ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ

ಹೆಣ್ಣು ಮಕ್ಕಳು ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೂಡ ಕಡಿಮೆ ಎನ್ನುವಂತಾಗಿದೆ. ಚಿಕ್ಕಮಕ್ಕಳಿಂದ ಹಿಡಿದು ವಯಸ್ಸಾದ ಅಜ್ಜಿಯವರೆಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ ಅಜ್ಜಂಪುರ(Ajjampura) ಠಾಣಾ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ ಮಾಡಿದ ಅಮಾನುಷ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ
5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 19, 2024 | 7:54 PM

ಚಿಕ್ಕಮಗಳೂರು, ಸೆ.19: ಜಿಲ್ಲೆಯ ಅಜ್ಜಂಪುರ(Ajjampura) ಠಾಣಾ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರ ಕೊಲೆ ಮಾಡಿದ ಅಮಾನುಷ ಘಟನೆ ನಡೆದಿದೆ. ಜ್ವರ ಬಂದ ಹಿನ್ನೆಲೆ ಅಂಗನವಾಡಿಗೆ ಹೋಗದೇ ಬಾಲಕಿ ಮನೆಯಲ್ಲೇ ಇದ್ದಳು. ಇದನ್ನು ತಿಳಿದುಕೊಂಡು ಮನೆಗೆ ನುಗ್ಗಿದ ದುರುಳರು, ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದಾರೆ. ನಂತರ ಬಾಲಕಿಯ ಮೃತದೇಹವನ್ನು ಬೆಡ್​ಶೀಟ್​ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದಾರೆ.

ಮನೆಯಲ್ಲಿ ಏಕಾಂಗಿಯಾಗಿದ್ದ ಬಾಲಕಿ

ಹೌದು, ಜ್ವರ ಎಂದು ಮಗು ಅಂಗನವಾಡಿಗೆ ಹೋಗಿರಲಿಲ್ಲ. ಇತ್ತ ತಾಯಿ ಜಮೀನು ಕೆಲಸಕ್ಕೆ ತೆರಳಿದ್ದರು. ಇದನ್ನೇ ಕಾಯುತ್ತಿದ್ದ ಕಾಮಾಂಧರು ಏಕಾಂಗಿಯಾಗಿದ್ದ ಮಗು ಮೇಲೆ ಅಮಾನುಷವಾಗಿ ಹಿಂಸೆಗೈದು, ಹತ್ಯೆ ಮಾಡಿದ್ದಾರೆ. ಇತ್ತ ತಾಯಿ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಅಜ್ಜಂಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನೂ ಓದಿ:ಕಾನ್ಸ್​​ಟೇಬಲ್​​ ವಿರುದ್ಧದ ಲೈಂಗಿಕ ಕಿರುಕುಳ ಕೇಸ್​ಗೆ ಬಿಗ್ ಟ್ವಿಸ್ಟ್​: ಉಲ್ಟಾ ಹೊಡೆದ ಮಹಿಳೆ

ಅಪ್ರಾಪ್ತೆಯನ್ನು ಅಪಹರಿಸಿದ್ದ ಅಪರಾಧಿಗೆ 5 ವರ್ಷ ಕಠಿಣ ಜೈಲುಶಿಕ್ಷೆ

ಕೊಡಗು: ಅಪ್ರಾಪ್ತೆಯನ್ನು ಅಪಹರಿಸಿದ್ದ ಅಪರಾಧಿಗೆ ಐದು ವರ್ಷ ಕಠಿಣ ಶಿಕ್ಷೆ ನೀಡಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಅಸ್ಸಾಂನ ಕೂಲಿ ಕಾರ್ಮಿಕ ಸುರಸ್ ಅಲಿ(22)ಗೆ ಕಠಿಣ ಜೈಲು ಶಿಕ್ಷೆ ವಿಧಿಸಿ ನ್ಯಾಯಾದೀಶೆ ಶ್ರೀಮತಿ ಜಿ.ಪ್ರಶಾಂತಿ ಅವರು ತೀರ್ಪು ನೀಡಿದ್ದಾರೆ. 2021ರ ಆಗಸ್ಟ್‌ 11ರಂದು ಅಪ್ರಾಪ್ತೆyನ್ನು ಅಪಹರಿಸಿದ್ದ. ಈ ಹಿನ್ನಲೆ ಪೋಕ್ಸೋ ಕಾಯ್ದೆ, ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಬಳಿಕ ಸುಂಟಿಕೊಪ್ಪ ಠಾಣೆ ಪೊಲೀಸರು ತನಿಖೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Thu, 19 September 24

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?