ಮಹಾರಾಷ್ಟ್ರದಲ್ಲಿ ತಾಯಿಯ ಎದುರೇ ಅಪ್ರಾಪ್ತ ಮಗಳನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ

ತಾಯಿ ಎದುರೇ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ಬುಧವಾರ ಸಂಜೆ ತನ್ನ ತಾಯಿಯೊಂದಿಗೆ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಬಾಲಕಿಯ ತಾಯಿ ಸಹಾಯಕ್ಕಾಗಿ ಕಿರುಚುತ್ತಿದ್ದಂತೆ ವ್ಯಕ್ತಿಯೊಬ್ಬ ಬಾಲಕಿಯ ಮೇಲೆ ದಾಳಿ ಮಾಡಿ ಕನಿಷ್ಠ ಎಂಟು ಬಾರಿ ಇರಿದಿದ್ದಾನೆ.

ಮಹಾರಾಷ್ಟ್ರದಲ್ಲಿ ತಾಯಿಯ ಎದುರೇ ಅಪ್ರಾಪ್ತ ಮಗಳನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ
ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on:Aug 17, 2023 | 11:03 AM

ತಾಯಿಯ ಎದುರೇ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ಬುಧವಾರ ಸಂಜೆ ತನ್ನ ತಾಯಿಯೊಂದಿಗೆ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಬಾಲಕಿಯ ತಾಯಿ ಸಹಾಯಕ್ಕಾಗಿ ಕಿರುಚುತ್ತಿದ್ದಂತೆ ವ್ಯಕ್ತಿಯೊಬ್ಬ ಬಾಲಕಿಯ ಮೇಲೆ ದಾಳಿ ಮಾಡಿ ಕನಿಷ್ಠ ಎಂಟು ಬಾರಿ ಇರಿದಿದ್ದಾನೆ.

ಸ್ಥಳೀಯರು ದಾಳಿಕೋರನನ್ನು ಸ್ಥಳದಲ್ಲೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಅಪರಾಧದ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ.

ಕಟ್ಟಡದ ಮೆಟ್ಟಿಲುಗಳ ಮೇಲೆ ರಕ್ತದ ಕಲೆಗಳಿದ್ದವು, ಅಪರಾಧಕ್ಕೆ ಬಳಸಿದ್ದ ಬಳಸಿದ್ದ ಚಾಕುವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ. ಬಾಲಕಿ ಟ್ಯೂಷನ್​ನಿಂದ ಮನೆಗೆ ತೆರಳುತ್ತಿದ್ದಳು, ಆರೋಪಿಯನ್ನು ಆದಿತ್ಯ ಕಾಂಬಳೆ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ಹೊರಬಂದ ಮೇಲೆ ಮಾಡಿದ್ದು ಮತ್ತದೇ ಹೇಯ ಕೃತ್ಯ

ಪೊಲೀಸರ ಮಾಹಿತಿ ಪ್ರಕಾರ ಸಂಜೆ ಏಳು ಗಂಟೆಯ ವೇಳೆ ಆರೋಪಿ ಆದಿತ್ಯ ದುರ್ಗಾ ದರ್ಶನ್ ಸೊಸೈಟಿಯ ಆವರಣದಲ್ಲಿ ಕಾಯುತ್ತಿದ್ದ, ಬಾಲಕಿ ಎಷ್ಟು ಗಂಟೆಗೆ ಬರುತ್ತಾಳೆ ಎಂದು ಎಲ್ಲರನ್ನೂ ಕೇಳುತ್ತಿದ್ದ.

ರಾತ್ರಿ 8 ಗಂಟೆ ಸುಮಾರಿಗೆ ಟ್ಯೂಷನ್​ನಿಂದ ವಾಪಸಾಗುತ್ತಿದ್ದಳು, ಆಕೆಯ ಮನೆಯ ಮೆಟ್ಟಿಲುಗಳ ಮೇಲೆ ಆರೋಪಿ ಕೂತಿದ್ದ, ಬಳಿಕ ಅವರು ಬರುವ ಸಂದರ್ಭ ನೋಡಿ ಮರೆಯಲ್ಲಿ ನಿಂತಿದ್ದ ಬಾಲಕಿ ಹಾಗೂ ತಾಯಿ ಮೆಟ್ಟಿಲುಗಳನ್ನು ಏರುತ್ತಿದ್ದಂತೆ ತಾಯಿಯನ್ನು ತಳ್ಳಿ ಮಗಳಿಗೆ ಚಾಕುವಿನಿಂದ 8 ಬಾರಿ ಇರಿದಿದ್ದಾನೆ, ತಕ್ಷಣವೇ ಬಾಲಕಿ ಅಲ್ಲೇ ಕುಸಿದುಬಿದ್ದಿದ್ದಾಳೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:02 am, Thu, 17 August 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್