ಪ್ರೇಮ ವಿವಾಹ: ಪರ ಪುರುಷನೊಂದಿಗೆ ಪತ್ನಿ ಪರಾರಿ: ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ

ಮನಸಾರೆ ಪ್ರೀತಿಸಿ ಮದುವೆಯಾಗಿದ್ದರೂ ಪತ್ನಿ ಪರ ಪುರಷನೊಂದಿಗೆ ಪರಾರಿಯಾಗಿದ್ದು, ತನ್ನ ಕೆಲಸ ಜೊತೆಗೆ ಮಕ್ಕಳ ಪೋಷಣೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರೇಮ ವಿವಾಹ: ಪರ ಪುರುಷನೊಂದಿಗೆ ಪತ್ನಿ ಪರಾರಿ: ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: May 12, 2023 | 5:35 PM

ಆನೇಕಲ್(ಬೆಂಗಳೂರು):  ತಂದೆಯೊಬ್ಬ ತನ್ನ ಇಬ್ಬರು ಚಿಕ್ಕ ಮಕ್ಕಳನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಆನೇಕಲ್​ನ ಕೊಪ್ಪ ಸಮೀಪದ ನಿರ್ಮಣ ಬಡಾವಣೆಯಲ್ಲಿ ನಡೆದಿದೆ. ಬಿಟಿಎಂ ಬಡಾವಣೆ ನಿವಾಸಿ ಹರೀಶ್ ( 35) ಪ್ರಜ್ವಲ್(6) ರಿಷಬ್(4) ಮೃತರು. ಮೇ 10ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತ್ನಿಯ ಶೋಕಿ ಜೀವನಕ್ಕೆ ಬೇಸತ್ತು ತನ್ನಿಬ್ಬರ ಮಕ್ಕಳನ್ನು ಕೊಂದು ಬಳಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೂ ಮೊದಲು ಸ್ನೇಹಿತರೊಬ್ಬರಿಗೆ ವಾಟ್ಸಾಪ್ ಕಾಲ್ ಮಾಡಿದ್ದಾನೆ. ತಾನು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗುತ್ತಿದ್ದು, ಬರಬೇಕಾದ ಹಣ ಮತ್ತು ಎಲ್ಐಸಿ ಬಾಂಡ್ ಪತ್ನಿಗೆ ಕೊಡಿ ಎಂದು ಹೇಳಿದ್ದ. ಕೂಡಲೇ ಹರೀಶ್ ಇರುವ ಲೊಕೇಷನ್ ಹುಡುಕಾಡಿದ್ದು, ಕೊನೆಗೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.

2007ರಲ್ಲಿ ಅಕ್ಕನ ಮಗಳು ಅನನ್ಯಗಳ ಜೊತೆ ಪ್ರೇಮ ವಿವಾಹವಾಗಿತ್ತು. ವಿವಾಹದ ಬಳಿಕ . ಪತ್ನಿಯ ಹೈ ಫೈ ಜೀವನದಿಂದ ಗಲಾಟೆಯಾಗಿತ್ತು. 2015ರಲ್ಲಿ ಹಿರಿಯ ಸಮ್ಮುಖದಲ್ಲಿ ರಾಜಿ ಸಂಧಾನ ಸಹ ಮಾಡಲಾಗಿತ್ತು. ಆದರೂ ಜಗಳ ಮಾತ್ರ ನಡೆಯುತ್ತಲೇ ಇತ್ತು. ಹರೀಶ್ ತಮ್ಮ ಪೋಷಕರ ಮನೆ ಬಿಟ್ಟು ಪ್ರತ್ಯೇಕ ಮನೆ ಮಾಡಿದ್ದ. ಇದಾದ ಕೆಲವೇ ದಿನಗಳಲ್ಲಿ ಪತ್ನಿ ಅನನ್ಯ ಮನೆ ಬಿಟ್ಟು ಪರ ಪುರುಷನೊಂದಿಗೆ ಪರಾರಿಯಾಗಿದ್ದಳು. ಇದರಿಂದ ತಬ್ಬಲಿಯಾದ ಮಕ್ಕಳನ್ನು ಹರೀಶ್ ಪೋಷಣೆ ಮಾಡುತ್ತಿದ್ದ.ಆದರೂ ಪತ್ನಿ ಪದೇ ಪದೇ ಹಣಕ್ಕೆ ಬೇಡಿಕೆ. ನೀಡದಿದ್ದರೆ ಮನೆ ಬಳಿ ಬಂದು ರಂಪಾಟ ಮಾಡುತ್ತಿದ್ದಳು. ಕೆಲಸದ ಜೊತೆ ಮಕ್ಕಳ ಪೋಷಣೆ ಬಗ್ಗೆ ಹರೀಶ್ ಮನನೊಂದಿದ್ದ. ಕೊನೆಗೆ ತನ್ನಿಬ್ಬರ ಮಕ್ಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಘಟನೆ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ