AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಕೌಟುಂಬಿಕ ಕಲಹದಲ್ಲಿ ಮಹಿಳೆ ಹತ್ಯೆ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೆ ಕಾರಣವಾಯ್ತಾ ಒಂದು ಫೋನ್ ಕಾಲ್?

ಗದಗ ಜಿಲ್ಲೆಯ ರೋಣ ತಾಲೂಕಿನ ಭಾಸಲಾಪೂರ ಗ್ರಾಮದಲ್ಲಿ ಆಗಸ್ಟ್ 2 ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯ ಕೊಲೆಯ ಸತ್ಯಾಂಶ ಬೆಳಕಿಗೆ ಬಂದಿದೆ.

ಗದಗ: ಕೌಟುಂಬಿಕ ಕಲಹದಲ್ಲಿ ಮಹಿಳೆ ಹತ್ಯೆ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೊಲೆಗೆ ಕಾರಣವಾಯ್ತಾ ಒಂದು ಫೋನ್ ಕಾಲ್?
ಆರೋಪಿ ಬಂಧನ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Aug 04, 2023 | 1:40 PM

Share

ಗದಗ, ಆ.4: ಜಿಲ್ಲೆಯ ರೋಣ(Ron)ತಾಲೂಕಿನ ಭಾಸಲಾಪೂರ ಗ್ರಾಮದಲ್ಲಿ ಆಗಸ್ಟ್ 2 ರಂದು ನಡೆದ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಮೊದಲು ಕೌಟುಂಬಿಕ ಕಲಹದಿಂದ ಕೊಲೆ ಮಾಡಲಾಗಿದೆಯೆಂದು ತಿಳಿದಿದ್ದ ಪೊಲೀಸರಿಗೆ. ತನಿಖೆ ವೇಳೆ ಹತ್ಯೆಗೆ ಕಾರಣವೇನೆಂಬ ಸತ್ಯಾಂಶ ಬೆಳಕಿಗೆ ಬಂದಿದೆ. ಹೌದು, ಪದೇ ಪದೇ ಅಪರಿಚಿತ ನಂಬರ್​ನಿಂದ ಪತ್ನಿಗೆ ಬರುತ್ತಿದ್ದ ಕರೆಯಿಂದ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಪತಿ ಕೊಲೆ ಮಾಡಿದ್ದಾನೆ ಎಂದು ಗದಗ ಎಸ್ಪಿ ಬಿಎಸ್ ನೇಮಗೌಡ ಅವರು ಸ್ಪಷ್ಟಪಡಿಸಿದ್ದಾರೆ.

ಒಂದು ಫೋನ್ ಕಾಲ್ ಅನುಮಾನ, ಪತ್ನಿ‌ ಕೊಂದ ಪತಿ

ಇನ್ನು 15 ವರ್ಷದ ಹಿಂದೆ ಮದವೆಯಾಗಿದ್ದ ಸಂಗೀತಾ ಹಾಗೂ ಮಹೇಶ ಪಾಟೀಲ್ ದಂಪತಿಗೆ ಮೂವರು ಮಕ್ಕಳು ಕೂಡ ಇದ್ದರು. ಸುಖವಾಗಿ ಜೀವನ ನಡೆಸುತ್ತಿದ್ದ ಕುಟುಂಬದಲ್ಲಿ ಬರ ಸಿಡಿಲು ಬಡಿದಂತಾಗಿದೆ. ಒಂದು ತಿಂಗಳಿಂದ ಅಪರಿಚಿತ ನಂಬರ್​ನಿಂದ ಬರುತ್ತಿದ್ದ ಕರೆಯಿಂದ ಅನುಮಾನಗೊಂಡ ಪತಿ. ಪತ್ನಿ ಸಂಗೀತಾ ಪಾಟೀಲ್​ನ್ನು ಕೊಲೆ ಮಾಡಲು ಪ್ಲಾನ್ ಮಾಡಿಯೇ ಜಮೀನಿಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ನಾಲ್ಕೈದು ಬಾರಿ ಚಾಕುವಿನಿಂದ ಇರಿದು, ಆಕೆಯನ್ನ ಕೃಷಿ ಹೊಂಡಕ್ಕೆ ಹಾಕಿದ್ದ. ಈ ಘಟನೆಗೆ ಸಂಬಂಧಪಟ್ಟಂತೆ ಇದೀಗ ರೋಣ ಪೊಲೀಸರಿಂದ ಕೊಲೆ ಮಾಡಿದ ಆರೋಪಿ ಮಹೇಶ ಪಾಟೀಲ್​ನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:3 ದಿನಗಳ ಹಿಂದೆಯೇ ಕೊಲೆ..ಶವಗಳ ಜತೆಯೇ ಇದ್ದ ಟೆಕ್ಕಿ! FSL ಪರಿಶೀಲನೆ ವೇಳೆ ಹೊರಬಿತ್ತು ಭಯಾನಕ ಸತ್ಯ

ಕೋರ್ಟ್‌ಗೆ ಕರೆದೊಯ್ಯುವಾಗ ವಿಚಾರಣಾಧೀನ ಕೈದಿ ಎಸ್ಕೇಪ್

ಚಾಮರಾಜನಗರ: ಉಪಕಾರಾಗೃಹದಿಂದ ತಮಿಳುನಾಡು ಸತ್ಯಮಂಗಲಂ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ವಿಚಾರಣಾಧೀನ ಕೈದಿ ಎಸ್ಕೇಪ್ ಆದ ಘಟನೆ ನಡೆದಿದೆ. ತಮಿಳುನಾಡಿನ ಹಾಸನೂರು ಬಳಿ ಟೀ ಕುಡಿಯುವಾಗ ಚಾಮರಾಜನಗರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರಿಗೆ ಚಳ್ಳೇಹಣ್ಣು ತಿನಿಸಿ‌ ಪರಾರಿಯಾಗಿದ್ದಾನೆ. ಸುರೇಶ(28) ಪರಾರಿಯಾದ ವಿಚಾರಣಾಧೀನ ಕೈದಿ. ಇತ ಅನೇಕ ಕಳ್ಳತನ ಪ್ರಕರಣಗಳ ಹಿನ್ನಲೆ ಚಾಮರಾಜನಗರ ಜೈಲಿನಲ್ಲಿದ್ದ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ