ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ ವೈರಲ್ ಮಾಡುತ್ತೇನೆ: ಪತ್ನಿಗೆ ಬೆದರಿಕೆ ಹಾಕಿದ ಪತಿ ಆತ್ಮಹತ್ಯೆಗೆ ಯತ್ನ, ಬಂಧನ

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಲಾಗಿದ್ದ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿತ್ತು. ಇದೀಗ ಖಾಸಗಿ ಕ್ಷಣದ ವಿಡಿಯೋ, ಫೋಟೋ ರೆಕಾರ್ಡ್ ಮಾಡಿ ವಿಚ್ಛೇದನ ನೀಡುವಂತೆ ಪತ್ನಿಗೆ ಪತಿ ಕಿರುಕುಳ ನೀಡುತ್ತಿದ್ದ ವಿಚಾರ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ.

ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ ವೈರಲ್ ಮಾಡುತ್ತೇನೆ: ಪತ್ನಿಗೆ ಬೆದರಿಕೆ ಹಾಕಿದ ಪತಿ ಆತ್ಮಹತ್ಯೆಗೆ ಯತ್ನ, ಬಂಧನ
ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ ವೈರಲ್ ಮಾಡುತ್ತೇನೆ ಎಂದು ಪತ್ನಿಗೆ ಬೆದರಿಕೆ ಹಾಕಿದ ಪತಿ ಆತ್ಮಹತ್ಯೆಗೆ ಯತ್ನ, ಬಂಧನ
Follow us
Sahadev Mane
| Updated By: Rakesh Nayak Manchi

Updated on: Jan 04, 2024 | 9:03 AM

ಬೆಳಗಾವಿ, ಜ.4: ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಮಾಡುತ್ತೇನೆ ಎಂದು ತನ್ನ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿ (Belagavi) ನಗರದಲ್ಲಿ ನಡೆದಿದೆ. ಮತ್ತೊಂದು ಮದುವೆಯಾಗಲು ಹೆಂಡತಿಯಿಂದ ವಿಚ್ಛೇದನ ಪಡೆಯಲು ಈ ರೀತಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಬೆಳಗಾವಿ ನಗರದ ನಿವಾಸಿ ಕಿರಣ್ ಪಾಟೀಲ್ ತನ್ನ ಪತ್ನಿಗೆ ವಿಚ್ಛೇದನ ನೀಡಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲು ಮುಂದಾಗಿದ್ದನು. ಇದಕ್ಕಾಗಿಯೇ ವಿಚ್ಛೇದನ ನೀಡುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನು. ಅಲ್ಲದೆ, ಖಾಸಗಿ ಕ್ಷಣದ ವಿಡಿಯೋ, ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು.

ಗಂಡನ ಬೆದರಿಕೆಯಿಂದ ಭೀತಿಗೊಂಡ ಪತ್ನಿ ಸಾಕಷ್ಟು ಬಾರಿ ಮನವೊಲಿಸಲು ಯತ್ನಿದರೂ ಪ್ರಯೋಜನವಾಗಿಲ್ಲ. ಪತಿ ಕಿರಣ್ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದನು. ಅಷ್ಟಕ್ಕೂ ಸುಮ್ಮನಾಗದ ಆತ, ಪತ್ನಿಗೆ ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡುವುದನ್ನು ಮುಂದುವರಿಸಿದ್ದನು.

ಇದರಿಂದ ದಿಕ್ಕೆ ತೋಚದಂತಾದಾಗ ಮಹಿಳೆ ಪತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರುತ್ತಾಳೆ. ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಿರಣ್​ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಆತನ ಮೊಬೈಲ್​ನಲ್ಲಿ ಪತ್ನಿಯ ಅಶ್ಲೀಲ ವಿಡಿಯೋ, ಫೋಟೋ ಇರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ಆರೋಪ ಸಾಬೀತಾಗುತ್ತಿದ್ದಂತೆ ಪೊಲೀಸರು ಬಂಧಿಸಲು ಮುಂದಾದಾಗ ಕಿರಣ್ ತಪ್ಪಿಸಿಕೊಂಡು ಓಡಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಆತನನ್ನ ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ಸೇರಿಸಿದ್ದರು. ಸದ್ಯ ಗುಣಮುಖನಾಗಿ ನಿನ್ನೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಕಿರಣ್​ನನ್ನು ಪೊಲೀಸರು ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.

ಈ ಬಗ್ಗೆ ಟಿವಿ9ಗೆ ಮಾಹಿತಿ ನೀಡಿದ ಎಸ್‌ಪಿ ಡಾ. ಭೀಮಾಶಂಕರ್ ಗುಳೇದ್, ನೊಂದ ಮಹಿಳೆ ನಮ್ಮ ಪೊಲೀಸ್ ಠಾಣೆಗೆ ಬಂದು ತನ್ನ ಗಂಡನಾದ ಕಿರಣ್ ಪಾಟೀಲ್ ಮೇಲೆ ಕೇಸ್ ನೀಡಿದ್ದಳು. ಡೊಮೆಸ್ಟಿಕ್ ವೈಲೆನ್ಸ್ ಕಾನೂನಿನಡಿಯಲ್ಲಿ ಈಗಾಗಲೇ ಕೇಸ್ ದಾಖಲಾಗಿ ಕೋರ್ಟ್​​ನಲ್ಲಿದೆ. ಈ ನಡುವೆ ಕಿರಣ್ ಪಾಟೀಲ್ ಅವಳ ಜತೆಗೆ ಇದ್ದಾಗ ಕೆಲವು ವಿಡಿಯೋಗಳನ್ನ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದನು ಎಂದರು.

ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆಪಾದಿತನನ್ನ ಠಾಣೆಗೆ ಕರೆದು ತನಿಖೆ ಮಾಡುವಾಗ ಮೊಬೈಲ್ ಪರಿಶೀಲನೆ ಮಾಡಿದ್ದಾರೆ. ಆತನ ಮೊಬೈಲ್​ನಲ್ಲಿ ಮಹಿಳೆ ಹೇಳಿದ ಹಾಗೇ ಕೆಲವು ವಿಡಿಯೋ, ಫೋಟೊಗಳು ಸಿಕ್ಕಿವೆ. ಆ ವಿಚಾರವಾಗಿ ಅರೆಸ್ಟ್ ಮಾಡುವಾಗ ಆರೋಪಿ ತಪ್ಪಿಸಿಕೊಂಡು ಓಡಿ ಹೋಗಿದ್ದ. ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ಆತನನ್ನ ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದರು ಎಂದರು.

ಆತ ಮಾಡಿದ ತಪ್ಪು ಅವನ ಕಣ್ಣ ಮುಂದೆ ರುಜುವಾತು ಆಯಿತು. ಇದರಿಂದ ಹೆದರಿಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ತಕ್ಷಣ ಪೊಲೀಸರು ಆತನನ್ನ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ತನಿಖೆ ಪ್ರಕಾರ ಆತ ಮಾಡಿದ ತಪ್ಪು ರುಜುವಾತು ಆಗಿದ್ದು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಹೆಂಡತಿಗೆ ಆತ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಇಲ್ಲವಾದರೆ ವಿಡಿಯೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಬಿಡುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದನು. ಇನ್ನೊಂದು ಮದುವೆ ಮಾಡಿಕೊಳ್ಳಲು ಪ್ಲ್ಯಾನ್ ಮಾಡುತ್ತಿದ್ದ, ಈ ಕಾರಣಕ್ಕೆ ಆತ ಡಿವೋರ್ಸ್ ತೆಗೆದುಕೊಳ್ಳಲು ಮುಂದಾಗಿದ್ದನು ಅಂತಾ ಮಹಿಳೆ ಹೇಳುತ್ತಿದ್ದಾಳೆ. ಸದ್ಯ ಕಿರಣ್ ಮೊಬೈಲ್ ಜಪ್ತಿ ಮಾಡಿ ಎಫ್ಎಸ್ಎಲ್​ಗೆ ಕಳುಹಿಸಿದ್ದೇವೆ ಎಂದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?