ಬೆಂಗಳೂರು: ದೊಣ್ಣೆಯಿಂದ ಹೊಡೆದು ಯುವಕನ ಬರ್ಬರ ಕೊಲೆ

ದೊಣ್ಣೆಯಿಂದ ಹೊಡೆದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಪಿಳ್ಳಣ್ಣ ಗಾರ್ಡನ್​ನಲ್ಲಿ ನಡೆದಿದೆ. ನಿನ್ನೆ (ಏ.02)ರ ತಡರಾತ್ರಿ ದುಷ್ಕರ್ಮಿಗಳು ದೊಣ್ಣೆಯಿಂದ ಸತೀಶ್​ನ ತೆಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ನಂತರ ರೈಲ್ವೆ ಟ್ರ್ಯಾಕ್ ಬಳಿ ಇರುವ ಖಾಲಿ ಜಾಗದಲ್ಲಿ ಮೃತದೇಹ ಬಿಸಾಡಿ ಪರಾರಿಯಾಗಿದ್ದಾರೆ.

ಬೆಂಗಳೂರು: ದೊಣ್ಣೆಯಿಂದ ಹೊಡೆದು ಯುವಕನ ಬರ್ಬರ ಕೊಲೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Apr 03, 2023 | 1:41 PM

ಬೆಂಗಳೂರು: ದೊಣ್ಣೆಯಿಂದ ಹೊಡೆದು ಯುವಕನನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಗರದ ಪಿಳ್ಳಣ್ಣ ಗಾರ್ಡನ್​ನಲ್ಲಿ ನಡೆದಿದೆ. ಸತೀಶ್(22) ಕೊಲೆಯಾದ ಯುವಕ. ನಿನ್ನೆ (ಏ.02)ರ ತಡರಾತ್ರಿ ದುಷ್ಕರ್ಮಿಗಳು ದೊಣ್ಣೆಯಿಂದ ಸತೀಶ್​ನ ತೆಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ನಂತರ ರೈಲ್ವೆ ಟ್ರ್ಯಾಕ್ ಬಳಿ ಇರುವ ಖಾಲಿ ಜಾಗದಲ್ಲಿ ಮೃತದೇಹ ಬಿಸಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಫ್​ಎಸ್​ಎಲ್​ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಸ್ತೆ ಅಪಘಾತ ತಂದೆ, ಮಗಳು ಸಾವು

ರಾಮನಗರ: ಕಾರು ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿ, ಬೈಕ್​ನಲ್ಲಿ ತೆರಳುತ್ತಿದ್ದ ತಂದೆ, ಮಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಸಾಬರಪಾಳ್ಯ ಬಳಿ ನಡೆದಿದೆ. ಕಲ್ಯಾ ಗ್ರಾಮದ ನಿವಾಸಿ ಯೋಗೇಶ್(47), ಪುತ್ರಿ ಹರ್ಷಿತಾ(14) ಮೃತ ದುರ್ದೈವಿಗಳು. ಯೋಗೇಶ್ ಮಗಳನ್ನು ಬೈಕ್​ನಲ್ಲಿ ಶಾಲೆಗೆ ಬಿಡಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೋಟೆಲ್ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಯಾದಗಿರಿ: ಹೋಟೆಲ್ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ (ಏ.2) ಯಾದಗಿರಿ ನಗರದ ಶಾಸ್ತ್ರೀ ಸರ್ಕಲ್ ಬಳಿ ನಡೆದಿತ್ತು. ಮಹೇಶ್ (23) ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ವಿಜಯಪುರ ಜಿಲ್ಲೆಯ ಸಿಂದಗಿ ನಿವಾಸಿ ಎನ್ನಲಾಗುತ್ತಿದೆ. ಹಲವು ವರ್ಷಗಳಿಂದ ಯಾದಗಿರಿ ನಗರದ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ. ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Music Volume ​ಕಡಿಮೆ ಮಾಡಿ ಎಂದಿದ್ದಕ್ಕೆ ಸೇನಾಧಿಕಾರಿಯ ಸಹೋದರನ ಮೇಲೆ ಟೆಕ್ಕಿಗಳಿಂದ ಹಲ್ಲೆ

ಮಂಡ್ಯದಲ್ಲಿ ದಂಪತಿ ಆತ್ಮಹತ್ಯೆಗೆ ಶರಣು

ಮಂಡ್ಯ: ಕೌಟುಂಬಿಕ ಕಲಹಕ್ಕೆ ಮನನೊಂದು ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ (ಏ.2) ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಪುರುಷೋತ್ತಮ (45), ವಿದ್ಯಾ(32) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕುಟುಂಬದಲ್ಲಿ ಕಲಹ ಸಂಭವಿಸುತ್ತಿದ್ದು, ಇದಕ್ಕೆ ಬೇಸತ್ತು ಪುರುಷೋತ್ತಮ ಹಾಗೂ ವಿದ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿತ್ತು.

ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು, ವಿಷಯ ತಿಳಿದು ಮನೆಗೆ ಬಂದ ಪತಿ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಕೊರಳೊಡ್ಡಿದ್ದರು. ಮೃತ ಪುರುಷೋತ್ತಮ್ ಮೈಸೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು.

ಮೃತ ದಂಪತಿಗೆ 7 ಹಾಗೂ 5 ವರ್ಷದ ಇಬ್ಬರು ಮಕ್ಕಳಿದ್ದಾರೆ. ಇದೀಗ ತಂದೆ-ತಾಯಿ ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನ ನಡೆಸಿದ್ದರು. ಮೃತ ದೇಹಗಳನ್ನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:40 pm, Mon, 3 April 23

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್