ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ, ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ, ಇಲ್ಲಿದೆ ವಿವರ
ವೈಯಾಲಿಕಾವಲ್ ಪೊಲೀಸರು ಬೆಲ್ಟ್ ನಿಂದ ಹೊಡೆದು, ಬ್ಯಾಟ್ನಿಂದ ಬಡಿದು ಶೂ ನಿಂದ ಒದ್ದಿದ್ದರು. ಇದರಿಂದ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೊತೆಗೆ ಡೆತ್ ನೋಟ್ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಿದ್ದಾರೆ.
ಬೆಂಗಳೂರು, ಸೆ.20: ವೈಯಾಲಿ ಕಾವಲ್ ಠಾಣೆ(Vyalikaval Police Station) ಪೊಲೀಸರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಡೆತ್ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗರಾಜ್(47) ಮೃತ ರ್ದುದೈವಿ. ಮೃತ ನಾಗರಾಜ್, ಸನಾವುಲ್ಲಾ ಒಡೆತನದ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಕಂಪನಿ ಹಣ ಪಡೆದು ವಂಚಿಸಲಾಗಿದೆ ಎಂದು ನಟರಾಜ್ ಎಂಬಾತ ವೈಯಾಲಿಕಾವಲ್ ಠಾಣೆಯಲ್ಲಿ ದೂರು ನೀಡಿದ್ದ. ಆದರೆ, ಹಲವು ಜನರಿಂದ ಹಣ ಪಡೆದು ವಂಚಿಸಿರುವ ಕಂಪನಿ ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್ನನ್ನು ಕರೆದೊಯ್ದು ಪೊಲೀಸರು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾನೆ.
ಸಾವಿಗೂ ಮುನ್ನ 2 ಪುಟದ ಡೆತ್ನೋಟ್ ಬರೆದಿರುವ ಮೃತ ನಾಗರಾಜ್
ಇನ್ನು ಮೃತ ನಾಗರಾಜ್ ಸಾವಿಗೂ ಮುನ್ನ 2 ಪುಟದ ಡೆತ್ನೋಟ್ ಬರೆದಿದ್ದಾನೆ. ಡೆತ್ನೋಟ್ನಲ್ಲಿ ‘ವೈಯಾಲಿಕಾವಲ್ ಪೊಲೀಸರು ಬೆಲ್ಟ್ ನಿಂದ ಹೊಡೆದು, ಬ್ಯಾಟ್ನಿಂದ ಬಡಿದು ಶೂ ನಿಂದ ಒದ್ದಿದ್ದರು. ಇದರಿಂದ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೊತೆಗೆ ಡೆತ್ ನೋಟ್ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಿದ್ದಾರೆ. ಇನ್ನು ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಬೆಂಗಳೂರು: ಸೋಶಿಯಲ್ ಮೀಡಿಯಾ ಸ್ಟಾರ್ನಿಂದ ವಂಚನೆ; ಸಹೋದರಿಯ ಆತ್ಮಹತ್ಯೆಗೆ ನ್ಯಾಯ ಕೊಡಿಸುವಂತೆ ಗೃಹ ಸಚಿವರಿಗೆ ಪತ್ರ
ವಿದ್ಯಾರ್ಥಿಗಳ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
ಮೈಸೂರು: ವಿದ್ಯಾರ್ಥಿಗಳ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಜೆ.ಪಿನಗರದ ಕಾಲೇಜು ಬಳಿ ನಡೆದಿದೆ. ಕೃಷ್ಣ(17) ಮೃತ ರ್ದುದೈವಿ. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿತ್ತು. ಈ ವೇಳೆ ಸ್ನೇಹಿತನೇ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ಕುರಿತು ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ