AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆಯಿಂದ ಲಾರಿ ಚಾಲಕ ನಾಪತ್ತೆ ಪ್ರಕರಣ; ಸ್ಮಶಾನದ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಹೊಳಲ್ಕೆರೆ ಪೊಲೀಸ್ ಠಾಣೆ ಬಳಿಯಿಂದ ನಾಪತ್ತೆಯಾಗಿದ್ದ ಲಾರಿ ಚಾಲಕ ಬಸವಂತಕುಮಾರ್(37) ಸ್ಮಶಾನದ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಪೊಲೀಸ್ ಠಾಣೆಯಿಂದ ಲಾರಿ ಚಾಲಕ ನಾಪತ್ತೆ ಪ್ರಕರಣ; ಸ್ಮಶಾನದ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆ
ಮೃತ ಚಾಲಕ
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 01, 2023 | 9:35 AM

Share

ಚಿತ್ರದುರ್ಗ: ಹೊಳಲ್ಕೆರೆ ಪೊಲೀಸ್ ಠಾಣೆ ಬಳಿಯಿಂದ ನಾಪತ್ತೆಯಾಗಿದ್ದ ಲಾರಿ ಚಾಲಕ ಬಸವಂತಕುಮಾರ್(37) ಸ್ಮಶಾನದ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತ ಬಸವಂತಕುಮಾರ್ ದಾವಣಗೆರೆ(Davanagere) ಜಿಲ್ಲೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ ನಿವಾಸಿಯಾಗಿದ್ದು, ಜೂ.5ರಂದು ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಇತನ ಲಾರಿಯನ್ನ ಹೊಳಲ್ಕೆರೆ ಪೊಲೀಸರು ಜಪ್ತಿ ಮಾಡಿ ಠಾಣೆಗೆ ತಂದಿದ್ದರು. ಬಳಿಕ ದಂಡ ಕಟ್ಟಲು ಹಣವಿಲ್ಲದೆ ರಾತ್ರಿ ಲಾರಿಯಲ್ಲೇ ಮಲಗಿದ್ದ. ಇದಾದ ಮಾರನೇ ದಿನ ಬಸವಂತಕುಮಾರ್ ನಾಪತ್ತೆಯಾಗಿದ್ದ. ಈ ಬಗ್ಗೆ ಕುಟುಂಬಸ್ಥರು ಹೊಳಲ್ಕೆರೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೊಲೀಸ್​ ಠಾಣೆಯಿಂದ ನಾಪತ್ತೆಯಾಗಿದ್ದ ಬಸವಂತಕುಮಾರ್

ಜೂನ್ 5 ರಂದು ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಲಾರಿಯನ್ನ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಸಂಚಾರಿ ಠಾಣೆ ಪೊಲೀಸರು ಜಪ್ತಿ ಮಾಡಿದ್ದರು. ಹಣವಿಲ್ಲದ ಕಾರಣ ರಾತ್ರಿ ಲಾರಿಯಲ್ಲೇ ಮಲಗಿಕೊಂಡಿದ್ದ ಆತ. ಮುಂಜಾನೆ ಠಾಣೆ ಒಳಗಡೆ ಬಂದು, ಬಳಿಕ ನಾಪತ್ತೆಯಾಗಿದ್ದ. ಈ ಕುರಿತು ಆತನ ಸಂಬಂಧಿಕರು ಬಸವಂತಕುಮಾರ್ ಪತ್ತೆಗೆ ಆಗ್ರಹಿಸಿ ಹೊಳಲ್ಕೆರೆ ಠಾಣೆ ಪೊಲೀಸರ ವಿರುದ್ದ ಧರಣಿ ನಡೆಸಿದ್ದು, ಈ ಸಂಬಂಧ ದೂರು ಕೂಡ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಎಸ್ಪಿ ಕೆ.ಪರಶುರಾಮ್ ಸೂಕ್ತ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ:Belagavi News: ರಾತ್ರಿ ಗೆಳೆಯರ ಜೊತೆಗೆ ಹೋದವ, ಬೆಳಗ್ಗೆ ಶವವಾಗಿ ಪತ್ತೆ; ಮುಗಿಲು ಮುಟ್ಟಿದ ಮಗನನ್ನ ಕಳೆದುಕೊಂಡ ತಾಯಿಯ ಗೋಳಾಟ

ನಾಗರಹೊಳೆ ಅಭಯಾರಣ್ಯದಲ್ಲಿ ಹುಲಿ ಚಿರತೆ ಕಾದಾಟ ಚಿರತೆ ಸಾವು

ಮೈಸೂರು: ನಾಗರಹೊಳೆ ಅಭಯಾರಣ್ಯದ ದೊಡ್ಡಹಳ್ಳಿ ಬಳಿ ಚಿರತೆ ಶವ ಪತ್ತೆಯಾಗಿದ್ದು, ಹುಲಿ ಚಿರತೆ ಕಾದಾಟವಾಗಿ ಚಿರತೆ ಸಾವನ್ನಪ್ಪಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದರು. ಹೌದು ಚಿರತೆ ಮೃತದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಹುಲಿ ಜೊತೆ ಕಾದಾಡಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್