Crime News: ಗೆಳತಿಗೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಯತ್ನಿಸಿದ ವಿವಾಹಿತ ವ್ಯಕ್ತಿ

38 ವರ್ಷದ ವಿವಾಹಿತ ವ್ಯಕ್ತಿಯೊಬ್ಬ ತನ್ನ ಗೆಳತಿಗೆ ಗುಂಡು ಹಾರಿಸಿರುವ ಘಟನೆ ದೆಹಲಿಯ ನರೇಲಾದ ಓಯೋ ಹೋಟೆಲ್‌ನಲ್ಲಿ ನಡೆದಿದೆ. ಓಯೋ ಹೋಟೆಲ್‌ ಕೋಣೆಯಲ್ಲಿ ಇಬ್ಬರ ನಡುವೆ ಜಗಳ ನಡೆದಿದೆ, ಕೋಪಗೊಂಡು ತನ್ನ ಗೆಳತಿಗೆ ಗುಂಡು ಹಾರಿಸಿದ್ದಾನೆ. ಆರೋಪಿಯನ್ನು ಪ್ರವೀಣ್ ಅಲಿಯಾಸ್ ಸಿತು ಎಂದು ಹೇಳಲಾಗಿದೆ.

Crime News: ಗೆಳತಿಗೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಯತ್ನಿಸಿದ ವಿವಾಹಿತ ವ್ಯಕ್ತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 23, 2022 | 2:50 PM

ದೆಹಲಿ: 38 ವರ್ಷದ ವಿವಾಹಿತ ವ್ಯಕ್ತಿಯೊಬ್ಬ ತನ್ನ ಗೆಳತಿಗೆ ಗುಂಡು ಹಾರಿಸಿರುವ ಘಟನೆ ದೆಹಲಿ(delhi) ನರೇಲಾದ ಓಯೋ (oyo) ಹೋಟೆಲ್‌ನಲ್ಲಿ ನಡೆದಿದೆ. ಓಯೋ ಹೋಟೆಲ್‌ ಕೋಣೆಯಲ್ಲಿ ಇಬ್ಬರ ನಡುವೆ ಜಗಳ ನಡೆದಿದೆ, ಕೋಪಗೊಂಡು ತನ್ನ ಗೆಳತಿಗೆ ಗುಂಡು ಹಾರಿಸಿದ್ದಾನೆ. ಆರೋಪಿಯನ್ನು ಪ್ರವೀಣ್ ಅಲಿಯಾಸ್ ಸಿತು ಎಂದು ಗುರುತಿಸಲಾಗಿದ್ದು, ಗೆಳತಿಗೆ ಗುಂಡು ಹಾರಿಸಿದ ನಂತರ ತನ್ನ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ. ಆದರೆ ಪ್ರವೀಣ್ ಬದುಕುಳಿದಿದ್ದಾನೆ, ಆತ ಈಗ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಆರೋಪಿ ಮತ್ತು ಆತನ ಗೆಳತಿ ಗೀತಾ ಮಂಗಳವಾರ ಹೋಟೆಲ್​ನಲ್ಲಿ ಉಳಿದುಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೋಟೆಲ್ ಸಿಬ್ಬಂದಿ ಇಂಡಿಯಾ ಟುಡೇ ನೀಡಿದ ಮಾಹಿತಿ ಪ್ರಕಾರ, ಇವರಿಬ್ಬರು ತುಂಬಾ ಜಗಳ ಮಾಡಿಕೊಂಡಿದ್ದರೆ, ಪ್ರವೀಣ್ ಎಂಬ ವ್ಯಕ್ತಿ ಕೋಪದ ಭರದಲ್ಲಿ ತನ್ನ ಗೆಳತಿಯ ಎದೆಗೆ ಗುಂಡು ಹಾರಿಸಿದ್ದಾನೆ. ಆಕೆಯನ್ನು ಕೊಂದ ಬಳಿಕ ತಾನೂ ಕೂಡ ಗಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆರೋಪಿಯ ವಿರುದ್ಧ ಸೆಪ್ಟೆಂಬರ್ 21 ರಂದು ಮತ್ತೊಂದು ಕೊಲೆ ಪ್ರಕರಣದ ಆರೋಪ ಹೊರಿಸಲಾಯಿತು ಆದರೆ ನಂತರ ಜಾಮೀನು ನೀಡಲಾಯಿತು. ಗೌರವ್ ಎಂಬ ವ್ಯಕ್ತಿಗೆ ಗುಂಡು ಹಾರಿಸಿದ್ದು, ಆತನ ತಂದೆ ಪ್ರವೀಣ್ ವಿರುದ್ಧ ದೂರು ನೀಡಿದ ಕಾರಣ ಬಂಧಿಸಲಾಗಿತ್ತು.

ಇದನ್ನು ಓದಿ:ಮತ್ತೆ ಬೆಚ್ಚಿಬಿದ್ದ ದೆಹಲಿ, ಡ್ರಗ್ಸ್ ಸೇವಿಸಿ ತನ್ನ ಮನೆಯ 4 ಮಂದಿಯನ್ನು ಕೊಂದ ಯುವಕ

ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಪೊಲೀಸ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಬಂದಿದ್ದಾರೆ. ಗೀತಾಳನ್ನು ಆಸ್ಪತ್ರೆಗೆ ದಾಖಲಿಸಿದರು ಆಕೆಯನ್ನು ಬದುಕಿಸಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಪ್ರವೀಣ್‌ಗೆ ಸುಶೀಲ ಎಂಬ ಪತ್ನಿ ಇದ್ದು, ಹಳ್ಳಿಯೊಂದರಲ್ಲಿ ಮಕ್ಕಳೊಂದಿಗೆ ವಾಸವಾಗಿದ್ದಾಳೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್