ಬೆಂಗಳೂರು: ಎರಡನೇ ಲವ್ ಬಗ್ಗೆ ಪ್ರಶ್ನಿಸಿದ ಪ್ರಿಯತಮನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪ್ರಿಯತಮೆ

ಇದು ಕಾನ್ಸ್‌ಟೇಬಲ್- ಹೋಂ ಗಾರ್ಡ್ ಲವ್ ಸ್ಟೋರಿ. ಎರಡನೇ ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ತನ್ನ ಪ್ರಿಯಕರನ ಮೇಲೆ ಪ್ರಿಯತಮೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆ ರಾಣಿ ಮತ್ತು ಅದೇ ಠಾಣೆಯ ಸಿಬ್ಬಂದಿ ಸಂಯಜ್ ಪ್ರೀತಿಸುತ್ತಿದ್ದರು. ಈ ನಡುವೆ ತನ್ನನ್ನು ನಿರ್ಲಕ್ಷ್ಯಿಸಿದ್ದಕ್ಕೆ ಮನೆಗೆ ಹೋಗಿ ಜಗಳ ಮಾಡಿ ಎಡರನೇ ಲವ್ ಬಗ್ಗೆ ಪ್ರಶ್ನಿಸಿದ ಸಂಜಯ್​ಗೆ ರಾಣಿ ಬೆಂಕಿ ಹಚ್ಚಿದ್ದಾಳೆ.

ಬೆಂಗಳೂರು: ಎರಡನೇ ಲವ್ ಬಗ್ಗೆ ಪ್ರಶ್ನಿಸಿದ ಪ್ರಿಯತಮನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪ್ರಿಯತಮೆ
ಎರಡನೇ ಲವ್ ಪ್ರಶ್ನಿಸಿದ ಪ್ರಿಯತಮನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪ್ರಿಯತಮೆ (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Dec 21, 2023 | 9:57 AM

ಬೆಂಗಳೂರು, ಡಿ.21: ಎರಡನೇ ಲವ್ ಸ್ಟೋರಿ ಬಗ್ಗೆ ಪ್ರಶ್ನಿಸಿದ ಪ್ರಿಯಕರನಿಗೆ ವಿವಾಹಿತ ಮಹಿಳೆ ಪೆಟ್ರೋಲ್ ಹಾಕಿ ಬೆಂಕಿ (Fire) ಹಚ್ಚಿದ ಘಟನೆ ನಗರದ (Bengaluru) ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ, ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಕಾನ್​ಸ್ಟೇಬಲ್ ಸಂಜಯ್ ಮತ್ತು ಹೋಮ್ ಗಾರ್ಡ್ ರಾಣಿ ಲವ್​ ಸ್ಟೋರಿ ಠಾಣೆ ಮೆಟ್ಟಿಲೇರಿದೆ.

ಕಾನ್​ಸ್ಟೇಬಲ್ ಸಂಜಯ್ ಮತ್ತು ಹೋಂಗಾರ್ಡ್ ರಾಣಿ ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರ ಮಧ್ಯೆ ಪ್ರೇಮ ಬೆಳೆದಿತ್ತು. ಮದುವೆಯಾಗಿದ್ದರೂ ಕಾನ್​​ಸ್ಟೇಬಲ್ ಜೊತೆ ಕೆಲವು ತಿಂಗಳಿಂದ ರಾಣಿ ಪ್ರೀತಿಸುತ್ತಿದ್ದಳು.

ಇದನ್ನೂ ಓದಿ: ಏಕಾಏಕಿ ಕಾರಿಗೆ ಹೊತ್ತಿಕೊಂಡ ಬೆಂಕಿ; ಕಾರಿನೊಳಗೆ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಾವು

ಇತ್ತೀಚೆಗೆ ಸಂಜಯ್​ನನ್ನು ರಾಣಿ ನಿರ್ಲಕ್ಷ್ಯಿಸಲು ಆರಂಭಿಸಿದ್ದಾಳೆ. ಹೀಗಾಗಿ ಎರಡು ದಿನಗಳ ಹಿಂದೆ ಆಕೆ ಮನೆಗೆ ಹೋಗಿದ್ದಾಗ ಸಂಜಯ್ ಮತ್ತು ರಾಣಿ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ ವೇಳೆ ಮತ್ತೊಬ್ಬನೊಂದಿಗೆ ಪ್ರೀತಿಯಲ್ಲಿರುವ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಸಂಜಯ್​ಗೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಕೂಡಲೇ ಸಂಜಯ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us