ ದೆಹಲಿ ಹುಡುಗ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 05, 2022 | 10:49 AM

ನವ ದೆಹಲಿ: ದೆಹಲಿಯ ರೋಹಿಣಿಯಲ್ಲಿ ಎಂಟು ವರ್ಷದ ಬಾಲಕನನ್ನು ಅವನ 13 ವರ್ಷದ ಸ್ನೇಹಿತನು ಜಗಳ ಮಾಡಿ, ನಂತರ ಅಪಹರಿಸಿ (Kidnap) ಕೊಂದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸದ್ಯ ಆರೋಪಿ ಯುವಕನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಆರೋಪಿ ಮತ್ತು ಆತನ ಸ್ನೇಹಿತ ಇಬ್ಬರೂ ಜಗಳವಾಡಿದ್ದಾರೆ. ಆ ಘಟನೆಯಿಂದ ಆರೋಪಿಗಳು ಸೇಡು ತೀರಿಸಿಕೊಳ್ಳಲು ಬಯಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ ನಾಪತ್ತೆಯಾದ ನಂತರ ಬಾಲಕನ ಕುಟುಂಬದವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ತಮ್ಮ ಮಗ ತನ್ನ ಸ್ನೇಹಿತನೊಂದಿಗೆ ಮನೆಯ ಹೊರಗೆ ಆಟವಾಡುತ್ತಿರುವುದನ್ನು ಕುಟುಂಬದವರು ಕೊನೆಯದಾಗಿ ನೋಡಿದ್ದರು. ಆರಂಭದಲ್ಲಿ, ತನಿಖಾಧಿಕಾರಿಗಳು ಹುಡುಗನನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಆದರೆ ಆತನ 13 ವರ್ಷದ ಸ್ನೇಹಿತನನ್ನು ವಿಚಾರಿಸಿದಾಗ, ಕಾಡಿಗೆ ಕರೆದೊಯ್ದು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುಡುಗನ ತಾಯಿಯ ಹೇಳಿಕೆಯನ್ನು ಆಧರಿಸಿ, ಪ್ರಕರಣವನ್ನು ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದ್ದು, 13 ವರ್ಷದ ಬಾಲಕನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಹುಡುಗನನ್ನು ಕಲ್ಲಿನಿಂದ ಹೊಡೆದು ಕೊಂದಿದ್ದು, ಮತ್ತು ಆತನ ಫೋನ್ ಕಿತ್ತುಕೊಂಡಿದ್ದಾನೆ ಎಂದು ಬಾಲಾಪರಾಧಿ ಬಹಿರಂಗಪಡಿಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ರೋಹಿಣಿ) ಪ್ರಣವ್ ತಾಯಲ್ ಹೇಳಿದ್ದಾರೆ.

ಹುಡುಗನ ದೇಹ ಮತ್ತು ಮೊಬೈಲ್ ಫೋನ್​ನ್ನು ಸೊಹಾಟಿ ಗ್ರಾಮದ ಕಾಡಿನ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಆರೋಪಿಯನ್ನು ಕೊಲೆಯ ಮೊಕದ್ದಮೆ ಹೂಡಲಾಗಿದೆ. ಬಾಲಾಪರಾಧಿ ಸೇಡು ತೀರಿಸಿಕೊಳ್ಳಲು ಹಲ್ಲೆ ಮಾಡಲು ಯೋಜಿಸಿದ್ದ ಎಂದು ನಮ್ಮ ತನಿಖೆಯಿಂದ ತಿಳಿದುಬಂದಿದೆ. ಹಲ್ಲೆಯ ನಂತರ ಬಾಲಾಪರಾಧಿ ಪರಾರಿಯಾಗಿದ್ದಾನೆ ಎಂದು ಅವರು ಹೇಳಿದರು.

ಘಟನೆಗೂ ಮುನ್ನ ಬಾಲಕ ಮತ್ತು ಬಾಲಾಪರಾಧಿ ಪರಸ್ಪರ ಜಗಳವಾಡಿದ್ದಾರೆ. ಹಾಗಾಗಿ ಸೇಡು ತೀರಿಸಿಕೊಳ್ಳಲು ಯೋಜಿಸಿ, ಆತನನ್ನು ಕಲ್ಲಿನಿಂದ ಹೊಡೆದಿದ್ದಾನೆ ಎಂದು ಶ್ರೀ ತಯಾಲ್ ಹೇಳಿದ್ದಾರೆ. ಸದ್ಯ ನಾವು ಹುಡುಗನನ್ನು ಬಂಧಿಸಿದ್ದೇವೆ ಮತ್ತು ಅವನ ಕುಟುಂಬ ಸದಸ್ಯರೊಂದಿಗೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಸೂಕ್ತ ಕೌನ್ಸೆಲಿಂಗ್ ಮಾಡಲಾಗುತ್ತಿದೆ ಎಂದು ಡಿಸಿಪಿ ಹೇಳಿದ್ದಾರೆ.

ಇದನ್ನೂ ಓದಿ:

ಹಾಸನ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ ಬೆಳಕಿಗೆ! 55 ಜನ ಕಾರ್ಮಿಕರನ್ನು ಕೂಡಿ ಹಾಕಿ ಬಲವಂತದಿಂದ ದುಡಿಸಿದ ವ್ಯಕ್ತಿ

ಪೊಲೀಸರು ಮೊಬೈಲ್ ಫೋನ್ ಕೇಳುವಂತಿಲ್ಲ: ಜನಾಕ್ರೋಶಕ್ಕೆ ಪೊಲೀಸ್ ಆಯುಕ್ತ ಕಮಲ್​ ಪಂತ್ ಉತ್ತರ

ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!