ಬೆಂಗಳೂರು, ಆ.5: ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಕುಖ್ಯಾತ ರೌಡಿಶೀಟರ್(Rowdy Sheeter) ಸಿದ್ದಾಪುರ ಮಹೇಶ್ನನ್ನು ಹೊಸ ರೋಡ್ ಜಂಕ್ಷನ್ ಬಳಿ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧಿ ಗ್ಯಾಂಗ್ ಎಂದು ಗುರುತಿಸಿಕೊಂಡಿದ್ದ ರೌಡಿಶೀಟರ್ ವಿಲ್ಸನ್ಗಾರ್ಡನ್ ನಾಗ, ಡಬಲ್ ಮೀಟರ್ ಮೋಹನ್, ಸುನೀಲ್ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹೌದು, ವಿಲ್ಸನ್ಗಾರ್ಡನ್ ನಾಗ ಮತ್ತು ಸಿದ್ದಾಪುರ ಮಹೇಶ್ ಮಧ್ಯೆ ಮೊದಲಿನಿಂದಲೂ ದ್ವೇಷವಿತ್ತು. ಇನ್ನು 2020 ರಲ್ಲಿ ಜಯನಗರದಲ್ಲಿ ನಡೆದಿದ್ದ ಮದನ್ ಕೊಲೆ ಕೇಸ್ನಲ್ಲಿ ಭಾಗಿಯಾಗಿ ಮಹೇಶ್ ಜೈಲು ಸೇರಿದ್ದ. ಆತನ ಆಗಮನಕ್ಕೆ ಕಾಯಿತ್ತಿದ್ದ ಗ್ಯಾಂಗ್. ಇದೀಗ ಆತ ಹೊರ ಬರುತ್ತಲೇ ಕಾರು ಅಡ್ಡಗಟ್ಟಿ ಮನಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸರು ಐಪಿಸಿ ಸೆಕ್ಷನ್ 302, 120ಬಿ, 143, 147, 148, 343, 327, 149ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಗದಗ: ಕೌಟುಂಬಿಕ ಕಲಹದಲ್ಲಿ ಮಹಿಳೆ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೆ ಕಾರಣವಾಯ್ತಾ ಒಂದು ಫೋನ್ ಕಾಲ್?
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಮುಂದುವರಿದ ಕಾಡಾನೆ ಉಪಟಳ ಮುಂದುವರೆದಿದ್ದು, ಕಾಫಿ ತೋಟದಲ್ಲಿಯೇ ಎರಡು ಕಾಡಾನೆ ಬೀಡು ಬಿಟ್ಟಿದೆ. ಕಾಡಾನೆ ದಾಂಧಲೆಗೆ ಲಕ್ಷಾಂತರ ಮೌಲ್ಯದ ಕಾಫಿ ಮೆಣಸು, ಅಡಿಕೆ, ಬಾಳೆ ನಾಶವಾಗಿದ್ದು, ಬಡವನದಿಣ್ಣೆ, ಮೇಗೂರು,ಮಲೆಮನೆ, ಸುಂದರಬೈಲ್ ಬಾಳೂರು ಗ್ರಾಮಗಳಲ್ಲಿ ಆನೆಗಳು ಸಂಚಾರ ಮಾಡುತ್ತಿದೆ. ನಿರಂತರವಾಗಿ ಕಾಫಿ ತೋಟದಲ್ಲಿ ಬೆಳೆ ನಾಶ ಮಾಡುತ್ತಿರುವ ಕಾಡಾನೆಗಳಿಂದ ಕಾಫಿ ತೋಟಕ್ಕೆ ಕೆಲಸಕ್ಕೆ ಬರಲು ಕಾರ್ಮಿಕರ ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನಲೆ ಕಾಡಾನೆ ಸ್ಥಳಾಂತರ ಮಾಡುವಂತೆ ಸರ್ಕಾರಕ್ಕೆ ಗ್ರಾಮಸ್ಥರ ಆಗ್ರಹಿಸಿದ್ದಾರೆ.
ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:07 am, Sat, 5 August 23