Crime News: ಬಾರ್ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ; ಓರ್ವನ ಕೊಲೆ
ಬಾರ್ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಧ್ಯಸ್ಥಿಕೆ ವಹಿಸಲು ಬಂದಿದ್ದ ವ್ಯಕ್ತಿಗೆ ಚಾಕು ಇರಿಯಲಾಗಿದೆ.
ಬೆಂಗಳೂರು: ಬಾರ್ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಧ್ಯಸ್ಥಿಕೆ ವಹಿಸಲು ಬಂದಿದ್ದ ವ್ಯಕ್ತಿಗೆ ಚಾಕು ಇರಿಯಲಾಗಿದೆ. ಪ್ರಕಾಶ್ ಎಂಬಾತನಿಗೆ ಚಾಕು ಇರಿದಿದ್ದು, ಪ್ರಕಾಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಾರ್ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಮಂಜುನಾಥ್ ಗಲಾಟೆ ಮಾಡಿಕೊಂಡಿದ್ದನು. ಈ ವೇಳೆ ಅಲ್ಲೇ ಇದ್ದ ಪ್ರಕಾಶ್ ಮಧ್ಯಪ್ರವೇಶಿಸಿ ಬಿಲ್ ಕೊಡುವಂತೆ ಬುದ್ಧಿ ಮಾತು ಹೇಳಿದ್ದನು.
ನಂತರ ಪ್ರಕಾಶ್ ಬಾರ್ನಿಂದ ಆಚೆ ಬಂದಿದ್ದಾನೆ. ಈ ವೇಳೆ ಮಂಜುನಾಥ್ ಮತ್ತು ಮತ್ತೊರ್ವ ಚಾಕುವಿನಿಂದ ಹೊಟ್ಟೆಗೆ ಇರಿದು ಪರಾರಿಯಾಗಿದ್ದರು. ಸದ್ಯ ಇಂದಿರಾನಗರ ಪೊಲೀಸರು ಆರೋಪಿ ಮಂಜುನಾಥ್ನನ್ನು ಬಂಧಿಸಿದ್ದಾರೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಖ್ಯಾತ ಅಂತಾರಾಜ್ಯ ಡ್ರಗ್ ಪೆಡ್ಲರ್ಗಳ ಬಂಧನ: ಬೇಗೂರು ಪೊಲೀಸರು ಇಬ್ಬರು ಕುಖ್ಯಾತ ಅಂತಾರಾಜ್ಯ ಡ್ರಗ್ ಪೆಡ್ಲರ್ಗಳ ಬಂಧಸಿದ್ದಾರೆ. ಡ್ರಗ್ಸ್ ಮಾರಾಟ ಮಾಡುತ್ತಿದ್ದ ಅಶ್ಫಾಕ್, ಶಿಫಾಸ್ ಬಂಧಿತ ಆರೋಪಿಗಳು. ಬಂಧಿತರಿಂದ 2 ಕೋಟಿ ಮೌಲ್ಯದ ಹ್ಯಾಶ್ ಆಯಿಲ್ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಮಂಗಳೂರು ಹಾಗೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ.
ಕುಖ್ಯಾತ ಕಳ್ಳ ಸೈಯದ್ ವಸೀಂ ಬಂಧನ: ಕಲಾಸಿಪಾಳ್ಯ ಠಾಣೆ ಪೊಲೀಸರು ಕುಖ್ಯಾತ ಕಳ್ಳ ಸೈಯದ್ ವಸೀಂನನ್ನು ಬಂಧಿಸಿದ್ದಾರೆ. ಸುಮಾರು 6 ಲಕ್ಷ ರೂ. ಮೌಲ್ಯದ 10 ಬೈಕ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿ ಸೈಯದ್ ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಬೈಕ್ ಕದಿದ್ದನು.
ಕಲಾಸಿಪಾಳ್ಯ 2, ಚಂದ್ರಲೇಔಟ್ 2, ಬೊಮ್ಮನಹಳ್ಳಿ, ಗೋವಿಂದಪುರ, ಜೆಜೆನಗರ, ಬ್ಯಾಟರಾಯನಪುರ, ಬನಶಂಕರಿ, ಬೇಗೂರು ಠಾಣೆ ವ್ಯಾಪ್ತಿಯ ಪ್ರಕರಣಗಳಲ್ಲಿ ಆರೋಪಿ ಬೇಕಾಕಿದ್ದನು
ಬಸ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಬಾಲಕ ಸಾವು
ಬೆಳಗಾವಿ: ಕೆಎಸ್ಆರ್ಟಿಸಿ ಬಸ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ನರಸಿಂಗಪುರ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಸಿದ್ದಿಕ್ ಮುಲ್ಲಾ(10) ಮೃತ ದುರ್ದೈವಿ. ಕಾರಿನಲ್ಲಿದ್ದ ಇತರೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿತ್ತೂರಿನ ಸಂಬಂಧಿಕರ ಅಂತ್ಯಕ್ರಿಯೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 7:39 pm, Wed, 3 August 22