AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ಮನೆ ಹಾನಿ: ಪರಿಹಾರ ಆಯ್ಕೆಯಲ್ಲಿ ತಾರತಮ್ಯ ಮಾಡಿದ್ದಕ್ಕೆ ರೈತ ಆತ್ಮಹತ್ಯೆ

ಮಳೆಯಿಂದ ಮನೆ ಹಾನಿಯಾದವರಿಗೆ ಪರಿಹಾರ ನೀಡುವ ಆಯ್ಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಮನನೊಂದು ರೈತ ನೇಣಿಗೆ ಶರಣಾದ ಘಟನೆ ಧಾರವಾಡ ತಾಲೂಕಿನ ಮಾದನಬಾವಿ ಗ್ರಾಮದಲ್ಲಿ ನಡೆದಿದೆ.

ಮಳೆಯಿಂದ ಮನೆ ಹಾನಿ: ಪರಿಹಾರ ಆಯ್ಕೆಯಲ್ಲಿ ತಾರತಮ್ಯ ಮಾಡಿದ್ದಕ್ಕೆ ರೈತ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 28, 2022 | 10:32 PM

Share

ಧಾರವಾಡ: ಮಳೆಯಿಂದ ಮನೆ ಹಾನಿಯಾದವರಿಗೆ ಪರಿಹಾರ ನೀಡುವ ಆಯ್ಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಮನನೊಂದು ರೈತ (Farmer) ನೇಣಿಗೆ ಶರಣಾದ ಘಟನೆ ಧಾರವಾಡ (Dharwad) ತಾಲೂಕಿನ ಮಾದನಬಾವಿ ಗ್ರಾಮದಲ್ಲಿ ನಡೆದಿದೆ. ಭೀಮಪ್ಪ ಪಾಟೀಲ (60) ಮೃತ ದುರ್ದೈವಿ. ಕಳೆದ ತಿಂಗಳು ಸುರಿದ ಮಳೆಗೆ ಭೀಮಪ್ಪನ ಮನೆ ಬಿದ್ದಿತ್ತು. ಈ ಹಿನ್ನೆಲೆ ಅಧಿಕಾರಿಗಳು ಭೀಮಪ್ಪ ಪಾಟೀಲ ಮೆನೆಯನ್ನು ‘ಬಿ’ ಕೆಟಗೇರಿಗೆ ಸೇರಿಸಿದ್ದರು. ಆದರೆ ನಿನ್ನೆ ಏಕಾಏಕಿ ಸಿ ಕೆಟಗೇರಿಗೆ ಸೇರ್ಪಡೆ ಮಾಡಿದ್ದಾರೆ. ಇದರಿಂದ ಮನನೊಂದು ಭೀಮಪ್ಪ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಜಿಲ್ಲಾ ಆಸ್ಪತ್ರೆ ಶವಗಾರದ ಎದುರು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆಗೆ ಕಾಂಗ್ರೆಸ್ ಕಾರ್ಯಕರ್ತರು ಕೂಡ ಸಾಥ್ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ತಹಶೀಲ್ದಾರ್​ಸಂತೋಷ ಹಿರೇಮಠ ಭೇಟಿ ನೀಡಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದಾರೆ. ಗರಗ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾರ್ಟ್​​ ಸರ್ಕ್ಯೂಟ್​​ನಿಂದ ಕಾರ್ಮಿಕ ಸಾವು

ತುಮಕೂರು: ಶಾರ್ಟ್​​ ಸರ್ಕ್ಯೂಟ್​​ನಿಂದ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾವಗಡ ತಾಲೂಕಿನ ಕ್ಯಾತಗಾನಚೆರ್ಲು ಸಮೀಪ ನಡೆದಿದೆ. ಕಾರ್ಮಿಕ ಗೋಪಾಲ್ ಯಾದವ್(26) ಮೃತ ದುರ್ದೈವಿ. ಗೋಪಾಲ್ ಸೋಲಾರ್ ಪಾರ್ಕ್​ನಲ್ಲಿ ಟೆಕ್ನಿಷಿಯನ್ ಆಗಿದ್ದು, ಸೋಲಾರ್​​ನಿಂದ ಶಾಕ್​ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಮತ್ತೊರ್ವರಿಗೆ ಗಾಯವಾಗಿ ಪಾವಗಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟಾಟಾ ಏಸ್ ಪಲ್ಟಿ; ಎಮ್ಮೆಗಳ ಸಾವು

ರಾಮನಗರ: ಆಕ್ರಮವಾಗಿ ಕಸಾಯಿ ಖಾನೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿದ ಐದು ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಶಾನಭೋಗನಹಳ್ಳಿ ಗ್ರಾಮದ ಬಳಿ ನಡೆದಿದೆ. ಒಂದು ಎಮ್ಮೆ ಪ್ರಾಣಾಪಾಯದಿಂದ ಪಾರಾಗಿದೆ. ಮೈಸೂರಿನಿಂದ ಬೆಂಗಳೂರಿಗೆ ಎಮ್ಮೆಗಳನ್ನು ಸಾಗಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಘಟನೆ ನಂತರ ಚಾಲಕ ಪರಾರಿಯಾಗಿದ್ದಾನೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಸ ಹಾಕುವ ವಿಚಾರಕ್ಕೆ ‌ಕಿರಿಕ್: ಚಾಕು ಇರಿತ

ರಾಮನಗರ: ಕಸ ಹಾಕುವ ವಿಚಾರಕ್ಕೆ ‌ಕಿರಿಕ್ ಆಗಿ ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯ ಬೆನ್ನಿಗೆ ಚಾಕು ಹಾಕಿದ ಘಟನೆ ಚನ್ನಪಟ್ಟಣ ನಗರದ ಇಂದಿರಾ ಕ್ಯಾಂಟೀನ್​​ನಲ್ಲಿ ನಡೆದಿದೆ. ಹಲ್ಲೆಗೊಳಗಾದ ಚನ್ನಪಟ್ಟಣ ನಗರದ ‌ಆನಂದಪುರ ನಿವಾಸಿ  ವಡಿವೇಲುಗೆ ಗಂಭೀರ ಗಾಯವಾಗಿದ್ದು, ವಡಿವೇಲ್ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಗೆ ಎಂಎಲ್​ಸಿ  ಸಿ‌ ಪಿ ಯೋಗೇಶ್ವರ್ ‌ಭೇಟಿ ನೀಡಿ ವಡಿವೇಲ್ ಆರೋಗ್ಯ ‌ವಿಚಾರಿಸಿದ್ದಾರೆ. ಚನ್ನಪಟ್ಟಣ ಪುರ‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:37 pm, Fri, 28 October 22