ಆಟವಾಡುತ್ತಾ ಮೂರನೇ ಮಹಡಿಯಿಂದ ಬಿದ್ದ ಬಾಲಕ: ಚಿಕಿತ್ಸೆ ಫಲಕಾರಿಯಾಗದೆ ಸಾವು

ಆಟವಾಡುತ್ತಾ ಮೂರನೇ ಮಹಡಿಯಿಂದ ಬಾಲಕ ಬಿದ್ದಿದ್ದಾನೆ. ಖಾಸಗಿ ಆಸ್ಪತ್ರೆಗೆ ಬಾಲಕನನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ.

ಆಟವಾಡುತ್ತಾ ಮೂರನೇ ಮಹಡಿಯಿಂದ ಬಿದ್ದ ಬಾಲಕ: ಚಿಕಿತ್ಸೆ ಫಲಕಾರಿಯಾಗದೆ ಸಾವು
ಮಹಮ್ಮದ್ ಸಾಹಿಲ್ (10) ಮೃತ ಬಾಲಕ.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: May 27, 2022 | 3:44 PM

ಮಂಗಳೂರು: ಆಟವಾಡುತ್ತಾ ಮೂರನೇ ಮಹಡಿಯಿಂದ ಬಾಲಕ ಬಿದ್ದು ಸಾವನ್ನಪ್ಪಿರುವಂತಹ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಜಿನ ಕಲ್ಲಡ್ಕದಲ್ಲಿ ನಡೆದಿದೆ. ಮಹಮ್ಮದ್ ಸಾಹಿಲ್ (10) ಮೃತ ಬಾಲಕ. ನಿನ್ನೆ ರಾತ್ರಿ ವೇಳೆ ಆಟವಾಡುತ್ತಾ ಮೂರನೇ ಮಹಡಿಯಿಂದ ಬಾಲಕ ಬಿದ್ದಿದ್ದಾನೆ. ಖಾಸಗಿ ಆಸ್ಪತ್ರೆಗೆ ಬಾಲಕನನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಬಂಟ್ಚಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಏಕಾಏಕಿ ಕಟ್ಟಡ ಕುಸಿತ: ಕಾರ್ಮಿಕ ಸಾವು

ರಾಯಚೂರು: ಬಸ್ ನಿಲ್ದಾಣ ನೆಲಸಮ ಮಾಡೊ ವೇಳೆ ಏಕಾಏಕಿ ಕಟ್ಟಡ ಕುಸಿತದಿಂದಾಗಿ ಕಾರ್ಮಿಕ ಮೃತಪಟ್ಟಿರುವಂತಹ ಘಟನೆ ಜಿಲ್ಲೆ ಸಿರವಾರ ಪಟ್ಟಣದಲ್ಲಿ ಘಟನೆ ನಡೆದಿದೆ. ಸಿರವಾರ ಮೂಲದ ಬಾಬು(30)ಮೃತ ಕಾರ್ಮಿಕ. ಸಿರವಾರ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಹಳೆ ಕಟ್ಟಡ ಡೆಮಾಲಿಷನ್ ಮಾಡುವ ವೇಳೆ ಅವಘಡ ಸಂಭವಿಸಿದೆ. ಕೆಳಗಡೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಬಾಬುನ ಮೇಲೆ ಕಟ್ಟಡದ ಅವಶೇಷಗಳು ಕುಸಿದು ಬಿದ್ದಿದೆ. ಘಟನೆಯಲ್ಲಿ ಕಾರ್ಮಿಕ ಬಾಬು ಸ್ಥಳದಲ್ಲಿ ಸಾವನ್ನಪ್ಪಿದ್ದು, ಸ್ಥಳಕ್ಕೆ ಸಿರವಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಕುಸಿದು ಬಿದ್ದ ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ಸಾವು

ಬೆಳಗಾವಿ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಚಾಲಕ ಅದಗೊಂಡುಬಾಬು ಪಾಟೀಲ್‌(60), ಪತ್ನಿ ಛಾಯಾ(55) ಚಂಪಾತಾಯಿ ಮಗದುಮ್(80), ಮಹೇಶ್ ಪಾಟೀಲ್(23) ಮೃತ ದುರ್ದೈವಿಗಳು. ನಿಪ್ಪಾಣಿಯಿಂದ ಸ್ಥವನಿಧಿಗೆ ಮದುವೆಗೆ ತೆರಳುತ್ತಿದ್ದರು. ಬೆಳಗಾವಿಯಿಂದ ನಿಪ್ಪಾಣಿ ಕಡೆಗೆ ಲಾರಿ ಬರುತ್ತಿತ್ತು. ಈ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರ್​ಗೆ ಲಾರಿ ಡಿಕ್ಕಿ ಹೊಡೆದಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ನಿಪ್ಪಾಣಿ ಶಹರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟ್ಯಾಂಕರ್-ಟಾಟಾ ಏಸ್ ನಡುವೆ ಅಪಘಾತ ಓರ್ವ ಸಾವು

ಧಾರವಾಡ: ಟ್ಯಾಂಕರ್-ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿರು ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅರೇಕುರಹಟ್ಟಿ ಬಳಿ ನಡೆದಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಟ್ಯಾಂಕರ್ ಹುಬ್ಬಳ್ಳಿಯಿಂದ ಬಾಗಲಕೋಟ ಕಡೆಗೆ ಹೋಗುತ್ತಿತ್ತು. ನರಗುಂದಿಂದ ಹುಬ್ಬಳ್ಳಿ ಕಡೆಗೆ ಟಾಟಾ ಏಸ್ ಹೋಗುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ