AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೈಡರ್​ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು

ಕೋಲಾರದಲ್ಲಿ ವೇಗದ ಬೈಕ್ ಅಪಘಾತದಲ್ಲಿ ಒಬ್ಬ ಯುವಕ ಸಾವನ್ನಪ್ಪಿದ್ದಾನೆ. ಮತ್ತೊಂದು ಪ್ರಕರಣದಲ್ಲಿ, 3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ಶವ ಪತ್ತೆಯಾಗಿದೆ. ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಕಾರ್ಮಿಕನ ಸಾವು ಸಂಭವಿಸಿದೆ.

ಡಿವೈಡರ್​ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು
ಡಿವೈಡರ್​ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವುImage Credit source: The Hans India
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 06, 2024 | 9:39 PM

ಕೋಲಾರ, ನವೆಂಬರ್​ 06: ವೇಗವಾಗಿ ಬಂದು ಡಿವೈಡರ್​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ (death) ಘಟನೆ ಕೋಲಾರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮುಳಬಾಗಿಲು ತಾಲೂಕಿನ ಅನಂತಪುರ ಗ್ರಾಮದ ರಂಜಿತ್ ಮೃತ ಯುವಕ. ತಲೆಗೆ ತೀವ್ರವಾಗಿ ಪೆಟ್ಟು ಬಿದ್ದ ಹಿನ್ನೆಲೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೋಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ 3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವಂತಹ ಘಟೆನ ಮುಳಬಾಗಿಲು ತಾಲೂಕಿನ ಅಗರ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಶಾರದಮ್ಮ(38) ಮೃತ ಮಹಿಳೆ. ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಗರ ಗ್ರಾಮದ ವೆಂಕಟರಾಮ್ ಎಂಬಾತನನ್ನು ಮುಳಬಾಗಿಲು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಅಪಾರ್ಟ್​ಮೆಂಟ್​ನ 4ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಅಪಾರ್ಟ್​ಮೆಂಟ್​ನ 4ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಯಲಹಂಕದ ಅಪಾರ್ಟ್​ಮೆಂಟ್​ನಲ್ಲಿ ನಿನ್ನೆ ನಡೆದಿದೆ. ಬಿಹಾರ ಮೂಲದ ಕಾರ್ಮಿಕ ಅಬಿದುಲ್ಲಾ ಮೃತ ವ್ಯಕ್ತಿ. ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕಟ್ಟಡದಿಂದ ಬಿದ್ದು ಸಾವು ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನ ಹತ್ಯೆ: ಆರೋಪಿಗಳಿಗೆ ತೆಲುಗು ಸಿನೆಮಾ ಪ್ರೇರಣೆ

ಕಾರ್ಮಿಕನ ಕುಟುಂಬಸ್ಥರಿಗೆ ಯಲಹಂಕ ಪೊಲೀಸರಿಂದ ಮಾಹಿತಿ ನೀಡಿದ್ದು, ಬಿಹಾರದಿಂದ ಬೆಂಗಳೂರಿಗೆ ಅಬಿದುಲ್ಲಾ ಕುಟುಂಬಸ್ಥರು ಬರುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು,  ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೃದಯಾಘಾತದಿಂದ ಚಲಿಸುತ್ತಿದ್ದ BMTC ಬಸ್​ನಲ್ಲೇ ಚಾಲಕ ಸಾವು

ನೆಲಮಂಗಲ: ಬಸ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿರುವಂತಹ ಘಟನೆ ನೆಲಮಂಗಲ ಪಟ್ಟಣದ ಬಿನ್ನಮಂಗಲ ಬಸ್ ನಿಲ್ದಾಣ ಬಳಿ ನಡೆದಿದೆ. ಬಿಎಂಟಿಸಿ ಬಸ್​ನಲ್ಲೇ 40 ವರ್ಷದ ಕಿರಣ್ ಕುಮಾರ್ ಮೃತ ಚಾಲಕ. ಮೃತ ಬಿಎಂಟಿಸಿ ಬಸ್ ಚಾಲಕ ಕಿರಣ್‌ ಕುಮಾರ್ ಹಾಸನ ಮೂಲದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:40 pm, Wed, 6 November 24

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ