ಬೆಂಗಳೂರಿ‌ನಲ್ಲೊಂದು ಬೀಭತ್ಸ ಕೊಲೆ: ದೇಹ ತುಂಡು ತುಂಡು ಮಾಡಿ ಮೋರಿಗೆ ಎಸೆದು ಕ್ರೌರ್ಯ

Bengaluru Crime news: ಬೆಂಗಳೂರಿನಲ್ಲೊಂದು ಭೀಬತ್ಸ ಕೊಲೆ ಪ್ರಕರಣ ವರದಿಯಾಗಿದೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಕ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿ ದೇಹವನ್ನು ತುಂಡು ಮಾಡಿ ಮೋರಿಗೆ ಎಸೆದು ಸಾಕ್ಷ್ಯ ನಾಶ ಮಾಡಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಸ್ತೃತ ವರದಿಯನ್ನು ‘ಟಿವಿ9’ ವರದಿಗಾರ ಪ್ರದೀಪ್ ಇಲ್ಲಿ ನೀಡಿದ್ದಾರೆ.

ಬೆಂಗಳೂರಿ‌ನಲ್ಲೊಂದು ಬೀಭತ್ಸ ಕೊಲೆ: ದೇಹ ತುಂಡು ತುಂಡು ಮಾಡಿ ಮೋರಿಗೆ ಎಸೆದು ಕ್ರೌರ್ಯ
ಬೆಂಗಳೂರಿ‌ನಲ್ಲೊಂದು ಬೀಭತ್ಸ ಕೊಲೆ: ದೇಹ ತುಂಡು ತುಂಡು ಮಾಡಿ ಮೋರಿಗೆ ಎಸೆದು ಕ್ರೌರ್ಯ
Follow us
Ganapathi Sharma
| Updated By: ಗಂಗಾಧರ​ ಬ. ಸಾಬೋಜಿ

Updated on:Jun 08, 2024 | 10:12 PM

ಬೆಂಗಳೂರು, ಜೂನ್ 8: ಬೆಂಗಳೂರಿ‌ನಲ್ಲೊಂದು ಬೀಭತ್ಸ ಕೊಲೆ (Murder Case) ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರನ್ನು ಆರೋಪಿ ಮನೆಯಲ್ಲೇ ತುಂಡುತುಂಡಾಗಿ ಕತ್ತರಿಸಿ ಹತ್ಯೆ ಮಾಡಿದ್ದಲ್ಲದೆ, ಮೃತದೇಹದ ಭಾಗಗಳನ್ನು ಬೇರೆ ಬೇರೆ ಮೋರಿಗೆ ಎಸೆದು ಸಾಕ್ಷ್ಯ ನಾಶ ಮಾಡಲಾಗಿದೆ. ಮೃತದೇಹದ ಪತ್ತೆಗೆ ನುರಿತ ತಜ್ಞರನ್ನು ಕರೆಸಿಕೊಂಡರೂ ಉಪಯೋಗವಾಗಿಲ್ಲ. ಮೂರು ದಿನಗಳಿಂದ ಹುಡುಕಿದರೂ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ (Ramamurthy Nagar Police Station) ವ್ಯಾಪ್ತಿಯಲ್ಲಿ ಈ ಕೃತ್ಯ ಎಸಗಲಾಗಿದೆ.

ಕೊಲೆಯಾದ ದುರ್ದೈವಿ ಕೆವಿ ಶ್ರೀನಾಥ್ (34) ಎಂಬುದು ತಿಳಿದುಬಂದಿದೆ. ಮಾಧವ ರಾವ್ ಎಂಬಾತನೇ ಕೊಲೆ ಆರೋಪಿಯಾಗಿದ್ದು, ಸಂಪಿಗೆಹಳ್ಳಿ ಪೊಲೀಸರು ಭಯಾನಕ ಕೊಲೆಯ ಕೃತ್ಯವನ್ನು ಬಯಲಿಗೆಳೆದಿದ್ದಾರೆ.

ನಡೆದಿದ್ದೇನು?

ಬಸವೇಶ್ವರನಗರದಲ್ಲಿರುವ ಮಾರ್ಗದರ್ಶಿ ಚಿಟ್​ ಫಂಡ್​​ನಲ್ಲಿ ಡೆವಲಪ್ಮೆಂಟ್ ಆಫೀಸರ್ ಆಗಿದ್ದ ಶ್ರೀನಾಥ್, ಥಣಿಸಂದ್ರದ ಅಂಜನಾದ್ರಿ ಲೇಔಟ್​​ನಲ್ಲಿ ವಾಸವಿದ್ದರು. ಮೇ 28ರ ಬೆಳಗ್ಗೆ ಮನೆಯಿಂದ ಹೊರಹೋಗಿದ್ದ ಶ್ರೀನಾಥ್ ಮನೆಗೆ ವಾಪಸ್ ಆಗಿಲ್ಲ. ಶ್ರೀನಾಥ್ ನಾಪತ್ತೆ ಬಗ್ಗೆ ಮೇ 29ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಅವರ ಪತ್ನಿ ದೂರು ನೀಡಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಶ್ರೀನಾಥ್ ಮೇ 28ರಂದು ಮಾಧವರಾವ್ ಮನೆಗೆ ಹೋಗಿರುವುದು ಪತ್ತೆಯಾಗಿತ್ತು. ಕೆಆರ್ ಪುರಂನ ವಿಜಿನಪುರದಲ್ಲಿರುವ ಮಾಧವ ರಾವ್ ಮನೆಗೆ ಹೋಗಿರುವುದು ತಿಳಿದುಬಂದಿತ್ತು. ಮನೆಯ ಸಿಸಿಟಿವಿಯಲ್ಲಿ ಮಾಧವ ರಾವ್ ಮನೆಗೆ ಶ್ರೀನಾಥ್ ಪ್ರವೇಶಿಸಿರುವ ದೃಶ್ಯ ಸಿಕ್ಕಿತ್ತು. ಆದರೆ ಶ್ರೀನಾಥ್ ಮನೆಯಿಂದ ಹೊರಗೆ ಹೋಗುವುದು ರೆಕಾರ್ಡ್ ಆಗಿರಲಿಲ್ಲ. ಹೀಗಾಗಿ ಜೊತೆಗೆ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದ್ದವು. ಬಳಿಕ ಮಾಧವ ರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿರುವುದು ಗೊತ್ತಾಗಿತ್ತು.

ಬಳಿಕ ಆಂಧ್ರ ಪ್ರದೇಶದಲ್ಲಿ ಮಾಧವ ರಾವ್ ಪತ್ತೆ ಮಾಡಿ ಪೊಲೀಸರು ಕರೆತಂದಿದ್ದರು. ಪೊಲೀಸರ ವಿಚಾರಣೆ ವೇಳೆ ಮಾಧವ ರಾವ್ ಬಾಯ್ಬಿಟ್ಟಿದ್ದು, ನಡೆದ ವಿಚಾರ ತಿಳಿಸಿದ್ದಾನೆ.

ಎರಡು ವರ್ಷಗಳಿಂದ ಇತ್ತು ಪರಿಚಯ

ಮಾಧವ ರಾವ್ ಮತ್ತು ಶ್ರೀನಾಥ್​ಗೆ ಎರಡು ವರ್ಷಗಳಿಂದ ಪರಿಚಯ ಇತ್ತು. ಶ್ರೀನಾಥ್ ಬಳಿ ಮಾಧವರಾವ್ 5 ಲಕ್ಷ ರೂ. ಹಣದ ಚೀಟಿ ಹಾಕಿದ್ದ. ಈ ಚೀಟಿ ಹಣದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಚೀಟಿ ಹಣ ವಾಪಸ್ ಕೊಡುವಂತೆ ಮಾಧವ ರಾವ್ ಒತ್ತಾಯ ಮಾಡುತ್ತಿದ್ದ. ಇಷ್ಟೇ ಅಲ್ಲದೆ, ಮಾಧವ ರಾವ್ ಪತ್ನಿ ಜೊತೆ ಶ್ರೀನಾಥ್ಗೆ ಅಕ್ರಮ ಸಂಬಂಧ ಇತ್ತು ಎಂಬ ಆರೋಪಗಳೂ ಇವೆ.

ಮೇ 28ರಂದು ಬೆಳಗ್ಗೆ ಮಾಧವ ರಾವ್ ಮನೆಗೆ ಶ್ರೀನಾಥ್ ತೆರಳಿದ್ದ. ಈ ವೇಳೆ ಮನೆಯಲ್ಲಿ ಇಬ್ಬರಿಗೂ ಹಣದ ವಿಚಾರಕ್ಕೆ ಗಲಾಟೆ ಆಗಿದೆ. ಬಳಿಕ ಮಾಧವ ರಾವ್ ಮನೆಯಲ್ಲಿದ್ದ ಜಾಕ್, ರಾಡ್​​ನಿಂದ ಶ್ರೀನಾಥ್ ತಲೆಗೆ ಹೊಡೆದಿದ್ದ. ಕುಸಿದು ಬಿದ್ದ ಶ್ರೀನಾಥ್ ದೇಹವನ್ನು ಮಚ್ಚಿನಿಂದ ತುಂಡು ತುಂಡಾಗಿ ಕತ್ತರಿಸಿದ್ದ. ಸಾಕ್ಷಿ ನಾಶ ಮಾಡಲು ಶ್ರೀನಾಥ್ ಮೃತದೇಹವನ್ನು ಮೂರು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ. ಬಳಿಕ ಮೊದಲಿಗೆ ಒಂದು ಬ್ಯಾಗ್, ನಂತರ ಎರಡು ಬ್ಯಾಗ್​​ಗಳಲ್ಲಿ ಮೃತದೇಹದ ತುಂಡುಗಳನ್ನು ಬೆಳತ್ತೂರು ಬಳಿಯ ಮೋರಿಯಲ್ಲಿ (ಪಿನಾಕಿನಿ ನದಿ) ಹಾಕಿದ್ದ. ನಂತರ ತನ್ನ ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ಶ್ರೀನಾಥ್ ಆಂಧ್ರ ಪ್ರದೇಶಕ್ಕೆ ಪರಾರಿಯಾಗಿದ್ದ.

ಇದನ್ನೂ ಓದಿ: ಬೆಂಗಳೂರು: ಸಿಗರೇಟ್ ವಿಚಾರಕ್ಕೆ ಅರೆಬೆತ್ತಲೆ ಮಾಡಿ ಗೆಳೆಯನ ಮೇಲೆ ಹಲ್ಲೆ, 7 ಜನ ಅರೆಸ್ಟ್

ಸದ್ಯ ಪ್ರಕರಣ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ಕೊಲೆ ಮಾಡಿದ ಸ್ಥಳ‌ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಗೆ ಬರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ರಾಮಮೂರ್ತಿನಗರ ಪೊಲೀಸರಿಂದ ಕೊಲೆ (302) ಮತ್ತು ಸಾಕ್ಷಿ ನಾಶ (201)ರಡಿ ಕೇಸ್ ದಾಖಲಾಗಿದೆ.

ಸದ್ಯ ರಾಮಮೂರ್ತಿನಗರ ಪೊಲೀಸರಿಂದ ಶ್ರೀನಾಥ್ ಮೃತದೇಹದ ತುಂಡುಗಳಿಗೆ ಹುಡುಕಾಟ ನಡೆದಿದೆ. ಕಳೆದ ಮೂರು ದಿನಗಳಿಂದ ಹುಡುಕಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಮೋರಿಯಲ್ಲಿ ಮೃತದೇಹದ ತುಂಡುಗಳು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ. ಮೃತದೇಹ ಹುಡುಕಲು ಮಂಗಳೂರಿನಿಂದ ನುರಿತರನ್ನು ಕರೆಸಿದರೂ ಪ್ರಯೋಜನವಾಗಿಲ್ಲ.

ವರದಿ – ಪ್ರದೀಪ್ ಟಿವಿ9

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:42 am, Sat, 8 June 24

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್