ಸ್ನೇಹಿತನಿಂದ ಅಕ್ರಮ ಸಂಬಂಧದ ಬ್ಲ್ಯಾಕ್​ ಮೇಲ್​: 1 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವಕ ಬಲಿ

ಸ್ನೇಹಿತ ಅಂದರೆ ಸಂಬಂಧಿಗಿಂತ ಹೆಚ್ಚು. ಸಂಬಂಧಿಕರ ಬಳಿ ಮಾತ್ರವಲ್ಲದೇ ಅಪ್ಪ-ಅಮ್ಮನ ಜೊತೆ ಹಂಚಿಕೊಳ್ಳದ ಕೆಲ ವಿವಚಾರಗಳನ್ನು ಸ್ನೇಹಿತರ ಬಳಿ ಹೇಳಿಕೊಳ್ಳುತ್ತಾರೆ. ಆದ್ರೆ, ಇಲ್ಲೋರ್ವ ದ್ರೋಹಿ ಅದನ್ನೇ ಬಂಡವಾಳ ಮಾಡಿಕೊಂಡು ಸ್ನೇಹಿತ ಪರ್ಸನಲ್​ ವಿಚಾರವನ್ನು ಇಟ್ಟುಕೊಂಡು ಬ್ಲ್ಯಾಕ್​ ಮೇಲ್​ ಮಾಡಿ ಲಕ್ಷ ಲಕ್ಷಣ ಹಣ ಪೀಕಿದ್ದಾನೆ. ಕೊನೆಗೆ ಗೆಳೆಯನ ಜೀವವನ್ನೇ ಬಲಿ ಪಡೆದುಕೊಂಡಿದ್ದಾನೆ.

ಸ್ನೇಹಿತನಿಂದ ಅಕ್ರಮ ಸಂಬಂಧದ ಬ್ಲ್ಯಾಕ್​ ಮೇಲ್​: 1 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವಕ ಬಲಿ
ಆತ್ಮಹತ್ಯೆ ಮಾಡಿಕೊಂಡ ಸತೋಷ್
Edited By:

Updated on: Nov 30, 2023 | 3:02 PM

ಚಾಮರಾಜನಗರ, (ನವೆಂಬರ್ 30): ಒಂದು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿದ್ದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕು ಕಜ್ಜಿಹುಂಡಿ ಗ್ರಾಮದಲ್ಲಿ ನಡೆದಿದೆ. ಸಂತೋಷ್ (28) ಆತ್ಮಹತ್ಯೆಗೆ ಶರಣಾದ ಯುವಕ. ಪರಸ್ತ್ರೀ ಸಂಬಂಧ ಬಹಿರಂಗಪಡಿಸುತ್ತೇನೆಂದು ಮೃತ ಸ್ನೇಹಿತನೋರ್ವ ಹಣಕ್ಕಾಗಿ ಬ್ಲ್ಕ್ಯಾಕ್ ಮೇಲ್​ ಮಾಡಿದ್ದು, ಇದರಿಂದ ಮನನೊಂದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಸ್ನೇಹಿತ ರವಿ ಎನ್ನುವಾತ ಪರಸ್ತ್ರೀ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿರುವ ಬಗ್ಗೆ ಎಲ್ಲರಿಗೂ ತಿಳಿಸುತ್ತೇನೆಂದು ಹಣಕ್ಕಾಗಿ ಸಂತೋಷ್​ಗೆ ಬ್ಲ್ಯಾಕ್‌ಮೇಲ್ ಮಾಡಿದ್ದ. ಅಲ್ಲದೇ ಬೆದರಿಸಿ 2 ಲಕ್ಷ ರೂ. ವಸೂಲಿ ಮಾಡಿದ್ದ. ಆದರೂ ಸಮ್ಮನಾಗದ ರವಿ, ಇನ್ನಷ್ಟು ಹಣ ಬೇಕೆಂದು ಮತ್ತೆ ಮತ್ತೆ ಬ್ಲ್ಯಾಕ್​ ಮೇಲ್​ ಮಾಡಿದ್ದಾನೆ. ಇದರಿಂದ ಮನನೊಂದು ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
Loading...
Unable to load recommendations.
Follow Us