6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ಅಜ್ಜ; ದೂರು ಕೊಡದಂತೆ ಮನೆ, ಬಂಗಾರ ಆಮಿಷ

ತಾತ-ಮೊಮ್ಮಗಳು ಎನ್ನುವುದು ಎಂತಹ ಸಂಬಂಧ. ತಂದೆ-ತಾಯಿ ತಮ್ಮ ತಮ್ಮ ಕೆಲಸಗಳಿಗೆ ತೆರಳಿದರೆ ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳುವುದು ತಾತ(ಅಜ್ಜ). ಅಜ್ಜ-ಅಜ್ಜಿ ಇದ್ದಾರೆ ಎಂದು ಪೋಷಕರು ಸಹ ತಮ್ಮ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗುತ್ತಾರೆ. ಅದರಂತೆ ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದಾಗ ತಾತ ನೀಚ ಕೃತ್ಯ ಎಸಗಿದ್ದಾನೆ. ಹೌದು...ಅಜ್ಜನೋರ್ವ ತನ್ನ 6 ವರ್ಷದ ಮೊಮ್ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ.

6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ಅಜ್ಜ; ದೂರು ಕೊಡದಂತೆ ಮನೆ, ಬಂಗಾರ ಆಮಿಷ
ಪ್ರಾತಿನಿಧಿಕ ಚಿತ್ರImage Credit source: Shutterstock
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jun 27, 2024 | 4:51 PM

ಬೆಂಗಳೂರು (ಜೂ.27): ತಾಯಿ ಕೆಲಸಕ್ಕೆ ಹೋದಾಗ ತಾತನೇ (ಅಜ್ಜ) ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವಂತ ಘಟನೆ ನಡೆದಿದೆ. ತಾಯಿ ಕೆಲಸಕ್ಕೆ ಹೋಗಿದ್ದಾಗ ಅಜ್ಜ ತನ್ನ ಆರು ವರ್ಷದ ಬಾಲಕಿ ಮೇಲೆ ಹೇಯ ಕೃತ್ಯವೆಸಗಿದ್ದಾನೆ. ಈ ವಿಚಾರ ಬಾಲಕಿ ಮನೆಯಲ್ಲಿ ಗೊತ್ತಾಗುತ್ತಿದ್ದಂತೆಯೇ ಯಾರಿಗೂ ಹೇಳದಂತೆ ಬಾಲಕಿ ತಾಯಿಗೆ(ಸೊಸೆ) ಬಂಗಾರ, ಮನೆ ಆಮಿಷವೊಡ್ಡಿದ್ದಾನೆ. ಆದ್ರೆ, ಅತ್ಯಾಚಾರಕ್ಕೆ ಒಳಗಾದ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಮೆನೆಯಿಂದ ಪರಾರಿಯಾಗಿದ್ದಾನೆ. ದುರಂತ ಅಂದ್ರೆ, ಆರೋಪಿ ಪರಾರಿಯಾಗಲು ಮಗನೇ (ಬಾಲಕಿ ತಂದೆ) ಸಹಕರಿಸಿದ್ದಾನೆ.

ಸುಮಾರು 6 ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ಘಟನೆ ನಂತರ ಮೊಮ್ಮಗಳ ತಾಯಿ ಮತ್ತು ತಂದೆಗೆ ನಿನ್ನ ಮಗಳ ಹೆಸರಿಗೆ ಮನೆ ಬರೆದು ಕೊಡುತ್ತೇನೆ ಪೊಲೀಸರಿಗೆ ದೂರು ಕೊಡಬೇಡಿ ಎಂದು ಆಮಿಷವೊಡಿದ್ದಾನೆ. ಆದರೆ, ಅತ್ಯಾಚಾರಕ್ಕೆ ಒಳಗಾದ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ನಡೆಸಿ 13 ವರ್ಷದ ಬಾಲಕಿಯ ಕೊಲೆ; ಹರಿದ್ವಾರ ಹೆದ್ದಾರಿಯಲ್ಲಿ ಶವ ಪತ್ತೆ

ಇದಾದ ನಂತರ ಸುಮ್ಮನಿದ್ದ ಬಾಲಕಿಯ ತಾಯಿ ನಾನು ಕೆಲಸಕ್ಕೆ ಹೊರಡುತ್ತೇನೆ ಎಂದು ಸಬೂಬು ಹೇಳಿ ಮನೆಯಿಂದ ಆಚೆಗೆ ಬಂದು ಅಕ್ಕಪಕ್ಕದವರ ಸಹಾಯ ಪಡೆದು ಮಗಳನ್ನು ಆಸ್ಪತ್ರೆಗೆ ಸೇರಿಸಿದ್ದಾಳೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ನಂತರ ಅಲ್ಲಿಗೆ ಬಂದ ಪೊಲೀಸರು ತಾಯಿಗೆ ದೂರು ದಾಖಲಿಸುವಂತೆ ಸೂಚನೆ ನೀಡಿದ್ದಾರೆ. ಬಳಿಕ ತಾಯಿ, ಮಗಳಿಗೆ ಚಿಕಿತ್ಸೆಯ ವ್ಯವಸ್ಥೆ ಮಾಡಿ ಹುಳಿಮಾವು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೂಲತಃ ತಮಿಳುನಾಡು ಮೂಲದ ಕುಟುಂಬ ಬಂದು ಬೆಂಗಳೂರಿನ ಹುಳಿಮಾವು ಪ್ರದೇಶದಲ್ಲಿ ನೆಲೆಸಿದೆ. ಬಾಲಕಿಯ ತಾಯಿ ನೀಡಿದ ದೂರಿನಂತೆ ಹುಳಿಮಾವು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯಾಚಾರಕ್ಕೆ ಒಳಗಾದ ವಿಚಾರದ ಬಗ್ಗೆ ದೂರು ನೀಡದೇ ಮುಚ್ಚಿಟ್ಟಿದ್ದ ಬಾಲಕಿಯ ತಂದೆ ತಂದೆಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಮೊಮ್ಮಗಳ ಮೇಲೆ ಅತ್ಯಾಚಾರ ಎಸೆಗಿದ ತಾತ, ಅಜ್ಜಿ ಹಾಗೂ ಮನೆಯಲ್ಲಿದ್ದ ಚಿಕ್ಕಂಪ್ಪದಿರು ತಲೆ ಮರೆಸಿಕೊಳ್ಳಲು ಬಾಲಕಿಯ ತಂದೆಯೇ ಸಹಾಯ ಮಾಡಿದ್ದಾನೆ ಎಂದು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಸದ್ಯ ಬಾಲಕಿಗೆ ವಾಣಿವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ