AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan: ಪತ್ನಿಗೆ ಮೆಸೇಜ್ ಮಾಡಿದ್ದಾನೆಂಬ ಅನುಮಾನದಿಂದ ಟೇಲರ್​ನನ್ನೇ​ ಹತ್ಯೆಗೈದ ಪತಿರಾಯ

ಅತ ಟೈಲರಿಂಗ್ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ, ಶ್ರಮಪಟ್ಟು ದುಡಿದು ನಾಲ್ಕೈದು ಜನರಿಗೆ ತಾನೇ ಉದ್ಯೋಗದಾತನಾಗಿ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ವ್ಯಕ್ತಿಯನ್ನು ಆ ಒಂದು ಮೆಸೇಜ್ ಬಲಿಪಡೆದುಕೊಂಡಿದೆ.

Hassan: ಪತ್ನಿಗೆ ಮೆಸೇಜ್ ಮಾಡಿದ್ದಾನೆಂಬ ಅನುಮಾನದಿಂದ ಟೇಲರ್​ನನ್ನೇ​ ಹತ್ಯೆಗೈದ ಪತಿರಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 13, 2022 | 7:22 PM

Share

ಹಾಸನ: ಪತ್ನಿಗೆ ಮೆಸೇಜ್ ಮಾಡಿದ ಎನ್ನುವ ಕಾರಣಕ್ಕೆ ಆಕೆಯ ಪತಿ ಟೇಲರ್​ನನ್ನು ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಇಂದು(ಅ.13) ಈ ಪ್ರಕರಣ ನಡೆದಿದೆ.

ಊಪಿನಹಳ್ಳಿ ಗ್ರಾಮದ ಗಂಗಾಧರ್(40) ನನ್ನ ಭರತ್ ಸೋಮು, ಚಿರು ಮತ್ತು ಅಭಿ ಎಂಬ ನಾಲ್ವರು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕೊಲೆಯಾದ ಗಂಗಾಧರ್ ತನ್ನ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಎನ್ನುವ ಕಾರಣಕ್ಕೆ ಆರೋಪಿ ಭರತ್ ತನ್ನ ಸ್ನೇಹಿತರ ಜೊತೆ ಸೇರಿ ಟೈಲರಿಂಗ್ ಶಾಪ್ ನಲ್ಲಿದ್ದ ಗಂಗಾದರ್ ನನ್ನ ಹೊತ್ತೊಯ್ದಿದ್ದಾರೆ, ಚನ್ನರಾಯಪಟ್ಟಣ ಶ್ರವಣಬೆಳಗೊಳ ರಸ್ತೆಯ ಜನಿವಾರ ಸಮೀಪದ ಬಯಲು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮನಸ್ಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಗಂಗಾಧರ್ ಸ್ನೇಹಿತ ಇದನ್ನ ಗಮನಿಸಿ ಹತ್ತಿರ ಹೋದಾಗ ಆರೋಪಿಗಳು ಅಲ್ಲಿಂದ ಓಡಿ ಹೊಗಿದ್ದಾರೆ. ಕೂಡಲೇ ಗಂಗಾಧರ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಕಳೆದ ಹತ್ತಾರು ವರ್ಷಗಳಿಂದ ಟೈಲರಿಂಗ್ ವೃತ್ತಿ ಮಾಡಿಕೊಂಡು ಇದೀಗ ಅದನ್ನೇ ಉದ್ಯಮವನ್ನೇ ದೊಡ್ಡದಾಗಿ ಮಾಡಿಕೊಂಡಿದ್ದ. ಅಲ್ಲದೇ ನಾಲ್ಕೈದು ಜನರಿಗೆ ತಾನೇ ಕೆಲಸಕೊಟ್ಟು ಜೀವ ನಡೆಸುತ್ತಿದ್ದ. ಯಾರೊಟ್ಟಿಗೂ ಜಗಳವಾಡದ ವ್ಯಕ್ತಿ ಹೀಗೆ ಏಕಾಏಕಿ ಹತ್ಯೆಯಾಗಿರುವುದು ಊರಿಗೆ ಊರೇ ಬೆಚ್ಚಿಬೀಳುವಂತೆ ಮಾಡಿದೆ.

ಅಕಸ್ಮಾತ್ ಗಂಗಾಧರ್ ತಪ್ಪೇ ಮಾಡಿದ್ದರೆ ಅವರ ವಿರುದ್ದ ದೂರು ಕೊಡಬಹುದಿತ್ತು, ಅಥವಾ ಊರಿನ ಜನರು ಕೂತು ಮಾತನಾಡಬಹುದಿತ್ತು. ಆದ್ರೆ ಹೀಗೆ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಿ ಎಂದು ಸಂಬಂಧಿಕರು ಆಗ್ರಹಿಸಿದ್ದಾರೆ.

ಗಂಗಾಧರ್ ಪತ್ನಿ ಸೌಮ್ಯ ನೀಡಿದ ದೂರಿನ ಆಧಾರದಲ್ಲಿ ಕೇಸ್ ದಾಖಲಿಸಿಕೊಂಡಿರುವ ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕೊಲೆ ಆರೋಪಿ ಭರತ್ ಅನುಮಾನಿಸಿದಂತೆ ಗಂಗಾಧರ್, ಮೆಸೇಜ್ ಮಾಡಿದ್ದನಾ? ಆ ಮೆಸೇಜ್ ನಲ್ಲಿ ಏನಿತ್ತು? ಎನ್ನುವ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಪ್ರಾಣ ತೆಗೆದ ಆ ಮೆಸೇಜ್ ನಲ್ಲಿ ಏನಿತ್ತು? ಟೈಲರ್ ಸಾವಿನ ಹಿಂದಿನ ಅಸಲಿಯತ್ತೇನು? ಎನ್ನುವುದು ಹಂತಕರ ಬಂಧನದ ಬಳಿಕ  ಅಸಲಿ ಸತ್ಯ ಹೊರ ಬರಲಿದೆ..

Published On - 7:20 pm, Thu, 13 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ