AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ನಾಲ್ವರು ಅಪ್ರಾಪ್ತ ಬಾಲಕರಿಂದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಮುಂದುವರೆಯುತ್ತಿರುವ ಜಗತ್ತಿನಲ್ಲಿ ಸೋದರ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಅದರಂತೆ ನಾಲ್ವರು ಅಪ್ರಾಪ್ತ ಬಾಲಕರು ಸೇರಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಕಲಬುರಗಿ ನಗರ ಮಹಿಳಾ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Kalaburagi News: ನಾಲ್ವರು ಅಪ್ರಾಪ್ತ ಬಾಲಕರಿಂದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಕಲಬುರಗಿ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 06, 2023 | 11:26 AM

Share

ಕಲಬುರಗಿ: ಮುಂದುವರೆಯುತ್ತಿರುವ ಜಗತ್ತಿನಲ್ಲಿ ಸೋದರ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಅದರಂತೆ ನಾಲ್ವರು ಅಪ್ರಾಪ್ತ ಬಾಲಕರು ಸೇರಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಕಲಬುರಗಿ(Kalaburagi)ನಗರ ಮಹಿಳಾ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ(ಜು.5) ಮಧ್ಯಾಹ್ನ ನಾಲ್ವರು ಅಪ್ರಾಪ್ತ ವಯಸ್ಸಿನ ಹುಡುಗರು ಬಾಲಕಿಯನ್ನ ಮನೆ ಮೇಲಿನ ಮಹಡಿ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಈ ಬಗ್ಗೆ ಕಲಬುರಗಿ ನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಸ್ವಸ್ಥ ಬಾಲಕಿಯನ್ನ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕುಡಿದ ಮತ್ತಿನಲ್ಲಿ ಸೆಲ್ಫ್ ಆಕ್ಸಿಡೆಂಟ್; ಆಟೋ ಡ್ರೈವರ್ ಸಾವು

ಬೆಂಗಳೂರು: ಕುಡಿದ ಮತ್ತಿನಲ್ಲಿ ಸೆಲ್ಫ್ ಆಕ್ಸಿಡೆಂಟ್ ಮಾಡಿಕೊಂಡು ಆಟೋ ಡ್ರೈವರ್​ ಸಾವನ್ನಪ್ಪಿದ್ದ ಘಟನೆ ಎರಡು ದಿನಗಳ ಹಿಂದೆ ಎಫ್ಟಿಐ ರಿಂಗ್ ರೋಡ್​ನಿಂದ ಲಗ್ಗೆರೆ ಬ್ರಿಡ್ಜ್ ಕಡೆ ತೆರಳುತ್ತಿದ್ದ ವೇಳೆ ನಡೆದಿತ್ತು. ನಂಜುಂಡಸ್ವಾಮಿ (29) ಮೃತ ವ್ಯಕ್ತಿ. ಆಟೋಡ್ರೈವರ್ ನಂಜುಂಡ ಸ್ವಾಮಿ ಸೇರಿದಂತೆ ಮೂವರು ರಾತ್ರಿ ಪಾರ್ಟಿ ಮಾಡಿದ್ದಾರೆ. ತಡರಾತ್ರಿ 1:30 ಒನ್ ವೇನಲ್ಲಿ ಚಾಲನೆ ಮಾಡಿದ್ದ ಆಟೋ ಡ್ರೈವರ್. ಡಿವೈಡರ್​ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಕೊನೆಯುಸಿರೆಳದಿದ್ದಾನೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆ ಸಂಬಂಧ ರಾಜಾಜಿನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Assam: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಮಾಡಿ ಶವವನ್ನು ನದಿಗೆ ಎಸೆದ ಆಟೋ ಚಾಲಕನ ಬಂಧನ

ಮನೆಯ ಕೋಣೆಯಲ್ಲಿ ಅವಿತು ಕೂತಿದ್ದ ಮೊಸಳೆ; ಭಯಭೀತರಾದ ಸ್ಥಳೀಯರು

ರಾಯಚೂರು: ತಾಲೂಕಿನ ಶಕ್ತಿನಗರದ ಜನತಾ ಕಾಲೋನಿಯಲ್ಲಿರುವ ರಾಮಯ್ಯ ಎನ್ನುವವರ ಮನೆಯ ಕೋಣೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಅವಿತು ಕೂತಿದ್ದ ಮೊಸಳೆ ನೋಡಿ ಸ್ಥಳೀಯರು ಭಯಭೀತರಾಗಿದ್ದಾರೆ. ಹತ್ತಿರದಲ್ಲಿ ಕೃಷ್ಣಾ ನದಿ ಇರುವ ಕಾರಣ ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬಂದಿದೆ. ಬಳಿಕ ಕಾಲೋನಿ ನಿವಾಸಿಗಳು ಪ್ಲ್ಯಾನ್ ಮಾಡಿ ಮೊಸಳೆ ಸೆರೆ ಹಿಡಿದು ಅರಣ್ಯ ಇಲಾಖೆ‌ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ