ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಭದ್ರಾವತಿ ಶಾಸಕರ ವಿರುದ್ಧ ಪೋಸ್ಟ್ ಹಾಕಿದ್ದಕ್ಕೆ ಹಲ್ಲೆ ಆರೋಪ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮೆರೆದಿದ್ದಾರೆ. ಊಟ ಪಾರ್ಸಲ್ ತೆಗೆದುಕೊಳ್ಳಲು ಹೊಟೇಲ್​ಗೆ ಹೋಗಿದ್ದ ಬಿಜೆಪಿ ಮುಖಂಡರೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಹಲ್ಲೆಗೊಳಗಾದ ವ್ಯಕ್ತಿ​ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಭದ್ರಾವತಿ ಶಾಸಕರ ವಿರುದ್ಧ ಪೋಸ್ಟ್ ಹಾಕಿದ್ದಕ್ಕೆ ಹಲ್ಲೆ ಆರೋಪ
ಶಿವಮೊಗ್ಗದ ಭದ್ರತಾವತಿ ಪಟ್ಟಣದಲ್ಲಿ ಹಲ್ಲೆಯಿಂದ ಗಾಯಗೊಂಡ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್
Follow us
Basavaraj Yaraganavi
| Updated By: Rakesh Nayak Manchi

Updated on:Dec 11, 2023 | 9:21 AM

ಶಿವಮೊಗ್ಗ, ಡಿ.11: ಹೊಟೇಲ್​ಗೆ ನುಗ್ಗಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಿನ್ನೆ (ಡಿ.10) ರಾತ್ರಿ ನಡೆದಿದೆ. ಗೋಕುಲ್ ಕೃಷ್ಣನ್ ಹಲ್ಲೆಗೊಳಗಾದ ಬಿಜೆಪಿ ಮುಖಂಡನಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಊಟ ಪಾರ್ಸಲ್ ತೆಗೆದುಕೊಳ್ಳಲು ಗೋಕುಲ್ ಅವರು ಭದ್ರಾವತಿಯ ಬಿ.ಹೆಚ್.ರಸ್ತೆಯ ಕಾಂಚನ್ ಹೋಟೆಲ್​ಗೆ ಹೋಗಿದ್ದರು. ಈ ವೇಳೆ 6-7 ಮಂದಿ ಇದ್ದ ದುಷ್ಕರ್ಮಿಗಳ ಗುಂಪು ಹೊಟೇಲ್​ಗೆ ನುಗ್ಗಿ ದೊಣ್ಣೆಯಿಂದ ಗೋಕುಲ್ ಕೃಷ್ಣನ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಣೆ ಮತ್ತು ಕಿವಿಗೆ ಬಲವಾಗಿ ಹೊಡೆತ ಬಿದ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ.

ಇದನ್ನೂ ಓದಿ: ಬೆಳಗಾವಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್​ಗೆ ಚಾಕು ಇರಿತ: ಕಾಂಗ್ರೆಸ್ ಎಂಎಲ್‌ಸಿ ಸೇರಿ ಐವರ ವಿರುದ್ಧ ಎಫ್​ಐಆರ್

ಕೂಡಲೇ ಗೋಕುಲ್ ಅವರನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕುಲ್ ಅವರು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ವಿರುದ್ಧ ಅಕ್ರಮ ದಂಧೆ ಕುರಿತು ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಪೋಸ್ಟ್ ಮಾಡಿದ ಬಳಿಕ ನಿನ್ನೆ ಕಾರು ಜಖಂಗೊಳಿಸಿದ್ದ ದುಷ್ಕರ್ಮಿಗಳ ರಾತ್ರಿ ವೇಳೆ ಬಿಜೆಪಿ ಮುಖಂಡ ಗೋಕುಲ್​ಗೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯನ್ನು ಶಿವಮೊಗ್ಗ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಖಂಡಿಸಿದ್ದಾರೆ.

ಕಾರು ಜಖಂ ಗೊಳಿಸಿದ್ದ ಮೂವರು ಆರೋಪಿಗಳು ಅರೆಸ್ಟ್

ಬಿಜೆಪಿ ಮುಖಂಡನ ಹೊಸ ಕಾರು ಜಖಂಗೊಳಿಸಿದ್ದ ಪ್ರಕರಣ ಸಂಬಂಧ ಭದ್ರಾವತಿಯ ನ್ಯೂಟೌನ್ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಗಣೇಶ್ (22), ಹರ್ಷ (22), ನಾಗೇಗೌಡ (22) ಬಂಧಿತ ಆರೋಪಿಗಳಾಗಿದ್ದಾರೆ. ಭದ್ರಾವತಿಯ ವಿಶ್ವೇಶ್ವರಯ್ಯ ನಗರದಲ್ಲಿ ಡಿಸೆಂಬರ್ 9 ರಂದು ಮಧ್ಯಾಹ್ನ ವೇಳೆ ಗೋಕುಲ್ ಅವರ ಹೊಸ ಕಾರು ಜಖಂಗೊಳಿಸಿದ್ದರು. ಇದರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಹಲ್ಲೆ ಬಗ್ಗೆ ಮಾತನಾಡಿದ ಗಾಯಾಳು ಗೋಕುಲ್, ಭದ್ರಾವತಿಯಲ್ಲಿ ಇಸ್ಪೀಟ್, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿದೆ. ಈ ದಂಧೆಯ ಹಿಂದೆ ಶಾಸಕ ಬಿ.ಕೆ.ಸಂಗಮೇಶ್ವರ್​ ಕೈವಾಡ ಇದೆ. ಇದನ್ನು ಪ್ರಶ್ನಿಸಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದಕ್ಕೆ ಕಾರು‌ ಜಖಂಗೊಳಿಸಿದ್ದಾರೆ. ರಾತ್ರಿ ಹೋಟೆಲ್​ನಲ್ಲಿ ಊಟ ತರಲು ಹೋದಾಗ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದಾಗಲೂ ಹಲ್ಲೆ ಮಾಡಿದ್ದಾರೆ. ಹೀಗಾಗಿ ಭದ್ರಾವತಿಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದ್ರಾವತಿಯಲ್ಲಿ ಹೇಳೋರು ಕೇಳೋರು‌ ಇಲ್ಲದಾಗಿದೆ ಎಂದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 am, Mon, 11 December 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್