ಬೆಂಗಳೂರು: ಜೈಲಿನಿಂದ ಹೊರಬಂದ ಕಲವೇ ಗಂಟೆಗಳಲ್ಲಿ ರೌಡಿಶೀಟರ್ ಹತ್ಯೆ ಪ್ರಕರಣ; ಪರಪ್ಪನ ಅಗ್ರಹಾರ ಠಾಣೆಯಲ್ಲಿ ದೂರು ದಾಖಲು

ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಕುಖ್ಯಾತ ರೌಡಿಶೀಟರ್​ ಸಿದ್ದಾಪುರ ಮಹೇಶ್​ನನ್ನು ಹೊಸ ರೋಡ್​ ಜಂಕ್ಷನ್​ ಬಳಿ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರು: ಜೈಲಿನಿಂದ ಹೊರಬಂದ ಕಲವೇ ಗಂಟೆಗಳಲ್ಲಿ ರೌಡಿಶೀಟರ್ ಹತ್ಯೆ ಪ್ರಕರಣ; ಪರಪ್ಪನ ಅಗ್ರಹಾರ ಠಾಣೆಯಲ್ಲಿ ದೂರು ದಾಖಲು
ಪ್ರಾತಿನಿಧಿಕ ಚಿತ್ರ
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 05, 2023 | 10:09 AM

ಬೆಂಗಳೂರು, ಆ.5: ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಕುಖ್ಯಾತ ರೌಡಿಶೀಟರ್(Rowdy Sheeter)​ ಸಿದ್ದಾಪುರ ಮಹೇಶ್​ನನ್ನು ಹೊಸ ರೋಡ್​ ಜಂಕ್ಷನ್​ ಬಳಿ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧಿ ಗ್ಯಾಂಗ್​ ಎಂದು ಗುರುತಿಸಿಕೊಂಡಿದ್ದ ರೌಡಿಶೀಟರ್​​​ ವಿಲ್ಸನ್​​ಗಾರ್ಡನ್​​​ ನಾಗ, ಡಬಲ್ ಮೀಟರ್​ ಮೋಹನ್​​, ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಇಬ್ಬರು ರೌಡಿಶೀಟರ್​ ಮಧ್ಯೆ ದ್ವೇಷ

ಹೌದು, ವಿಲ್ಸನ್​​ಗಾರ್ಡನ್​​​ ನಾಗ ಮತ್ತು ಸಿದ್ದಾಪುರ ಮಹೇಶ್ ಮಧ್ಯೆ ಮೊದಲಿನಿಂದಲೂ ದ್ವೇಷವಿತ್ತು. ಇನ್ನು 2020 ರಲ್ಲಿ ಜಯನಗರದಲ್ಲಿ ನಡೆದಿದ್ದ ಮದನ್​ ಕೊಲೆ ಕೇಸ್​ನಲ್ಲಿ ಭಾಗಿಯಾಗಿ ಮಹೇಶ್​ ಜೈಲು ಸೇರಿದ್ದ. ಆತನ ಆಗಮನಕ್ಕೆ ಕಾಯಿತ್ತಿದ್ದ ಗ್ಯಾಂಗ್.​ ಇದೀಗ ಆತ ಹೊರ ಬರುತ್ತಲೇ ಕಾರು ಅಡ್ಡಗಟ್ಟಿ ಮನಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸರು ಐಪಿಸಿ ಸೆಕ್ಷನ್​​​ 302, 120ಬಿ, 143, 147, 148, 343, 327, 149ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಗದಗ: ಕೌಟುಂಬಿಕ ಕಲಹದಲ್ಲಿ ಮಹಿಳೆ ಹತ್ಯೆ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೆ ಕಾರಣವಾಯ್ತಾ ಒಂದು ಫೋನ್ ಕಾಲ್?

ಮೂಡಿಗೆರೆ ತಾಲೂಕಿನಲ್ಲಿ ಮುಂದುವರಿದ ಕಾಡಾನೆ ಉಪಟಳ;

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಮುಂದುವರಿದ ಕಾಡಾನೆ ಉಪಟಳ ಮುಂದುವರೆದಿದ್ದು, ಕಾಫಿ ತೋಟದಲ್ಲಿಯೇ ಎರಡು ಕಾಡಾನೆ ಬೀಡು ಬಿಟ್ಟಿದೆ. ಕಾಡಾನೆ ದಾಂಧಲೆಗೆ ಲಕ್ಷಾಂತರ ಮೌಲ್ಯದ ಕಾಫಿ ಮೆಣಸು, ಅಡಿಕೆ, ಬಾಳೆ ನಾಶವಾಗಿದ್ದು, ಬಡವನದಿಣ್ಣೆ, ಮೇಗೂರು,ಮಲೆಮನೆ, ಸುಂದರಬೈಲ್ ಬಾಳೂರು ಗ್ರಾಮಗಳಲ್ಲಿ ಆನೆಗಳು ಸಂಚಾರ ಮಾಡುತ್ತಿದೆ. ನಿರಂತರವಾಗಿ ಕಾಫಿ ತೋಟದಲ್ಲಿ ಬೆಳೆ ನಾಶ ಮಾಡುತ್ತಿರುವ ಕಾಡಾನೆಗಳಿಂದ ಕಾಫಿ ತೋಟಕ್ಕೆ ಕೆಲಸಕ್ಕೆ ಬರಲು ಕಾರ್ಮಿಕರ ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನಲೆ ಕಾಡಾನೆ ಸ್ಥಳಾಂತರ ಮಾಡುವಂತೆ ಸರ್ಕಾರಕ್ಕೆ ಗ್ರಾಮಸ್ಥರ ಆಗ್ರಹಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:07 am, Sat, 5 August 23

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?