ಬೆಂಗಳೂರಿನಲ್ಲಿ ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದೆ. ಆಟೋ ಚಾಲಕನೋರ್ವ, ಯುವತಿಯನ್ನು ಹಿಂಬಾಲಿಸಿಕೊಂಡು ಹೋಗಿ ಆಕೆಯ ಮುಂದೆ ಪ್ಯಾಂಟ್​ ಬಿಚ್ಚಿ ತನ್ನ ಖಾಸಗಿ ಅಂಗ ಪ್ರದರ್ಶಿಸಿದ್ದಾನೆ. ಬಳಿಕ ಸ್ಥಳದಿಂದ ಎಸ್ಕೇಪ್​ ಆಗಿ ಸ್ವಲ್ಪ ಸಮಯದ ನಂತರ ಮತ್ತೆ ಯುವತಿ ಮುಂದೆ ಬಂದು ಸೈಕೋನಂತೆ ವರ್ತಿಸಿದ್ದಾನೆ.

ಬೆಂಗಳೂರಿನಲ್ಲಿ ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!
ಕ್ರೈಂ
Follow us
Jagadisha B
| Updated By: ರಮೇಶ್ ಬಿ. ಜವಳಗೇರಾ

Updated on: Sep 27, 2024 | 7:21 PM

ಬೆಂಗಳೂರು, (ಸೆಪ್ಟೆಂಬರ್ 27): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಕೃತ ಕಾಮಿಗಳ ಸಂಖ್ಯೆ ಹೆಚ್ಚಾಗಿತ್ತಿದೆ. ಇತ್ತೀಚೆಗೆ ಕಬ್ಬನ್ ಪಾರ್ಕ್‌ನಲ್ಲೊಬ್ಬ, ಜಯನಗರದ ಮಹಿಳಾ ಕಾಲೇಜಿನ ಬಳಿ ಒಬ್ಬ ತಮ್ಮ ಮ್ಮ ಖಾಸಗಿ ಅಂಗಾಂಗವನ್ನು ತೋರಿಸಿ ವಿಕೃತಿ ಮೆರೆದಿದ್ದ. ಇದೀಗ ಇದೇ ರೀತಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ರಾಜಾಜಿನಗರದಲ್ಲಿ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುವ ಯುವತಿಯೊಬ್ಬಳಿಗೆ ಆಟೋ ಚಾಲಕ ತನ್ನ ಪ್ಯಾಂಟ್​ ಬಿಚ್ಚಿ ಖಾಸಗಿ ಭಾಗವನ್ನು ತೋರಿಸಿ ವಿಕೃತಿ ಮೆರೆದಿದ್ದಾನೆ. ಅದೂ ಕೂಡ ಹಾಡ ಹಗಲೇ ತೀರಾ ವಿಕೃತಿಯ ರೀತಿಯಲ್ಲಿ ಮಹಿಳೆ ಮುಂದೆ ಎರಡೆರೆಡು ಬಾರಿ ಪ್ಯಾಂಟ್ ಬಿಚ್ಚಿ ಅಂಗಾಂಗ ತೋರಿಸಿದ್ದಾನೆ.

ಇಂದು (ಸೆಪ್ಟೆಂಬರ್ 27) ಯುವತಿ ಮಧ್ಯಾಹ್ನ ಊಟಕ್ಕೆಂದು ಬ್ಯೂಟಿ ಪಾರ್ಲರ್ ನಿಂದ ಅನತಿ ದೂರದಲ್ಲಿದ್ದ ಮನೆಗೆ ಹೋಗುವಾಗ ಈಸ್ಟ್ ವೆಸ್ಟ್ ಕಾಲೇಜು ಬಳಿ ಫಾಲೋ ಮಾಡಿಕೊಂಡು ಬಂದ ಆಟೋ ಚಾಲಕ, ಯಾರೂ ಇಲ್ಲದ ಸಮಯ ನೋಡಿ ಪ್ಯಾಂಟ್ ಜಿಪ್ ಬಿಚ್ಚಿ ಖಾಸಗಿ ಅಂಗ ಪ್ರದರ್ಶಿಸಿದ್ದಾನೆ. ಆಟೋ ಚಾಲಕನ ಲೈಂಗಿಕ ಚೇಷ್ಟೆಗೆ ಬ್ಯೂಟಿಷಿಯನ್ ಯುವತಿ ಬೆಚ್ಚಿ ಬಿದ್ದಿದ್ದಾಳೆ. ಆ ವೇಳೆ ಭಯದಿಂದ ಯುವತಿ ತನ್ನ ಕಾಲಲ್ಲಿದ್ದ ಚಪ್ಪಲಿ ಕಿತ್ತುಕೊಂಡು ಎಸೆದಿದ್ದಾಳೆ. ಬಳಿಕ ಆಟೋ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: Viral: ರೈಲಿನಲ್ಲಿ ಖಾಸಗಿ ಅಂಗ ತೋರಿಸಿದ ವ್ಯಕ್ತಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

ಇದಾದ ಬಳಿಕ ಸ್ವಲ್ಪ ಹೊತ್ತಿನಲ್ಲೇ ಸೈಕೋಪಾತ್ ಆಟೋ ಚಾಲಕ, ಮತ್ತೆ ಯುವತಿ ಮುಂದೆ ಬಂದು ಮತ್ತೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದಾನೆ. ಇದನ್ನ ಕಂಡ ಯುವತಿ ಬೊಬ್ಬೆ ಹಾಕಿದ್ದಾಳೆ. ಬಳಿಕ ಏನಾಯ್ತು ಎಂದು ಸ್ಥಳೀಯರು ಆಗಮಿಸುತ್ತಿದ್ದಂತೆಯೇ ಸೈಕೋ ಆಟೋ ಚಾಲಕ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ಯುವತಿ ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಅದು ಕೂಡ ಈತ ಒಂದು ಬಾರಿಯಾದರೆ ನೋಡಿಯೂ ನೋಡದಂತೆ ಸುಮ್ಮನಿದ್ದುಬಿಡಬಹುದು. ಆದರೆ, ಎರಡೆರಡು ಬಾರಿ ಅದೇ ಯುವತಿಯನ್ನು ಟಾರ್ಗೆಟ್ ಮಾಡಿಕೊಂಡು ಬಂದು ಹೀಗೆ ವರ್ತಿಸಿದ್ದಾರೆ. ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯ ಎಲ್ಲ ಚಟುವಟಿಕೆಗಳನ್ನು ಈತ ಗಮನಿಸಿದ್ದ. ಆಗ ಬ್ಯೂಟಿ ಪಾರ್ಲರ್ ಇರುವ ಸ್ಥಳದಲ್ಲಿ ಜನರು ಇಲ್ಲದ ವೇಳೆ ಈ ಯುವತಿ ತನಗೆ ಎಲ್ಲಾದರೂ ಒಬ್ಬಂಟಿಯಾಗಿ ಸಿಗುತ್ತಾಳೆಯೇ ಎಂದು ಗಮನಿಸಿ ಈ ರೀತಿ ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ