ಪ್ರೀತಿಸಿ ಮೋಸ ಮಾಡಿದ ಬಿಜೆಪಿ ಕಾರ್ಯಕರ್ತ: ಚಿಕಿತ್ಸೆ ಪಡೆಯುವ ವೇಳೆ ಡೆತ್​ ನೋಟ್​ ಬರೆದಿಟ್ಟು ಬಾಲಕಿ ನಿಧನ

ಪ್ರೀತಿ ಹೆಸರಿನಲ್ಲಿ ಯುವಕ ವಂಚಿಸಿದ್ದಕ್ಕೆ ಬಾಲಕಿ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿರುವ ಘಟನೆ ಕುದುರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರೀತಿಸಿ ಮೋಸ ಮಾಡಿದ ಬಿಜೆಪಿ ಕಾರ್ಯಕರ್ತ: ಚಿಕಿತ್ಸೆ ಪಡೆಯುವ ವೇಳೆ ಡೆತ್​ ನೋಟ್​ ಬರೆದಿಟ್ಟು ಬಾಲಕಿ ನಿಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 15, 2023 | 2:09 PM

ಚಿಕ್ಕಮಗಳೂರು: ಪ್ರೀತಿ ಹೆಸರಿನಲ್ಲಿ ಯುವಕ ವಂಚಿಸಿದ್ದಕ್ಕೆ ಬಾಲಕಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕುದುರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಡಲೆ ಬಾಲಕಿಯನ್ನು ಮಂಗಳೂರಿನ (Mangaluru) ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ. ಬಾಲಕಿ ಚಿಕ್ಕಮಗಳೂರು (Chikkamagaluru)  ಜಿಲ್ಲೆಯ ಕಳಸ ತಾಲ್ಲೂಕಿನ ಕಾರಗದ್ದೆ ಗ್ರಾಮದ ಹಿತೇಶ್​​ನನ್ನು ಪ್ರೀತಿಸುತ್ತಿದ್ದಳು. ಆದರೆ ಪ್ರಿಯಕರ ಹಿತೇಶ್ ಮೋಸ ಮಾಡಿದಕ್ಕೆ ಮನನೊಂದ ಬಾಲಕಿ ಜ.10ರಂದು ಮನೆಯಲ್ಲಿದ್ದ ಕೀಟನಾಶಕ ಔಷಧ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೆ ಆಕೆಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಜ.14ರಂದು ಬಾಲಕಿ ಚಿಕಿತ್ಸ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಬಾಲಕಿ ಸಾವಿಗೂ ಮುನ್ನ, ಐಸಿಯುನಲ್ಲೇ ಡೆತ್​ನೋಟ್​ ಬರೆದಿಟ್ಟು ಸಾವನ್ನಪ್ಪಿದ್ದಾಳೆ. ಡೆತ್​​ನೋಟ್​ ಬರೆದಿರುವುದನ್ನು ಪೋಷಕರು ವಿಡಿಯೋ ಮಾಡಿದ್ದಾರೆ. ಡೆತ್​ನೋಟ್​ನಲ್ಲಿ ಮೋಸ ಮಾಡಿರುವ ಯುವಕನ ಹೆಸರು ಉಲ್ಲೇಖವಾಗಿದೆ.

ಬಾಲಕಿ ಪೋಷಕರು ಹಿತೇಶ್ ವಿರುದ್ದ ದೂರು ದಾಖಲಿಸಲು ಹೋದರು, ಆದರೆ ಕುದುರೆಮುಖ ಪೊಲೀಸರು ದೂರು ಸ್ವೀಕರಿಸಲಿಲ್ಲವಂತೆ. ಆರೋಪಿ ಬಿಜೆಪಿ ಕಾರ್ಯಕರ್ತ ಎನ್ನೋ ಕಾರಣಕ್ಕೆ ಪೊಲೀಸರು ದೂರು ಸ್ವೀಕರಿಸದೆ ಹಿಂದೇಟು ಹಾಕಿದ್ದಾರೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಹಿತೇಶ್ ಸ್ಥಳೀಯವಾಗಿ ಬಿಜೆಪಿ ಕಾರ್ಯಕರ್ತನಾಗಿ ಓಡಾಡಿಕೊಂಡಿದ್ದನು. ಹೀಗಾಗಿ ಕುದುರೆಮುಖ ಪೊಲೀಸರಿಗೆ ಎಸ್ಪಿ ತರಾಟೆಗೆ ತೆಗೆದುಕೊಂಡಿದ್ದಕ್ಕೆ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:38 pm, Sun, 15 January 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ