ಬೆಂಗಳೂರು: ಮಲ್ಲೇಶ್ವರಂ ರೈಲ್ವೆ ಟ್ರ್ಯಾಕ್​ ಬಳಿ ವ್ಯಕ್ತಿಯ ಶವ ಪತ್ತೆ

ಬೆಂಗಳೂರಿನ ಮಲ್ಲೇಶ್ವರಂ ರೈಲ್ವೆ ಟ್ರ್ಯಾಕ್​ ಬಳಿ ವ್ಯಕ್ತಿ ಶವ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದಲ್ಲಿ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸೇವೆ ಕಾಯಂಗೊಳಿಸದ ಹಿನ್ನೆಲೆ ವಿಷಸೇವಿಸಿ ಆತ್ಮಹತ್ಯೆ ಯತ್ನ ಮಾಡಿದ್ದಾರೆ.

ಬೆಂಗಳೂರು: ಮಲ್ಲೇಶ್ವರಂ ರೈಲ್ವೆ ಟ್ರ್ಯಾಕ್​ ಬಳಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರಿನ ಮಲ್ಲೇಶ್ವರಂ ರೈಲ್ವೆ ಟ್ರ್ಯಾಕ್​ ಬಳಿ ವ್ಯಕ್ತಿಯ ಶವ ಪತ್ತೆ
Follow us
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi

Updated on: Feb 05, 2024 | 7:52 PM

ಬೆಂಗಳೂರು, ಫೆ.5: ನಗರದ ಮಲ್ಲೇಶ್ವರಂ (Malleshwaram) ರೈಲ್ವೆ ಟ್ರ್ಯಾಕ್​ ಬಳಿ ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು (Dead Body Found), ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ, ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ರವಾನಿಸಲಾಗಿದೆ.

ವಿಷಸೇವಿಸಿ ಶಿಕ್ಷಕ ಆತ್ಮಹತ್ಯೆ ಯತ್ನ

ಬಾಗಲಕೋಟೆ: ಸೇವೆ ಕಾಯಂಗೊಳಿಸದ ಹಿನ್ನೆಲೆ ಮನನೊಂದ ಶಿಕ್ಷಕರೊಬ್ಬರು ಆತ್ಮಹತ್ಯೆಗೆ (Suicide) ಯತ್ನಿಸಿದರ ಘಟನೆ ಬಾಗಲಕೋಟೆ (Bagalkot) ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ. ಸಿದ್ದೇಶ್ವರ ಅನುದಾನಿತ ಪ್ರೌಢಶಾಲೆಯ ಶಿಕ್ಷಕ ವಿಶ್ವನಾಥ್ ವಡ್ಡರ್ ಆತ್ಮಹತ್ಯೆಗೆ ಯತ್ನಿಸಿದವರು. ಪ್ರೌಢಶಾಲಾ ಆಡಳಿತ ಮಂಡಳಿಯು ಅರ್ಹತೆ ಇದ್ದರೂ ತನ್ನನ್ನು ಕಾಯಂ ಮಾಡದೆ ಬೇರೊಬ್ಬ ಶಿಕ್ಷಕರನ್ನು ಕಾಯಂಗೊಳಿಸಲು ಮುಂದಾಗಿದೆ ಎಂದು ವಿಶ್ವನಾಥ್ ಮನನೊಂದಿದ್ದರು.

ಇದನ್ನೂ ಓದಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತ ದಂಪತಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣು

ಅಸ್ವಸ್ಥ ಶಿಕ್ಷಕನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೇವೆ ಕಾಯಂ ವಿವಾದ ಕೋರ್ಟ್​​ನಲ್ಲಿ ವಿಚಾರಣೆ ಹಂತದಲ್ಲಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಶಿಕ್ಷಕ ವಿಶ್ವನಾಥ್ ವಡ್ಡರ್ ಅವರು ಕಳೆದ 8 ವರ್ಷಗಳಿಂದ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರಾಗಿ ಸೇವೆ‌ ಸಲ್ಲಿಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ