ಬೆಂಗಳೂರಿನಲ್ಲಿ ವರದಕ್ಷಿಣೆ ನೀಡುವಂತೆ ಒತ್ತಾಯಿಸಿ ಪತ್ನಿಯನ್ನೇ ಕೊಂದ ಪತಿ!

ಡ್ರೈವಿಂಗ್ ಕೆಲಸ ಮಾಡುತ್ತಿರುವ ಪತಿ ಯೋಗೀಶ್ ಇನ್ನೂ ಹಣ ಬೇಕು ಅಂತ ಮೂರು ದಿನಗಳ ಹಿಂದೆ ಹೆಂಡತಿ ಜೊತೆ ಗಲಾಟೆ ಮಾಡಿದ್ದಾನೆ. ಎರಡು ಲಕ್ಷ ಹಣ ತೆಗೆದುಕೊಂಡು ಬಾ ಎಂದು ಕಿರಿಕ್ ಮಾಡಿದ್ದಾನೆ.

ಬೆಂಗಳೂರಿನಲ್ಲಿ ವರದಕ್ಷಿಣೆ ನೀಡುವಂತೆ ಒತ್ತಾಯಿಸಿ ಪತ್ನಿಯನ್ನೇ ಕೊಂದ ಪತಿ!
ಕೊಲೆಯಾದ ಸೌಮ್ಯ, ಆರೋಪಿ ಯೋಗೀಶ್
Follow us
TV9 Web
| Updated By: sandhya thejappa

Updated on:Mar 26, 2022 | 11:48 AM

ಬೆಂಗಳೂರು: ನಗರದ ಸುಂಕದಕಟ್ಟೆಯಲ್ಲಿ ಪತಿಯಿಂದ ಪತ್ನಿ ಕೊಲೆ (Murder) ನಡೆದಿದೆ. ಪತಿ ಯೋಗೀಶ್ನಿಂದ ಪತ್ನಿ ಸೌಮ್ಯ ಕೊಲೆಯಾಗಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ದಂಪತಿ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಗಂಡ- ಹೆಂಡತಿ ನಡುವೆ ಪದೇ ಪದೇ ಗಲಾಟೆ ನಡೆಯುತ್ತಿತ್ತು. ಹಣಕಾಸು ವಿಚಾರಕ್ಕೆ ಹಲವಾರು ಬಾರಿ ಗಲಾಟೆ ಮಾಡಿಕೊಂಡಿದ್ದರು. ವರದಕ್ಷಿಣೆ (Dowry) ಹಣ ತರುವಂತೆ ಗಂಡ ಪೀಡಿಸುತ್ತಿದ್ದನಂತೆ. ಹೀಗಾಗಿ ಸೌಮ್ಯ ತವರು ಮನೆಯಿಂದ ಎರಡು ಬಾರಿ ಹಣ ತಂದು ಕೊಟ್ಟಿದ್ದಳಂತೆ.

ಡ್ರೈವಿಂಗ್ ಕೆಲಸ ಮಾಡುತ್ತಿರುವ ಪತಿ ಯೋಗೀಶ್ ಇನ್ನೂ ಹಣ ಬೇಕು ಅಂತ ಮೂರು ದಿನಗಳ ಹಿಂದೆ ಹೆಂಡತಿ ಜೊತೆ ಗಲಾಟೆ ಮಾಡಿದ್ದಾನೆ. ಎರಡು ಲಕ್ಷ ಹಣ ತೆಗೆದುಕೊಂಡು ಬಾ ಎಂದು ಕಿರಿಕ್ ಮಾಡಿದ್ದಾನೆ. ನಿನ್ನೆ ಸಂಜೆ ಮನೆಯಲ್ಲಿ ಮತ್ತೆ ಜಗಳ ಮಾಡಿ ಹಲ್ಲೆ ಮಾಡಿದ್ದಾನೆ. ಹಲ್ಲೆ ಬಳಿಕ ವೇಲ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.

ಕೊಲೆಗೆ ಸಂಚು: ಪತ್ನಿಗೆ ಪದೇ ಪದೇ ಕರೆ ಮಾಡಿ ಹಿಂಸೆ ನೀಡುತ್ತಿದ್ದವನ ಕೊಲೆಗೆ ರೌಡಿ ಶೀಟರ್ ಹಾಗು ಆತನ ನಾಲ್ವರು ಸಹಚರರು ಸಂಚು ರೂಪಿಸಿದ್ದರು. ಸದ್ಯ ಆರೋಪಿಗಳಾದ ಅರುಣ್ ಕುಮಾರ್ ಅಲಿಯಾಸ್ ನಾಯ್ಡು, ಯಶವಂತ್, ಕಾರ್ತಿಕ್, ವಿಶಾಲ್, ಸಂಜಯ್​ನ ಪೊಲೀಸರು ಬಂಧಿಸಿದ್ದಾರೆ ಮಂಜುಶ್ರೀಗೆ ಶ್ರೀಕಾಂತ್ ಎಂಬುವವನು ಕರೆ ಮಾಡಿದ್ದ. ಶ್ರೀಕಾಂತ್ ಈ ಹಿಂದೆ ಮಂಜುಶ್ರೀ ಜೊತೆ ವಾಸವಾಗಿದ್ದ. ಈಗ ಅರುಣ್ ಜೊತೆ ವಾಸವಿರುವ ಮಂಜುಶ್ರೀಗೆ ಶ್ರೀಕಾಂತ್ ತಡ ರಾತ್ರಿ ಕರೆ ಮಾಡಿದ್ದ‌. ಈ ವಿಚಾರಕ್ಕೆ ಕೋಪಗೊಂಡಿದ್ದ ಆರುಣ್, ಕೊಲೆ ಮಾಡಲು ರೂಪಿಸಿದ್ದ.

ಪೌರಾಯುಕ್ತರಿಗೆ ಕೊಲೆ ಬೆದರಿಕೆ ಆರೋಪಿಗೆ ಜೈಲು ಶಿಕ್ಷೆ: ಚಾಮರಾಜನಗರ: ಪೌರಾಯುಕ್ತರಿಗೆ ಕೊಲೆ ಬೆದರಿಕೆ ಹಾಕಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಚಾಮರಾಜನಗರ ನಗರ ಸಭಾ ಸದಸ್ಯನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಆರ್.ಪಿ.ನಂಜುಂಡಸ್ವಾಮಿ ಶಿಕ್ಷೆಗೊಳಗಾದ ನಗರಸಭಾ ಸದಸ್ಯ. 1 ವರ್ಷ ಜೈಲು ಶಿಕ್ಷೆ, 5 ಸಾವಿರ ರೂ ದಂಡ ವಿಧಿಸಲಾಗಿದೆ. ಚಾಮರಾಜನಗರ ಪ್ರಧಾನ ಸಿಜೆ ಹಾಗು ಜೆಎಂಎಫ್‌ಸಿ ನ್ಯಾ. ಮೊಹಮ್ಮದ್ ರೋಷನ್ ಷಾ ತೀರ್ಪು ನೀಡಿದ್ದಾರೆ. 2010 ರ ನವೆಂಬರ್ 10 ರಂದು ಘಟನೆ ನಡೆದಿತ್ತು. ನಂಜುಂಡಸ್ವಾಮಿ ಅಂದಿನ ಪೌರಾಯುಕ್ತ ಪ್ರಕಾಶ್ ಅವರಿಗೆ ಕೊಲೆ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದ. ಆರೋಪ ಸಾಬೀತಾದ ಹಿನ್ನೆಲೆ ಐಪಿಸಿ ಸೆಕ್ಷನ್ 353, 594,506 ಅನ್ವಯ ಶಿಕ್ಷೆ ನೀಡಲಾಗುತ್ತಿದೆ.

ಇದನ್ನೂ ಓದಿ

ಹಿಜಾಬ್ ವಿಚಾರಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಹುಚ್ಚು ನಾಯಿಯಂತೆ ಕೂಗುತ್ತಿದೆ, ಸಿದ್ದರಾಮಯ್ಯ ತಕ್ಷಣ ರಾಜಕೀಯ ನಿವೃತ್ತಿ ಪಡೆಯಲಿ; ಸಚಿವ ಈಶ್ವರಪ್ಪ ಹೇಳಿಕೆ

ಉಡುಪಿ: ಮಸೀದಿ ರಸ್ತೆಯಲ್ಲಿ ಅತಿಕ್ರಮವಾಗಿ ನಿರ್ಮಿಸಿಕೊಂಡಿದ್ದ ಅಂಗಡಿಗಳ ತೆರವು

Published On - 11:40 am, Sat, 26 March 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ