ಶ್ರೀನಿವಾಸಪುರ: ಶಾಲಾ ಕೊಠಡಿಗೆ ನುಗ್ಗಿ ಶಿಕ್ಷಕನ ಮೇಲೆ ಮಾನಸಿಕ ಅಸ್ವಸ್ಥನಿಂದ ಏಕಾಏಕಿ ಹಲ್ಲೆ: ವಿದ್ಯಾರ್ಥಿಗಳು ಆತಂಕ

ಶಾಲಾ ಕೊಠಡಿಗೆ ನುಗ್ಗಿ ಶಿಕ್ಷಕನ ಮೇಲೆ ಮಾನಸಿಕ ಅಸ್ವಸ್ಥನಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೂರಿಗೇಪಲ್ಲಿ ಗ್ರಾಮದಲ್ಲಿ ನಡೆದಿದೆ.

ಶ್ರೀನಿವಾಸಪುರ: ಶಾಲಾ ಕೊಠಡಿಗೆ ನುಗ್ಗಿ ಶಿಕ್ಷಕನ ಮೇಲೆ ಮಾನಸಿಕ ಅಸ್ವಸ್ಥನಿಂದ ಏಕಾಏಕಿ ಹಲ್ಲೆ: ವಿದ್ಯಾರ್ಥಿಗಳು ಆತಂಕ
ಪ್ರಾತಿನಿಧಿಕ ಚಿತ್ರImage Credit source: udayavani.com/
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Dec 28, 2022 | 4:32 PM

ಕೋಲಾರ: ಶಾಲಾ ಕೊಠಡಿಗೆ ನುಗ್ಗಿ ಶಿಕ್ಷಕನ ಮೇಲೆ ಮಾನಸಿಕ ಅಸ್ವಸ್ಥ (mentally challenged) ನಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೂರಿಗೇಪಲ್ಲಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ಶಾಲೆ ಶಿಕ್ಷಕ ವೆಂಕಟಶಿವ ಪಾಠ ಮಾಡುತ್ತಿದ್ದ ವೇಳೆ ಏಕಾಏಕಿ ಹಲ್ಲೆ ಮಾಡಲಾಗಿದೆ. ಕೂರಿಗೇಪಲ್ಲಿ ಗ್ರಾಮದ ಮಾನಸಿಕ ಅಸ್ವಸ್ಥ ಮಂಜುನಾಥನಿಂದ ಕೃತ್ಯವೆಸಗಲಾಗಿದೆ. ಗಾಯಾಳು ಶಿಕ್ಷಕ ವೆಂಕಟಶಿವಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿಲಾಗಿದೆ.  ಮಾನಸಿಕ ಅಸ್ವಸ್ಥ ಮಂಜುನಾಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಂತರ ವಿದ್ಯಾರ್ಥಿಗಳು, ಪೋಷಕರು ಆತಂಕಕ್ಕೀಡಾಗಿದ್ದರು. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ

ಕಲಬುರಗಿ: ನಗರದ ಹೊರವಲಯದಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ಮಾಡಿದ್ದು, 7 ಮೊಬೈಲ್, 1.60 ಲಕ್ಷ ನಗದು ಪತ್ತೆ ಮಾಡಲಾಗಿದೆ. ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಕಲಬುರಗಿ ನಗರ ಪೊಲೀಸ್ ಆಯುಕ್ತರು, ಸಿಬ್ಬಂದಿಯಿಂದ ತಪಾಸಣೆ ಮಾಡಿದ್ದು, ಕೈದಿಗಳ ಬಳಿ ನಗದು ಮತ್ತು ಮೊಬೈಲ್​ಗಳು ಪತ್ತೆಯಾಗಿವೆ ಎನ್ನಲಾಗುತ್ತಿವೆ.

ಇದನ್ನೂ ಓದಿ: ಬೆಂಗಳೂರಲ್ಲಿ 17 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣು, ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸಾವು

ವಿದ್ಯುತ್ ತಂತಿ ತಗುಲಿ ಯುವಕ ಸಾವು

ಯಾದಗಿರಿ: ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಅರಕೇರ ಗ್ರಾಮದಲ್ಲಿ ನಡೆದಿದೆ. ಶರಣು (18) ಮೃತ ಯುವಕ. ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ಘಟನೆ ಸಂಭವಿಸಿದೆ. ವಿದ್ಯುತ್ ತಂತಿ ಹರಿದು ಬಿದ್ದರೋದು ಗಮನಿಸದೆ ಇರೋದ್ದಕ್ಕೆ ದುರಂತ ನಡೆದು ಹೋಗಿದೆ. ಜೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೆ ಯುವಕ ಸಾವಿಗೆ ಕಾರಣ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಣಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಬಸ್​ ಹಾಗೂ ಕಾರ್​​ ನಡುವೆ ಅಪಘಾತ ಸಂಭವಿಸಿ ದಂಪತಿ ಸಾವು

ಹಾವೇರಿ: ಬಸ್​ ಹಾಗೂ ಕಾರ್​​ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟೆ ಕ್ರಾಸ್ ಬಳಿ ನಡೆದಿದೆ. ಕೇರಳ ಮೂಲದ ಮೊಹಮ್ಮದ್‌(68), ಆಯಿಷಾ(60) ಮೃತ ದಂಪತಿಗಳು. ಪತಿ ಮೊಹಮ್ಮದ್‌ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಪತ್ನಿ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ನಿಧನ ಹೊಂದಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ಕಾರಿನಲ್ಲಿ ಕೇರಳದಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹಾನಗಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಪ್ರೇಯಸಿಯ ಬಯಕೆ ತೀರಿಸಲು ಹೋಗಿ ಗೋವಾ ಬೀಚ್‌ನಲ್ಲಿ ಸಿಕ್ಕಿಬಿದ್ದ ಬೆಂಗಳೂರಿನ ಯುವಕ

ಕನ್ಸ್ಟ್ರಕ್ಷನ್ ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು

ಬೆಂಗಳೂರು: ಕನ್ಸ್ಟ್ರಕ್ಷನ್ ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ತಿಗಳರಪಾಳ್ಯದ ಅಪ್ನಾ ಮೆಡಿಕಲ್ ಪ್ರೈವೇಟ್​ ಲಿಮಿಟೆಡ್​ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಕೂಲಿಕಾರ್ಮಿಕ ರಮೇಶ್(32) ಮೃತ ದುರ್ದೈವಿ. ಘಟನೆಯಲ್ಲಿ ಅನ್ಮೋಲ್, ನಿಶ್ಚಿತ್, ಪುನೀತ್, ಪ್ರದೀಪ್​ಗೆ ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ಡಿ.27) ಮಧ್ಯಾಹ್ನ ಮೆಡಿಕಲ್ ವೇರ್​ಹೌಸ್​ನಲ್ಲಿ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರು, ಓಪನ್​ ಲೆಫ್ಟ್​ನಲ್ಲಿ ಔಷಧಿ ಸಾಗಿಸಿ ಕೆಳಕ್ಕೆ ಬರುತ್ತಿದ್ದ ವೇಳೆ ದುರಂತ ಸಂಭವಿಸಿದೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ